Karnataka Rain: ಚಿಕ್ಕಮಗಳೂರಿನ ರಾಜಕಾಲುವೆಯಲ್ಲಿ ಕೊಚ್ಚಿ ಹೋದ ವ್ಯಕ್ತಿ

| Updated By: ವಿವೇಕ ಬಿರಾದಾರ

Updated on: Jul 12, 2022 | 5:42 PM

ಚಿಕ್ಕಮಗಳೂರಿನ ರಾಜಕಾಲುವೆಯಲ್ಲಿ ವ್ಯಕ್ತಿಯೋರ್ವ ಕೊಚ್ಚಿ ಹೋಗಿರುವ ಘಟನೆ ಚಿಕ್ಕಮಗಳೂರು ನಗರದ ಉಂಡೆ ದಾಸರಹಳ್ಳಿಯಲ್ಲಿ ನಡೆದಿದೆ.

Karnataka Rain: ಚಿಕ್ಕಮಗಳೂರಿನ ರಾಜಕಾಲುವೆಯಲ್ಲಿ ಕೊಚ್ಚಿ ಹೋದ ವ್ಯಕ್ತಿ
ಕೊಚ್ಚಿಹೋದ ವ್ಯಕ್ತಿಗಾಗಿ ಶೋಧ ಕಾರ್ಯ
Follow us on

ಚಿಕ್ಕಮಗಳೂರು: ಚಿಕ್ಕಮಗಳೂರಿನ (Chikkamagaluru) ರಾಜಕಾಲುವೆಯಲ್ಲಿ (Rajakaluve) ವ್ಯಕ್ತಿಯೋರ್ವ ಕೊಚ್ಚಿ ಹೋಗಿರುವ ಘಟನೆ ಚಿಕ್ಕಮಗಳೂರು ನಗರದ ಉಂಡೆ ದಾಸರಹಳ್ಳಿಯಲ್ಲಿ ನಡೆದಿದೆ. ಸೂರಿ (40)  ರಾಜಕಾಲುವೆಯಲ್ಲಿ ಕೊಚ್ಚಿಹೋದ ವ್ಯಕ್ತಿ. ನಾಪತ್ತೆಯಾದ ಸೂರಿಗಾಗಿ ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ. ಸ್ಥಳಕ್ಕೆ ನಗರಸಭೆ ಅಧ್ಯಕ್ಷ ವೇಣುಗೋಪಾಲ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೃಷ್ಣಾನದಿಯ ಪ್ರವಾಹದಲ್ಲಿ ತೇಲಿ ಬಂತು ಮಹಿಳೆಯ ಶವ

ಚಿಕ್ಕೋಡಿ: ಚಿಕ್ಕೋಡಿ ತಾಲೂಕಿನ ಯಡೂರಿನ ಕೃಷ್ಣಾ ನದಿತೀರಕ್ಕೆ ಮಹಿಳೆಯೋರ್ವಳ  ಶವ ತೇಲಿಕೊಂಡು ಬಂದಿದೆ. ಸುಶೀಲಾ ತಾತೋಬಾ ಅನೂಜೆ (68) ಮೃತ ಮಹಿಳೆ. ಮಹಿಳೆ ಮಹಾರಾಷ್ಟ್ರದ ಶಿರೋಳ ತಾಲೂಕಿನ ನರಸಿಂಹವಾಡಿ ಗ್ರಾಮದ ನಿವಾಸಿಯಾಗಿದ್ದು, ಅನಾರೋಗ್ಯ ಹಿನ್ನಲೆ ನರಸಿಂಹವಾಡಿ ಗ್ರಾಮದ ಕೃಷ್ಣಾನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಮೃತರ ಸಂಬಂಧಿಕರಿಂದ ಬೆಳಗಾವಿ ಪೊಲೀಸ್ ರಿಗೆ ಮಾಹಿತಿ ನೀಡಿದ್ದರು.

ಸ್ಥಳಕ್ಕೆ ಅಂಕಲಿ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಘಟನೆಯ ಕುರಿತು ತನಿಖೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ಮೃತ ಮಹಿಳೆ ಶವ ಸಂಬಂಧಿಕರಿಗೆ ಹಸ್ತಾಂತರ ಮಾಡಲಾಗಿದೆ. ಪ್ರವಾಹದಲ್ಲಿ ಮಹಿಳೆಯ ಶವ ಪತ್ತೆಯಾಗಿರುವುದು ಯಡೂರ ಗ್ರಾಮಸ್ಥರನ್ನು ಬೆಚ್ಚಿಬೀಳಿಸಿದೆ.

ಬಾರಿ ಗಾಳಿಗೆ ಮುರಿದು ಬಿದ್ದ ಅನಧಿಕೃತ ಜಾಹೀರಾತು ಹೋಲ್ಡಿಂಗ್

ಆನೇಕಲ್: ಬಾರಿ ಗಾಳಿಗೆ ಅನಧಿಕೃತ ಜಾಹೀರಾತು ಹೋಲ್ಡಿಂಗ್ ಮುರಿದು ಬಿದ್ದಿರುವ ಘಟನೆ ಆನೇಕಲ್ ತಾಲೂಕಿನ ದೊಮ್ಮಸಂದ್ರದ ಸರ್ಜಾಪುರ ಮುಖ್ಯ ರಸ್ತೆಯಲ್ಲಿ ನಡೆದಿದೆ. ಘಟನೆಯಲ್ಲಿ ಹಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಎರಡು ಆಟೋ ಹಾಗೂ ದ್ವಿಚಕ್ರ ವಾಹನ ಜಖಂಗೊಂಡಿವೆ. ಅಕ್ರಮವಾಗಿ ಅವೈಜ್ಞಾನಿಕ ಜಾಹಿರಾತು ಪಲಕ ಅಳವಡಿಸಲಗಿತ್ತು.

ನಿರಂತರ ಮಳೆಯಿಂದ ಕುಸಿದು ಬಿದ್ದ ಶಾಲೆಯ ಮೇಲ್ಚಾವಣಿ

ಕಲಬುರಗಿ: ನಿರಂತರ ಮಳೆಯಿಂದ ಶಾಲೆಯ  ಮೇಲ್ಚಾವಣಿ ಕುಸಿದು ಬಿದ್ದಿರುವ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ಹರನೂರ ಗ್ರಾಮದಲ್ಲಿ ನಡೆದಿದೆ. ಗ್ರಾಮದ 70 ವರ್ಷದ ಹಳೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ ಕುಸಿದು ಬಿದ್ದಿದೆ. ಶಾಲೆಯಲ್ಲಿ ಯಾರೂ ಇಲ್ಲದ ಹಿನ್ನೆಲೆ ಭಾರಿ ಅನಾಹುತ ತಪ್ಪಿದೆ. ಅದೃಷ್ಟವಶಾತ್​​ ಮಕ್ಕಳು, ಶಿಕ್ಷಕರು ಅಪಾಯದಿಂದ ಪಾರಾಗಿದ್ದಾರೆ. ಹಳೆ ಕಟ್ಟಡದಲ್ಲೇ ನಿತ್ಯ ಮಕ್ಕಳಿಗೆ ಪಾಠ ಮಾಡಲಾಗುತ್ತಿತ್ತು.

Published On - 5:40 pm, Tue, 12 July 22