AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊರಾರ್ಜಿ‌ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಸಾವು: ನಿವೃತ್ತ ಜಡ್ಜ್​​ ನೇತೃತ್ವದಲ್ಲಿ ತನಿಖೆಗೆ ಆದೇಶ

ಕೊಪ್ಪದ ಮೊರಾರ್ಜಿ ವಸತಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದೆ. ಶಾಲಾ ಮುಖ್ಯೋಪಾಧ್ಯಾಯಿನಿ ಮತ್ತು ವಾರ್ಡನ್ ಅವರನ್ನು ಅಮಾನತುಗೊಳಿಸಲಾಗಿದೆ. ಎರಡು ಆತ್ಮಹತ್ಯೆಗಳು ಒಂದೇ ರೀತಿಯಲ್ಲಿ ನಡೆದಿರುವುದು ಅನುಮಾನಕ್ಕೆ ಕಾರಣವಾಗಿದೆ. ಪೋಷಕರು ಸಿಸಿಟಿವಿ ಅಳವಡಿಸುವಂತೆ ಒತ್ತಾಯಿಸುತ್ತಿದ್ದಾರೆ.

ಮೊರಾರ್ಜಿ‌ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಸಾವು: ನಿವೃತ್ತ ಜಡ್ಜ್​​ ನೇತೃತ್ವದಲ್ಲಿ ತನಿಖೆಗೆ ಆದೇಶ
ಮೃತ ವಿದ್ಯಾರ್ಥಿನಿ ಶಮಿತಾ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ವಿವೇಕ ಬಿರಾದಾರ|

Updated on:Jul 09, 2025 | 6:42 PM

Share

ಚಿಕ್ಕಮಗಳೂರು, ಜುಲೈ 09: ಕೊಪ್ಪ (Koppa) ಪಟ್ಟಣದಲ್ಲಿನ ಮೊರಾರ್ಜಿ ವಸತಿ ಶಾಲೆಯಲ್ಲಿ (Morarji Residential School) 9ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣವನ್ನು ನಿವೃತ್ತ ನ್ಯಾಯಾಧೀಶೆ ಶೋಭಾ ನೇತೃತ್ವದಲ್ಲಿ ತನಿಖೆ ನಡೆಸಲು ಸರ್ಕಾರ ಆದೇಶಿಸಿದೆ.

ಇಬ್ಬರು ಅಮಾನತು

ವಸತಿ ಶಾಲೆಯ ಪ್ರಾಂಶುಪಾಲೆ ಹಾಗೂ ವಸತಿ ನಿಲಯದ ವಾರ್ಡನ್​ನನ್ನು ಸರ್ಕಾರ ಅಮಾನತು ಮಾಡಿದೆ. ಪ್ರಾಂಶುಪಾಲೆ ರಜನಿ ಮತ್ತು ವಾರ್ಡನ್ ಸುಂದರ್ ನಾಯಕ್ ಅವರನ್ನು ಅಮಾನತು ಮಾಡಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ಕ್ರೈಸ್​)ದ ಕಾರ್ಯನಿರ್ವಾಹಕ ನಿರ್ದೇಶಕ ಕಾಂತರಾಜು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ASI ಕಿರುಕುಳ ಆರೋಪ: ಎಸ್​ಪಿ ಕಚೇರಿ ಎದುರು ವಿಷಸೇವಿಸಿದ ವ್ಯಕ್ತಿ

ಇದನ್ನೂ ಓದಿ
Image
ಎಲೆ ಜತೆಗೆ ಅಡಿಕೆ ತಿಂದು ಉಗಿಯುವವರು ಈ ಸುದ್ದಿ ಓದಲೇಬೇಕು..!
Image
ಜಾಮೀನು ವಿಚಾರವಾಗಿ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಮಹತ್ವದ ಸೂಚನೆ
Image
ಪಾಠ ಕೇಳುವಾಗಲೇ ಹೃದಯಾಘಾತದಿಂದ ಮೃತಪಟ್ಟ 4ನೇ ತರಗತಿ ವಿದ್ಯಾರ್ಥಿ
Image
ಫಾರೆಸ್ಟ್ ಗಾರ್ಡ್ ಬೆತ್ತಲೆ ಸ್ಥಿತಿಯಲ್ಲಿ ಶವ ಪತ್ತೆ: ಸಾವಿನ ಸುತ್ತ ಅನುಮಾನ

ಏನಿದು ಪ್ರಕರಣ?

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಬೊಮ್ಲಾಪುರ ಸಮೀಪದ ಹೊಕ್ಕಳಿಕೆ ಗ್ರಾಮದ ಶಮಿತಾ ಎಂಬುವರು ಕೊಪ್ಪದ ಮೊರಾರ್ಜಿ ವಸತಿ ಶಾಲೆಯಲ್ಲಿ 9 ತರಗತಿ ಓದುತ್ತಿದ್ದರು. ವಿದ್ಯಾರ್ಥಿನಿ ಶಮಿತಾ 2025ರ ಜೂನ್ 29ರಂದು ಶಾಲೆಯ ಶೌಚಾಲಯದಲ್ಲಿ ವೇಲ್​ನಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ರಾತ್ರಿ ಮಲಗುವವರೆಗೂ ಸ್ನೇಹಿತರ ಜೊತೆ ಖುಷಿ ಖುಷಿಯಾಗಿ ಮಾತನಾಡಿದ್ದ ಶಮಿತಾ ಬೆಳಗಾಗುವಷ್ಟರಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.

ಇಂತಹದ್ದೇ ಪ್ರಕರಣ 2023ರಲ್ಲಿ ಇದೇ ವಸತಿ ನಿಲಯದಲ್ಲಿ ನಡೆದಿತ್ತು. 2023 ಜುಲೈ 27ರಂದು ವಿದ್ಯಾರ್ಥಿನಿ ಅಮುಲ್ಯ ವಸತಿ ಶಾಲೆಯ ಬಾತ್​ರೂಂನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಇಬ್ಬರೂ ವಿದ್ಯಾರ್ಥಿನಿಯರು ಒಂದೇ ಸ್ಥಳದಲ್ಲಿ, ಒಂದೇ ಕಬ್ಬಿಣಕ್ಕೆ, ಒಂದೇ ಶೈಲಿಯಲ್ಲಿ ನೇಣು ಹಾಕಿಕೊಂಡಿದ್ದರು. ಇದು ವಿದ್ಯಾರ್ಥಿನಿಯರ ಪೋಷಕರಲ್ಲಿ ಮತ್ತು ಸಾರ್ಜನಿಕರಲ್ಲಿ ಅನುಮಾನ ಹುಟ್ಟುಹಾಕಿತ್ತು. ಈ ಹಿನ್ನೆಲೆಯಲ್ಲಿ ಪೋಷಕರು ಸೂಕ್ತ ತನಿಖೆಗೆ ಒತ್ತಾಯಿಸಿದ್ದಾರೆ. ವಿದ್ಯಾರ್ಥಿನಿಯರ ಹಿತದೃಷ್ಟಿಯಿಂದ ವಸತಿ ಶಾಲೆಯಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸುವಂತೆ ಅಗ್ರಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:35 pm, Wed, 9 July 25