AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Charmadi Ghat ಚಾರ್ಮಾಡಿ ಘಾಟ್​ನಲ್ಲಿ ಲಘು ಭೂಕುಸಿತ; ನಿರಂತರ ಕಾರ್ಯದಲ್ಲಿ ತೊಡಗಿರುವ ಜೆಸಿಬಿಗಳು

ಚಾರ್ಮಾಡಿ ಘಾಟ್ನ ಸೋಮನ ಕಾಡು ಸಮೀಪ ಲಘು ಭೂಕುಸಿತವಾಗಿದ್ದು ಸದ್ಯ ಸಂಚಾರಕ್ಕೆ ಯಾವುದೇ ತೊಂದರೆಯಾಗಿಲ್ಲ. ಹೆದ್ದಾರಿ ಪ್ರಾಧಿಕಾರದ ಜೆಸಿಬಿ ಯಂತ್ರಗಳು ಮಣ್ಣು ತೆರವು ಕಾರ್ಯದಲ್ಲಿ ನಿರಂತರವಾಗಿ ತೊಡಗಿಕೊಂಡಿವೆ.

Charmadi Ghat ಚಾರ್ಮಾಡಿ ಘಾಟ್​ನಲ್ಲಿ ಲಘು ಭೂಕುಸಿತ; ನಿರಂತರ ಕಾರ್ಯದಲ್ಲಿ ತೊಡಗಿರುವ ಜೆಸಿಬಿಗಳು
ಚಾರ್ಮಾಡಿ ಘಾಟ್
TV9 Web
| Edited By: |

Updated on:Jul 14, 2022 | 10:11 PM

Share

ಚಿಕ್ಕಮಗಳೂರು: ಕಳೆದ 10 ದಿನಗಳಿಂದ ದಕ್ಷಣ ಕನ್ನಡ ಹಾಗೂ ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟ್(Charmadi Ghat) ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು ನಿರಂತರ ಮಳೆಯಿಂದ(Rain) ವಾಹನ ಸಂಚಾರ ದುಸ್ತರವಾಗಿದೆ.

ಅಲ್ಲದೆ ಚಾರ್ಮಾಡಿ ಘಾಟ್ನ ಸೋಮನ ಕಾಡು ಸಮೀಪ ಲಘು ಭೂಕುಸಿತವಾಗಿದ್ದು ಸದ್ಯ ಸಂಚಾರಕ್ಕೆ ಯಾವುದೇ ತೊಂದರೆಯಾಗಿಲ್ಲ. ಹೆದ್ದಾರಿ ಪ್ರಾಧಿಕಾರದ ಜೆಸಿಬಿ ಯಂತ್ರಗಳು ಮಣ್ಣು ತೆರವು ಕಾರ್ಯದಲ್ಲಿ ನಿರಂತರವಾಗಿ ತೊಡಗಿಕೊಂಡಿವೆ.

ಮಲೆನಾಡು ಭಾಗದಲ್ಲಿ ಮುಂದುವರೆದ ಮಳೆ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಬಿರುಗಾಳಿ ಸಹಿತ ಮಳೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ಎನ್.ಆರ್ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದೆ. ನಿನ್ನೆ-ಇಂದು ದಾಖಲೆ ಪ್ರಮಾಣದಲ್ಲಿ ಮಳೆ ಸುರಿದಿದೆ. ನಿನ್ನೆ ಒಂದೇ ದಿನ ಮೂಡಿಗೆರೆಯ ಕೊಟ್ಟಿಗೆಹಾರದಲ್ಲಿ 154 ಮಿಲಿ ಮೀಟರ್ ಮಳೆಯಾಘಿದೆ. ಶೃಂಗೇರಿಯಲ್ಲಿ 160 ಮಿಲಿಮೀಟರ್ ಮಳೆ ದಾಖಲಾಗಿದೆ. ಇಂದು ನಿನ್ನೆಗಿಂತಲೂ ಹೆಚ್ಚು ವರುಣ ಆರ್ಭಟಿಸಿದ್ದು ಭಾರಿ ಮಳೆಗೆ ಮೂಡಿಗೆರೆ ತಾಲೂಕಿನಲ್ಲಿ ಎರಡು ಶಾಲೆಗಳು ಕುಸಿದಿವೆ. ಮನೆಯಿಂದ ಹೊರಬರಲು ಜನರು ಹೆದರುವಂತಾಗಿದೆ. ಪರಿಸ್ಥಿತಿ ಹೀಗಿರುವಾಗ ಶಾಲೆಗೆ ಮಕ್ಕಳನ್ನು ಹೇಗೆ ಕಳುಹಿಸುವುದು ಎಂದು ಘೋಷಕರು ಪ್ರಶ್ನಿಸಿದ್ದಾರೆ. ಆದ್ರೆ ಇಷ್ಟಾದರೂ ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿಲ್ಲ. ಹೀಗಾಗಿ ಜಿಲ್ಲಾಡಳಿತದ ವಿರುದ್ಧ ವಿದ್ಯಾರ್ಥಿಗಳ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ.

Published On - 9:53 pm, Thu, 14 July 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?