AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಮಹಿಳೆಗೆ ವಕ್ಕರಿಸಿದ ಮಂಗನ ಕಾಯಿಲೆ; 9ಕ್ಕೆ ಏರಿದ ಪ್ರಕರಣಗಳ ಸಂಖ್ಯೆ

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆ ಭೀತಿ ಹಾಗೂ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚುತ್ತಲೇ ಇದೆ. ಇದೀಗ ಮತ್ತೊಬ್ಬ ವ್ಯಕ್ತಿಯಲ್ಲಿ ಮಂಗನ ಕಾಯಿಲೆ ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ದೃಢಪಟ್ಟ ಮಂಗನ ಕಾಯಿಲೆ ಪ್ರಕರಣಗಳ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ಚಿಕ್ಕಮಗಳೂರು: ಮಹಿಳೆಗೆ ವಕ್ಕರಿಸಿದ ಮಂಗನ ಕಾಯಿಲೆ; 9ಕ್ಕೆ ಏರಿದ ಪ್ರಕರಣಗಳ ಸಂಖ್ಯೆ
ಚಿಕ್ಕಮಗಳೂರು: ಮಹಿಳೆಗೆ ವಕ್ಕರಿಸಿದ ಮಂಗನ ಕಾಯಿಲೆ; 9ಕ್ಕೆ ಏರಿದ ಪ್ರಕರಣಗಳ ಸಂಖ್ಯೆ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: Rakesh Nayak Manchi|

Updated on: Feb 08, 2024 | 9:03 AM

Share

ಚಿಕ್ಕಮಗಳೂರು, ಫೆ.8: ಜಿಲ್ಲೆಯಲ್ಲಿ ಮಂಗನ ಕಾಯಿಲೆ (Monkey disease) ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದ್ದು, ಇದೀಗ ಮತ್ತೊಂದು ಪ್ರಕರಣ ದಾಖಲಾಗಿದೆ. ತಪಾಸಣೆಗೆ ಒಳಪಡಿಸಿದ ಏಳು ಜನರ ಪೈಕಿ 55 ವರ್ಷದ ಮಹಿಳೆಗೆ ಮಂಗನ ಕಾಯಿಲೆ ಸೋಂಕು ವಕ್ಕರಿಸಿರುವುದು ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣಗಳ ಒಟ್ಟು ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಒಂಬತ್ತು ಮಂಗನ ಕಾಯಿಲೆ ಪ್ರಕರಣಗಳ ಪೈಕಿ ಒಬ್ಬ ಸೋಂಕಿತ ಸಾವನ್ನಪ್ಪಿದ್ದು, ನಾಲ್ವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ, ನಾಲ್ಕು ಸಕ್ರಿಯ ಪ್ರಕರಣಗಳಿಗೆ ಕೊಪ್ಪ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಇದನ್ನೂ ಓದಿ: Monkeypox: ಮಲೆನಾಡಿನಲ್ಲಿ ಹೆಚ್ಚುತ್ತಲೇ ಇದೆ ಮಂಗನ ಕಾಯಿಲೆ; ಮಂಕಿಪಾಕ್ಸ್ ಲಕ್ಷಣಗಳಿವು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಪತ್ತೆಯಾದ ಮಂಗನ ಕಾಯಿಲೆ ಪ್ರಕರಣಗಳಲ್ಲಿ ಅತಿ ಹೆಚ್ಚು ಪ್ರಕರಣಗಳು ಒಎಲ್‌ವಿ ಎಸ್ಟೇಟ್ ಭಾಗದಲ್ಲಿ ಪತ್ತೆಯಾಗಿದೆ. ಈ ಒಎಲ್​ವಿ ಎಸ್ಟೇಟ್ ಕೊಪ್ಪ ತಾಲೂಕಿನಲ್ಲಿ ಇದೆ. ಹೀಗಾಗಿ ಆರೋಗ್ಯ ಇಲಾಖೆಯು ತಾಲೂಕಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಕೆಎಫ್​ಡಿ ವಾರ್ಡ್ ತೆರೆದಿದೆ.

ಕೆಎಫ್​ಡಿ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಿನ ಮೂರು ತಾಲೂಕುಗಳಲ್ಲಿ ಆತಂಕ ಸೃಷ್ಟಿಸಿದೆ. ಶಿವಮೊಗ್ಗ-ಉತ್ತರಕನ್ನಡಕ್ಕೆ ಹೊಂದಿಕೊಂಡಂತಿರುವ ಕಾಫಿನಾಡ ಮಲೆನಾಡು ಭಾಗದಲ್ಲಿ ಪ್ರತಿ ವರ್ಷ KFD ಸೋಂಕಿನ ಆತಂಕ ಇದ್ದೇ ಇರುತ್ತದೆ.

ಮಂಗನ ಕಾಯಿಲೆ ಹೆಚ್ಚುತ್ತಿರುವ ಹಾಗೂ ಸೋಂಕಿಗೆ ವೃದ್ಧ ಬಲಿಯಾದ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲಾದ್ಯಂತ ಆರೋಗ್ಯ ಇಲಾಖೆ (Health Departmnet) ಹೈಅಲರ್ಟ್ ಆಗಿದೆ. ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಅಧಿಕಾರಿಗಳು KFD (Kyasanur Forest Disease) ವಾರ್ಡ್ ತೆರೆದಿದೆ. ಅರಣ್ಯದಲ್ಲಿ ಕೆಎಫ್​ಡಿ ಸೋಂಕು ಹರಡದಂತೆ ಔಷಧಿ ಸಿಂಪಡಣೆ ಮಾಡಲಾಗುತ್ತಿದೆ. ಆರೋಗ್ಯ ಸಿಬ್ಬಂದಿ ಮನೆ ಮನೆಗೆ ತೆರಳಿ ಔಷಧಿ ವಿತರಣೆ ಮಾಡುತ್ತಿದ್ದಾರೆ. ಗ್ರಾಮದಲ್ಲಿ ಮೃತಪಟ್ಟಿರುವ ಮಂಗಗಳ ರಕ್ತದ ಮಾದರಿಯನ್ನು ಸಂಗ್ರಹಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashwith Mavinaguni
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ