ಕೇದಾರನಾಥ ಯಾತ್ರೆಗೆ ತೆರಳಿದ್ದ ಚಿಕ್ಕಮಗಳೂರು ಮೂಲದ ಯುವಕ ಸಾವು
ಕೇದಾರನಾಥ ಯಾತ್ರೆಗೆ ತೆರಳಿದ್ದ ಚಿಕ್ಕಮಗಳೂರು ಮೂಲದ ಯುವಕರೊಬ್ಬರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಕೇದಾರನಾಥ ಪೊಲೀಸರು ಮೃತ ಯುವಕನ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ.
ಚಿಕ್ಕಮಗಳೂರು, ಜುಲೈ 31: ಕರ್ನಾಟಕದಿಂದ ಕೇದಾರನಾಥ ಯಾತ್ರೆಗೆ (Kedarnath Yatra) ತೆರಳಿದ್ದ ಚಿಕ್ಕಮಗಳೂರು (Chikkamagaluru) ಮೂಲದ ಯುವಕರೊಬ್ಬರು ಸಾವನ್ನಪ್ಪಿದ್ದಾರೆ. ಮೂಡಿಗೆರೆ ತಾಲೂಕಿನ ಜನ್ನಾಪುರ ಗ್ರಾಮದ ಗಿರೀಶ್ ( 25) ಮೃತಪಟ್ಟ ಯುವಕ. ಕೇದಾರನಾಥದಲ್ಲಿ ಅಸ್ವಸ್ಥಗೊಂಡು ಸಾವನ್ನಪ್ಪಿರುವ ಗಿರೀಶ್ ಅವರ ಮೃತ ದೇಹವನ್ನು ರಿಷಿಕೇಶ್ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಇಡಲಾಗಿದೆ.
ಕರ್ನಾಟಕದಿಂದ ನೂರಾರು ಸಂಖ್ಯೆಯಲ್ಲಿ ಕೇದಾರನಾಥ ಯಾತ್ರೆಗೆ ತೆರಳಿದ್ದಾರೆ. ಅದರಂತೆ, ಕಳೆದ ವಾರ ಗಿರೀಶ್ ಅವರು ಕೂಡ ಮೂಡಿಗೆರೆಯಿಂದ ಯಾತ್ರೆ ಕೈಗೊಂಡಿದ್ದರು. ಆದರೆ ಅಲ್ಲಿ ಅಸ್ವಸ್ಥಗೊಂಡು ಗಿರೀಶ್ ಮೃತಪಟ್ಟಿದ್ದಾರೆ. ಈ ಬಗ್ಗೆ ಕೇದಾರನಾಥ ಪೊಲೀಸರು ಗಿರೀಶ್ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:39 pm, Mon, 31 July 23