AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಉರುಳಿಗೆ ಸಿಲುಕಿ ಒಂದುವರೆ ವರ್ಷದ ಗಂಡು ಚಿರತೆ ಸಾವು

ಕಾಡು ಪ್ರಾಣಿಗಳ ಬೇಟೆಗೆ ಹಾಕಿದ್ದ ಉರುಳಿಗೆ ಸಿಲುಕಿ ಒಂದುವರೆ ವರ್ಷದ ಗಂಡು ಚಿರತೆ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹುಳಿಯಾರದಹಳ್ಳಿಯಲ್ಲಿ ನಡೆದಿದೆ. ಕಾಡು ಪ್ರಾಣಿಗಳ ಬೇಟೆಗಾಗಿ ಜಮೀನಿನಲ್ಲಿ ಉರುಳು ಹಾಕಲಾಗಿತ್ತು. ಚಿರತೆ ಮಧ್ಯರಾತ್ರಿ ಉರುಳಿಗೆ ಸಿಲುಕಿ ನರಳಾಡುತ್ತಿತ್ತು. ಮುಂದೇನಾಯ್ತು ಈ ಸ್ಟೋರಿ ಓದಿ..

ಚಿಕ್ಕಮಗಳೂರು: ಉರುಳಿಗೆ ಸಿಲುಕಿ ಒಂದುವರೆ ವರ್ಷದ ಗಂಡು ಚಿರತೆ ಸಾವು
ಮೃತ ಚಿರತೆ
TV9 Web
| Updated By: ವಿವೇಕ ಬಿರಾದಾರ|

Updated on: Jan 13, 2024 | 10:41 AM

Share

ಚಿಕ್ಕಮಗಳೂರು, ಜನವರಿ 13: ಕಾಡು ಪ್ರಾಣಿಗಳ ಬೇಟೆಗೆ ಹಾಕಿದ್ದ ಉರುಳಿಗೆ ಸಿಲುಕಿ ಒಂದುವರೆ ವರ್ಷದ ಗಂಡು ಚಿರತೆ (Leopard) ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು (Chikkamagalur) ತಾಲೂಕಿನ ಹುಳಿಯಾರದಹಳ್ಳಿಯಲ್ಲಿ ನಡೆದಿದೆ. ಕಾಡು ಪ್ರಾಣಿಗಳ ಬೇಟೆಗಾಗಿ ಜಮೀನಿನಲ್ಲಿ ಉರುಳು ಹಾಕಲಾಗಿತ್ತು. ಚಿರತೆ ಮಧ್ಯರಾತ್ರಿ ಉರುಳಿಗೆ ಸಿಲುಕಿ ನರಳಾಡುತ್ತಿತ್ತು. ಬೆಳಿಗ್ಗೆ ಉರುಳಿಗೆ ಸಿಲುಕಿದ್ದ ಚಿರತೆಯನ್ನು ರಕ್ಷಿಸಿ, ಅರಣ್ಯ ಇಲಾಖೆಯ ಸಿಬ್ಬಂದಿ ಚಿಕಿತ್ಸೆ ನೀಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಚಿರತೆ ಮೃತಪಟ್ಟಿದೆ. ಚಿಕ್ಕಮಗಳೂರು ಅರಣ್ಯ ವಲಯ ವ್ಯಾಪ್ತಿಯಲ್ಲಿ ಘಟನೆ. ‌ಚಿರತೆ‌ ಕಳೆದ ಎರಡು ತಿಂಗಳಿನಿಂದ ಹುಳಿಯಾರದಹಳ್ಳಿ ಸೇರಿದಂತೆ ವಿವಿಧ ಗ್ರಾಮದಲ್ಲಿ ಸಂಚಾರ ಮಾಡುತ್ತಿತ್ತು.

ಕಾಫಿ ಎಸ್ಟೇಟ್​​​​ನಲ್ಲಿ ಹುಲಿ ಮೃತ ದೇಹ ಪತ್ತೆ

ಕೊಡಗು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಗಡಿಭಾಗದಲ್ಲಿರುವ ಪೊನ್ನಂಪೇಟೆ ತಾಲೂಕಿನ ಕಾಫಿ ಎಸ್ಟೇಟ್​​​​ನಲ್ಲಿ 13 ವರ್ಷದ ಹುಲಿ ಮೃತ ದೇಹ ಪತ್ತೆಯಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. ಹುಲಿಗೆ ಗಾಯಗಳಾಗಿದ್ದು, ಮತ್ತೊಂದು ಹುಲಿಯೊಂದಿಗೆ ಕಾದಾಡುವಾಗ ಗಾಯವಾಗಿದೆ ಎಂದು ಶಂಕಿಸಲಾಗಿತ್ತು.

ಇದನ್ನೂ ಓದಿ: ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಚಿರತೆ ಪ್ರತ್ಯಕ್ಷ: ಸೆರೆ ಹಿಡಿಯುವಂತೆ ವಿದ್ಯಾರ್ಥಿಗಳು ಮನವಿ

ಕೊಪ್ಪಳ ತಾಲೂಕಿನ ಬಸ್ಸಾಪುರ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ

ಕೊಪ್ಪಳ: ಕೊಪ್ಪಳ ತಾಲೂಕಿನ ಬಸ್ಸಾಪುರ ಗ್ರಾಮದ ಹೊರವಲಯದ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಚಿರತೆ ವಾರದಿಂದ ಬೆಟ್ಟದಲ್ಲಿ ಹಲವು ಬಾರಿ ಕಾಣಿಸಿಕೊಂಡಿದೆ. ಚಿರತೆ ಓಡಾಟ ಕಂಡು ಬಸ್ಸಾಪುರ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಕಳೆದ ರಾತ್ರಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಬಳಿಕ ಗ್ರಾಮಸ್ಥರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದರು. ರಾತ್ರಿ ವೇಳೆ ಹೊರಗಡೆ ಓಡಾಡದಂತೆ ಮನವಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ