ಕೊಟ್ಟಿಗೆಹಾರ ಬಳಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ದುರ್ಮರಣ, ಇಬ್ಬರಿಗೆ ಗಂಭೀರ ಗಾಯ

Kottigehara Accident: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಸಿಲಿಂಡರ್ ತುಂಬಿದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಹಾಸನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ತುಮಕೂರು ಜಿಲ್ಲೆಯ ಗುಬ್ಬಿ ಮೂಲದವರಾಗಿದ್ದಾರೆ.

ಕೊಟ್ಟಿಗೆಹಾರ ಬಳಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ದುರ್ಮರಣ, ಇಬ್ಬರಿಗೆ ಗಂಭೀರ ಗಾಯ
ಅಪಘಾತದ ರಭಸಕ್ಕೆ ನುಜ್ಜುಗುಜ್ಜಾಗಿರುವ ಕಾರು
Image Credit source: tv9
Edited By:

Updated on: Aug 08, 2026 | 6:57 AM

ಮುಖ್ಯಾಂಶಗಳು

  • ರಸ್ತೆ ಬದಿಯಲ್ಲಿ ನಿಂತಿದ್ದ ಸಿಲಿಂಡರ್ ತುಂಬಿದ ಲಾರಿಗೆ ಕಾರು ಡಿಕ್ಕಿ
  • ಮೂವರು ಸ್ಥಳದಲ್ಲೇ ಸಾವು
  • ಮೃತರು ತುಮಕೂರಿನ ಗುಬ್ಬಿ ಮೂಲದವರು

ಚಿಕ್ಕಮಗಳೂರು, ಆಗಸ್ಟ್ 8: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ (Mudigere) ತಾಲೂಕಿನ ಕೊಟ್ಟಿಗೆಹಾರ (Kottigehara) ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹಾಸನ (Hassan) ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಟ್ಟಿಗೆಹಾರದಲ್ಲಿ ಪೆಟ್ರೋಲ್ ಬಂಕ್ ಮುಂಭಾಗ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಸಿಲಿಂಡರ್ ತುಂಬಿದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಗುರುಕಿರಣ್ (28), ಮೋಹನ್ (30) ಹಾಗೂ ಜ್ಞಾನೇಶ್ (28) ಎಂದು ಗುರುತಿಸಲಾಗಿದೆ. ಇನ್ನು ಕಾರಿನಲ್ಲಿದ್ದ ಪ್ರೇಮ್ ಕುಮಾರ್ ಮತ್ತು ಹೃತಿಕ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಹಾಸನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರು ತುಮಕೂರು ಜಿಲ್ಲೆಯ ಗುಬ್ಬಿ ಮೂಲದವರು ಎಂದು ತಿಳಿದುಬಂದಿದೆ. ಸಂತ್ರಸ್ತರು ತುಮಕೂರಿನಿಂದ ಧರ್ಮಸ್ಥಳಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಘಟನೆ ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:26 am, Sat, 8 August 26

Loading...
Unable to load recommendations.
Follow Us