AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಸರ್ಕಾರಿ ಶಾಲೆಗೆ 2.18 ಕೋಟಿ ರೂ. ದೇಣಿಗೆ ನೀಡಿದ ಕಾಫಿ ಉದ್ಯಮಿ!

ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಸರ್ಕಾರಿ ಶಾಲೆಗೆ ಕಾಫಿ ರಫ್ತುದಾರ ಸಂತೋಷ್ 2.18 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಅವರ ಮಗ ಈ ಶಾಲೆಯಲ್ಲೇ ಓದುತ್ತಿದ್ದಾನೆ. ಈ ದೇಣಿಗೆಯಿಂದ ಹೊಸ ತರಗತಿ ಕೊಠಡಿಗಳು, ಸಭಾಂಗಣ ಮತ್ತು ಇತರ ಸೌಲಭ್ಯಗಳ ನಿರ್ಮಾಣವಾಗಿದೆ. ಇತರ ಹಳೆ ವಿದ್ಯಾರ್ಥಿಗಳೂ ಶಾಲೆಗೆ ಸಹಾಯ ಮಾಡುತ್ತಿದ್ದು, ಇದರಿಂದ ಶಾಲೆಯು ರಾಜ್ಯದಲ್ಲೇ ಮಾದರಿಯಾಗಿ ಗುರುತಿಸಿಕೊಳ್ಳುವಂತಾಗಿದೆ.

ಚಿಕ್ಕಮಗಳೂರು: ಸರ್ಕಾರಿ ಶಾಲೆಗೆ 2.18 ಕೋಟಿ ರೂ. ದೇಣಿಗೆ ನೀಡಿದ ಕಾಫಿ ಉದ್ಯಮಿ!
ಸಾಂದರ್ಭಿಕ ಚಿತ್ರ
Ganapathi Sharma
|

Updated on:Feb 25, 2025 | 9:22 AM

Share

ಚಿಕ್ಕಮಗಳೂರು, ಫೆಬ್ರವರಿ 25: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಕಾಫಿ ಉದ್ಯಮಿಯೊಬ್ಬರು ಸರ್ಕಾರಿ ಶಾಲೆಯೊಂಕ್ಕೆ ಬರೋಬ್ಬರಿ 2.18 ಕೋಟಿ ರೂ. ದೇಣಿಗೆ ನೀಡಿರುವ ಬಗ್ಗೆ ವರದಿಯಾಗಿದೆ. ವಿಶೇಷವೆಂದರೆ, ಆ ಉದ್ಯಮಿ ತನ್ನ ಮಗನನ್ನೂ ಅದೇ ಸರ್ಕಾರಿ ಶಾಲೆಯಲ್ಲಿ ಓದಿಸುತ್ತಿದ್ದಾರೆ. ಮುದ್ರೆಮನೆ ಕಾಫಿ ಕ್ಯೂರಿಂಗ್ ಘಟಕದ ಮಾಲೀಕರಾದ ಸಂತೋಷ್, ಸರ್ಕಾರಿ ಶಾಲೆಯಲ್ಲಿ ಓದಿ, ನಂತರ ಕಾಫಿ ಉದ್ಯಮದಲ್ಲಿ ಸಾಧನೆ ಮಾಡಿದ್ದಾರೆ. ಸದ್ಯ ಅವರು ಕಾಫಿ ರಫ್ತು ಉದ್ಯಮ ನಡೆಸುತ್ತಿದ್ದಾರೆ.

ಸಂತೋಷ್ ಮುತ್ತಿಗೆಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 2.18 ಕೋಟಿ ರೂ. ದೇಣಿಗೆ ನೀಡಿದ್ದಾರೆ. 1973 ರಲ್ಲಿ ಸ್ಥಾಪನೆಯಾದ ಈ ಶಾಲೆಯಲ್ಲಿ ಪ್ರಸ್ತುತ 363 ವಿದ್ಯಾರ್ಥಿಗಳು ಇದ್ದಾರೆ ಎಂದು ‘ಡೆಕ್ಕನ್ ಹೆರಾಲ್ಡ್’ ವರದ ತಿಳಿಸಿದೆ. ಸಂತೋಷ್ ಅವರ ದೇಣಿಗೆಯ ನೆರವಿನಿಂದ ಶಾಲೆಯಲ್ಲಿ ಎಂಟು ಸುಸಜ್ಜಿತ ತರಗತಿ ಕೊಠಡಿಗಳನ್ನು ನಿರ್ಮಿಸಲಾಗಿದೆ. 18 ಲಕ್ಷ ರೂ. ವೆಚ್ಚದಲ್ಲಿ ಸಭಾಂಗಣವನ್ನು ನಿರ್ಮಿಸಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

ದೇಣಿಗೆಯ ನೆರವಿನಿಂದ ‘ವಿವೇಕ ಯೋಜನೆಯ’ಡಿಯಲ್ಲಿ 56 ಲಕ್ಷ ರೂ. ವೆಚ್ಚದಲ್ಲಿ ನಾಲ್ಕು ಹೆಚ್ಚುವರಿ ತರಗತಿ ಕೊಠಡಿಗಳನ್ನು ಸೇರಿಸಲಾಗಿದೆ. ಫೆಬ್ರವರಿ 28 ರಂದು ಒಟ್ಟು 12 ತರಗತಿ ಕೊಠಡಿಗಳನ್ನು ಉದ್ಘಾಟಿಸಲಾಗುವುದು ಎಂದು ವರದಿ ತಿಳಿಸಿದೆ.

ಸೌದಿ ಅರೇಬಿಯಾದಲ್ಲಿರುವ ಉದ್ಯಮಿಯಿಂದಲೂ ದೇಣಿಗೆ

ಅಂದಹಾಗೆ, ಮುತ್ತಿಗೆಪುರದ ಈ ಶಾಲೆಗೆ ಅನೇಕ ದಾನಿಗಳಿಂದ ದೇಣಿಗೆಗಳು ಹರಿದು ಬರುತ್ತಿವೆ. ಸೌದಿ ಅರೇಬಿಯಾದಲ್ಲಿ ನೆಲೆಸಿರುವ ಈ ಗ್ರಾಮದ ಉದ್ಯಮಿ ಸಿದ್ದಿಕ್, ಶಾಲೆಗೆ 60,000 ರೂ. ಮೌಲ್ಯದ ಶುದ್ಧೀಕರಿಸಿದ ಕುಡಿಯುವ ನೀರಿನ ಘಟಕವನ್ನು ದಾನ ಮಾಡಿದ್ದಾರೆ. ಶಾರ್ಲಿನ್ ವಿಲಿಯಮ್ಸ್ ಎಂಬ ಕಂಪನಿಯು 18 ಲಕ್ಷ ರೂ. ಮೌಲ್ಯದ ಪೀಠೋಪಕರಣಗಳನ್ನು ನೀಡಿದೆ. ಯೂತ್ ಫಾರ್ ಸೇವಾ ಸಂಸ್ಥೆಯು ಎಂಟು ಕಂಪ್ಯೂಟರ್‌ಗಳು ಮತ್ತು ಅವುಗಳ ಬಳಕೆಗೆ ಅಗತ್ಯವಿರುವ ಟೇಬಲ್‌ಗಳನ್ನು ಒದಗಿಸಿದೆ. ಶಾಲಾ ಆವರಣ ಮತ್ತು ತರಗತಿ ಕೊಠಡಿಗಳಲ್ಲಿ 20 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ದಾನಿಗಳು ಮುಂದೆ ಬಂದಿದ್ದಾರೆ. ಮಧ್ಯಾಹ್ನದ ಊಟ ತಯಾರಿಗಾಗಿ 5 ಲಕ್ಷ ರೂ. ವೆಚ್ಚದಲ್ಲಿ ಹೈಟೆಕ್ ಅಡುಗೆಮನೆಯನ್ನು ನಿರ್ಮಿಸಲು ಸಹ ದೇಣಿಗೆ ನೀಡಲಾಗಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಕರ್ನಾಟಕ ಬಜೆಟ್: ಸಿಎಂ ಸಿದ್ದರಾಮಯ್ಯ ಬಳಿ 6 ಬೇಡಿಕೆಗಳನ್ನಿಟ್ಟ ಸ್ವಾಮೀಜಿಗಳ ನಿಯೋಗ

ಶಾಲೆಯು ರಾಜ್ಯದಲ್ಲೇ ಮಾದರಿಯಾಗುತ್ತಿದ್ದು, ದಾನಿಗಳು ಶಾಲೆಗೆ ಬೆಂಬಲ ನೀಡುತ್ತಿದ್ದಾರೆ ಎಂದು ಎಸ್‌ಡಿಎಂಸಿ ಅಧ್ಯಕ್ಷ ಮಧುಕುಮಾರ್ ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:14 am, Tue, 25 February 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್