ಚಾಮರಾಜನಗರ: ಡಿಜೆ ಸೌಂಡ್​ಗೆ ಡ್ಯಾನ್ಸ್ ಮಾಡುತ್ತಿದ್ದ ವ್ಯಕ್ತಿ ಹಾರ್ಟ್ ಅಟ್ಯಾಕ್ ಆಗಿ ಸಾವು

ಚಾಮರಾಜನಗರ ತಾಲೂಕಿನ ಮೂಡ್ನಾಕೂಡು ಗ್ರಾಮದಲ್ಲಿ ದೇವರ ಉತ್ಸವದ ವೇಳೆ ಡಿಜೆಗೆ ಡ್ಯಾನ್ಸ್ ಮಾಡುತ್ತಿದ್ದ ವ್ಯಕ್ತಿ ನೋಡ ನೋಡುತ್ತಲೇ ಹಾರ್ಟ್ ಅಟ್ಯಾಕ್ ಆಗಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮತ್ತೊಂದೆಡೆ ಚಿಕ್ಕಮಗಳೂರಿನಲ್ಲಿ ಸರ್ಕಾರಿ ಆಸ್ಪತ್ರೆಗೆ ಸೇರಿದ ಆಂಬ್ಯುಲೆನ್ಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಚಾಮರಾಜನಗರ, ಸೆ.30: ಡಿಜೆ ಸೌಂಡ್​ಗೆ ಯುವಕರೊಂದಿಗೆ ಕುಣಿದು ಕುಪ್ಪಳಿಸುತ್ತಿದ್ದ ವ್ಯಕ್ತಿಗೆ ದಿಢೀರನೆ ಹಾರ್ಟ್ ಅಟ್ಯಾಕ್ (Heart Attack) ಆಗಿದ್ದು ಡ್ಯಾನ್ಸ್ ಮಾಡುತ್ತಿರುವಾಗಲೇ ಕುಸಿದು ಬಿದ್ದು ಮೃತಪಟ್ಟಿರುವ (Death) ಘಟನೆ ಚಾಮರಾಜನಗರ ತಾಲೂಕಿನ ಮೂಡ್ನಾಕೂಡು ಗ್ರಾಮದಲ್ಲಿ ನಡೆದಿದೆ. ಬಾಬು (42) ಹಾರ್ಟ್ ಅಟ್ಯಾಕ್‌ ನಿಂದ ಮೃತಪಟ್ಟ ವ್ಯಕ್ತಿ. ಗ್ರಾಮದಲ್ಲಿ ಗೌರಿ ವಿಸರ್ಜನೆ ಅಂಗವಾಗಿ ಕಲ್ಯಾಣ ಬಸವೇಶ್ವರ ಉತ್ಸವ ಹಮ್ಮಿಕೊಳ್ಳಲಾಗಿತ್ತು. ದೇವರ ಉತ್ಸವದ ವೇಳೆ ಡಿಜೆಗೆ ಡ್ಯಾನ್ಸ್ ಮಾಡುತ್ತಿದ್ದ ವ್ಯಕ್ತಿ ನೋಡ ನೋಡುತ್ತಲೇ ಹಾರ್ಟ್ ಅಟ್ಯಾಕ್ ಆಗಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಆಂಬ್ಯುಲೆನ್ಸ್ ಮತ್ತು ಬೈಕ್ ನಡುವೆ ಅಪಘಾತ, ಸವಾರ ಸಾವು

ಇನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ನಿಲುವಾಗಿಲು ಗ್ರಾಮದ ಬಳಿ ಕೊಪ್ಪ ಸರ್ಕಾರಿ ಆಸ್ಪತ್ರೆಗೆ ಸೇರಿದ ಆಂಬ್ಯುಲೆನ್ಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತದ ಭೀಕರತೆಗೆ ಪ್ರವೀಣ್(30) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಪ್ರವೀಣ್ ಹೊಸನಗರ ತಾಲೂಕಿನ ಸೊನ್ಲೆ ಗ್ರಾಮದ ನಿವಾಸಿ. ಆಂಬ್ಯುಲೆನ್ಸ್ ಡಿಕ್ಕಿಯಾದ ರಭಸಕ್ಕೆ ಬೈಕ್ ಸಂಪೂರ್ಣ ಜಖಂ ಆಗಿದೆ. ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಮಂಗಳಯಾನ ಕಕ್ಷೆಗೆ ತಲುಪಿ 10 ವರ್ಷ, ನೆಹರು ತಾರಾಲಯದಲ್ಲಿ ವಿಶೇಕ್ಷ ಪ್ರದರ್ಶನ ಕಂಡು ಹೆಮ್ಮೆ ಪಟ್ಟ ಜನ

ಚಾಕುವಿನಿಂದ ಇರಿದು ಕೊಲೆ

ಇನ್ನು ಮತ್ತೊಂದೆಡೆ ರಾತ್ರಿ ಮನೆಯಲ್ಲಿ ಮಹಾಲಯ ಅಮಾವಾಸ್ಯೆಯ ಹಬ್ಬ ಮಾಡಿ, ಪೂಜೆ ಮಾಡಿ ಬಳಿಕ ಮದ್ಯಸೇವನೆ ಮಾಡುವಾಗ ಸ್ನೇಹಿತರ ನಡುವೆ ಜಗಳವಾಗಿದ್ದು ಕೊಲೆಯಲ್ಲಿ ಅಂತ್ಯವಾಗಿದೆ. ಕೀರ್ತಿ (37) ಎಂಬಾತ ಮೂರ್ತಿ (52) ಎಂಬುವವರಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಬೆಂಗಳೂರಿನ ಸಣ್ಣೇನ ಹಳ್ಳಿಯಲ್ಲಿ ಘಟನೆ ನಡೆದಿದ್ದು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ವ್ಯಕ್ತಿ ಮತ್ತು ಆರೋಪಿ ಇಬ್ಬರೂ ಒಂದೇ ಏರಿಯಾದವರು. ಹಬ್ಬ ಮುಗಿಸಿ ಮದ್ಯ ಸೇವನೆಗೆ ಜೊತೆಯಾಗಿ ಕೂತಿದ್ದಾಗ ಜಗಳವಾಗಿ ಕೊಲೆ ನಡೆದಿದೆ. ಘಟನೆ ಬಳಿಕ ಆರೋಪಿ ಕೀರ್ತಿ ತಲೆಮರೆಸಿಕೊಂಡಿದ್ದು ಪೊಲೀಸರು ಹುಡುಕಾಡುತ್ತಿದ್ದಾರೆ. ಮೃತ ಮೂರ್ತಿ ಹಸು ಸಾಕಾಣಿಕೆ ಮಾಡುತಿದ್ದ, ಇನ್ನು ಆರೋಪಿ ಕೀರ್ತಿ ಸಹ ಪರಿಚಿತ, ಸ್ನೇಹಿತ ಸಹ ಆಗಿದ್ದು ಫೈನಾನ್ಸ್ ವ್ಯವಹಾರ ನಡೆಸುತಿದ್ದ ಎಂದು ತಿಳಿದುಬಂದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:50 am, Mon, 30 September 24

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us