ಕುಕ್ಕರ್ ಬಾಂಬ್ ಸ್ಫೋಟದ ಉಗ್ರ ಶಾರಿಕ್​ಗಿಂತ ಸಿ.ಟಿ.ರವಿ ಒಂದು ಕೈಮೇಲು: ಸಚಿನ್ ಮೀಗಾ

ಸಿಟಿ ರವಿ ರಾಜಕಾರಣದಲ್ಲಿ ಮಾಸ್ಟರ್ ಮೈಂಡ್ ಉಗ್ರ. ಅಲ್ಲದೆ, ಕುಕ್ಕರ್ ಬಾಂಬ್ ಸ್ಫೋಟ ಉಗ್ರ ಶಾರಿಕ್​ಗಿಂತ ಒಂದು ಕೈಮೇಲು ಎಂದು ಹೇಳುವ ಮೂಲಕ ಕೆಪಿಸಿಸಿ ಕಿಸಾನ್ ಘಟಕದ ಅಧ್ಯಕ್ಷ ಸಚಿನ್ ಮೀಗಾ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ಕುಕ್ಕರ್ ಬಾಂಬ್ ಸ್ಫೋಟದ ಉಗ್ರ ಶಾರಿಕ್​ಗಿಂತ ಸಿ.ಟಿ.ರವಿ ಒಂದು ಕೈಮೇಲು: ಸಚಿನ್ ಮೀಗಾ
ಸಚಿನ್ ಮೀಗಾ ಮತ್ತು ಸಿ.ಟಿ. ರವಿ
Edited By: Rakesh Nayak Manchi

Updated on: Aug 15, 2023 | 10:03 PM

ಚಿಕ್ಕಮಗಳೂರು, ಆಗಸ್ಟ್ 15: ಕುಕ್ಕರ್ ಬಾಂಬ್ ಸ್ಫೋಟ ಉಗ್ರ ಶಾರಿಕ್​ಗಿಂತ ಸಿ.ಟಿ.ರವಿ (C.T.Ravi) ಒಂದು ಕೈಮೇಲು ಎಂದು ಹೇಳುವ ಮೂಲಕ ಕೆಪಿಸಿಸಿ ಕಿಸಾನ್ ಘಟಕದ ಅಧ್ಯಕ್ಷ ಸಚಿನ್ ಮೀಗಾ (Sachin Meega) ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ಮಾತನಾಡಿದ ಅವರು, ರಾಜಕಾರಣದಲ್ಲಿ ಮಾಸ್ಟರ್ ಮೈಂಡ್ ಉಗ್ರ ಇದ್ದರೆ ಅದು ಸಿ.ಟಿ.ರವಿ ಎಂದು ಹೇಳಿದರು.

ರಾಜಕೀಯದಲ್ಲಿ ಸಿ.ಟಿ.ರವಿ ಹಲವರನ್ನು ಬಲಿ ಕೊಟ್ಟಿದ್ದಾರೆ ಎಂದು ಹೇಳಿದ ಸಚಿನ್ ಮೀಗಾ, ಘೋರಿ, ದರ್ಗಾಗಳನ್ನು ಸಂಚಿನಲ್ಲಿ ಧ್ವಂಸ ಮಾಡಿಸಿದ್ದರೆ ಅದು ಸಿ.ಟಿ.ರವಿ. ಮಹೇಂದ್ರ ಕುಮಾರ್ ಬಳಸಿಕೊಂಡು ದರ್ಗಾ, ದೇಗುಲ ದ್ವಂಸ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಗುತ್ತಿಗೆದಾರರ ಆರೋಪ ಸುಳ್ಳು ಅನ್ನೋದಾದರೆ ಪ್ರಮಾಣ ಮಾಡಲಿ: ಡಿಕೆ ಶಿವಕುಮಾರ್​ಗೆ ಸವಾಲು ಹಾಕಿದ ಮಾಜಿ ಶಾಸಕ ಸಿಟಿ ರವಿ

ಮಾಜಿ ಶಾಸಕ ಸಿ.ಟಿ.ರವಿ ಪದೇ ಪದೆ ತಮ್ಮ ನಾಲಿಗೆ ಹರಿಬಿಡುತ್ತಿದ್ದಾರೆ. ಈ ಹಿಂದೆ ಸಿದ್ದರಾಮಯ್ಯರನ್ನು ಸಿದ್ರಾಮುಲ್ಲಾ ಖಾನ್ ಎಂದು ಹೇಳಿದ್ದರು. ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಹೆಸರಿಗೆ ಕೊತ್ವಾಲ್ ಹೆಸರನ್ನು ಸೇರಿಸಿದ್ದಾರೆ. ಇಂತಹ ಹೇಳಿಕೆಯನ್ನು ನೀಡುವ ಸಿಟಿ ರವಿ ಅವರನ್ನು ಚಿಕ್ಕಮಗಳೂರು ಕ್ಷೇತ್ರದ ಜನರು ಮನೆಗೆ ಕಳುಹಿಸಿದ್ದಾರೆ ಎಂದರು. ಅಲ್ಲದೆ, ಉಗ್ರ ಸಿ.ಟಿ.ರವಿಯನ್ನು ಗಡಿಪಾರು ಮಾಡಬೇಕೆಂದು ಒತ್ತಾಯ ಮಾಡುತ್ತೇನೆ ಅಂತಾನೂ ಹೇಳಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:02 pm, Tue, 15 August 23

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
Loading...
Unable to load recommendations.
Follow Us