ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮವಾಗಿ ಧಾರಾಕಾರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಾಳೆ (ಡಿಸೆಂಬರ್ 3) ಮತ್ತು ಡಿಸೆಂಬರ್ 4ರಂದು ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರೀ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಕಂಟ್ರೋಲ್ ರೂಂ ತೆರೆದಿದೆ. ಸಹಾಯಕ್ಕಾಗಿ ಕಂಟ್ರೋಲ್ ರೂಂ ನಂಬರ್ 08262 238950ಗೆ ಕರೆ ಮಾಡುವಂತೆ ಸೂಚನೆ ನೀಡಲಾಗಿದೆ.
ಕಾಫಿನಾಡಿನಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮವಾಗಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಾಳೆ ಒಂದು ದಿನ ರಜೆ ಘೋಷಣೆ ಮಾಡಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಡಿಸೆಂಬರ್ 3ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ನದಿ, ತಗ್ಗು ಪ್ರದೇಶಗಳಿಗೆ ತೆರಳದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಗುಡ್ಡ, ಇಳಿಜಾರು ಪ್ರದೇಶಗಳ ಜನರು ಜಾಗೃತರಾಗಿರುವಂತೆ ಸೂಚನೆ ನೀಡಿದೆ. ಈ ಬಗ್ಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸೂಚನೆ ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ವಿಪರೀತ ಚಳಿ ಉಂಟಾಗಿದ್ದು, ತುಂತುರು ಮಳೆಯಾಗುತ್ತಿದೆ. ವಿಪರೀತ ಚಳಿಗೆ ಚಿಕ್ಕಮಗಳೂರಿನ ಜನ ಕಂಗಾಲಾಗಿದ್ದಾರೆ.
ಇದನ್ನೂ ಓದಿ: Mangaluru Rains: ಫೆಂಗಲ್ ಚಂಡಮಾರುತದ ಆರ್ಭಟ; ದಕ್ಷಿಣ ಕನ್ನಡ, ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ
ಚಂಡಮಾರುತದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಮಾತ್ರವಲ್ಲದೆ ಹಾಸನ, ದಕ್ಷಿಣ ಕನ್ನಡ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ಉಡುಪಿ, ದಕ್ಷಿಣ ಕನ್ನಡದಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:27 pm, Mon, 2 December 24