Vande Bharat Express: ಚಿಕ್ಕಮಗಳೂರಿನಲ್ಲೂ ವಂದೇ ಭಾರತ್ ರೈಲಿಗೆ ಮತ್ತೆ ಕಲ್ಲೇಟು: ಸ್ಥಳಕ್ಕೆ ಪೊಲೀಸರ ಭೇಟಿ
ಬೆಳಗ್ಗೆ 8.45ಕ್ಕೆ ಅರಸೀಕೆರೆ-ಬೀರೂರು ಮಧ್ಯೆ ಸಂಚರಿಸುತ್ತಿದ್ದಾಗ ವಂದೇ ಭಾರತ್ ರೈಲಿನ ಮೇಲೆ ಕಲ್ಲೆಸೆಯಲಾಗಿದೆ. ಕೆಲ ಹುಡುಗರು ಕಲ್ಲು ಎಸೆದಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಚಿಕ್ಕಮಗಳೂರು: ಇತ್ತೀಚೆಗಷ್ಟೇ ಉದ್ಘಾಟನೆಗೊಂಡ ನೂತನ ಧಾರವಾಡ-ಬೆಂಗಳೂರು ಒಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ (Vande Bharat Express Train) ಕಲ್ಲು ಎಸೆಯಲಾಗಿತ್ತು. ಈ ಪ್ರಕರಣದಲ್ಲಿ ಪೊಲೀಸರು ಇಬ್ಬರು ಮಕ್ಕಳನ್ನ ವಶಕ್ಕೆ ಪಡೆದಿದ್ದಾರೆ. ಈಗ ಇದೇ ರೀತಿಯ ಮತ್ತೊಂದು ಘಟನೆ ಮರುಕಳಿಸಿದ್ದು ಧಾರವಾಡ-ಬೆಂಗಳೂರು ಒಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಚಿಕ್ಕಮಗಳೂರಿನಲ್ಲೂ ಕಿಡಿಗೇಡಿಗಳು ಮತ್ತೆ ಕಲ್ಲು ಹೊಡೆದಿದ್ದಾರೆ. ಕೇವಲ ಐದು ದಿನಗಳ ಅಂತರದಲ್ಲಿ ನೂತನ ರೈಲಿಗೆ ಎರಡು ಬಾರಿ ಕಲ್ಲೇಟು ಬಿದ್ದಿದೆ.
ಬೀರೂರು ಪಟ್ಟಣದ ಸಮೀಪ ರೈಲಿನ ಮೇಲೆ ಕೆಲ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಬೆಳಗ್ಗೆ 8.45ಕ್ಕೆ ಅರಸೀಕೆರೆ-ಬೀರೂರು ಮಧ್ಯೆ ಸಂಚರಿಸುತ್ತಿದ್ದಾಗ ವಂದೇ ಭಾರತ್ ರೈಲಿನ ಮೇಲೆ ಕಲ್ಲೆಸೆಯಲಾಗಿದೆ. ಕೆಲ ಹುಡುಗರು ಕಲ್ಲು ಎಸೆದಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಲ್ಲು ಹೊಡೆದವರ ಬಗ್ಗೆ ಮಾಹಿತಿ ಕಲೆ ಹಾಕಲು ಮುಂದಾಗಿದ್ದಾರೆ. ಇನ್ನು ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ರೈಲು ಪರಿಶೀಲನೆ ಮಾಡಲಾಗುತ್ತಿದೆ.
ಇದನ್ನೂ ಓದಿ: ಧಾರವಾಡ-ಬೆಂಗಳೂರು ಒಂದೇ ಭಾರತ್ ರೈಲಿಗೆ ಕಲ್ಲೇಟು: ಇಬ್ಬರು ಬಾಲಕರು ಪೊಲೀಸ್ ವಶಕ್ಕೆ
ಜುಲೈ 01ರ ಶನಿವಾರ ಮಧ್ಯಾಹ್ನ 3-30ಕ್ಕೆ ಧಾರವಾಡದಿಂದ ದಾವಣಗೆರೆಗೆ ಸಂಚರಿಸುತ್ತಿದ್ದ ವೇಳೆ ವಂದೇ ಭಾರತ್ ರೈಲಿಗೆ ಕಲ್ಲು ಎಸೆಯಲಾಗಿತ್ತು. ಈ ಪರಿಣಾಮ ರೈಲಿನ ಕಿಟಕಿ ಗಾಜಿಗೆ ಹಾನಿಯಾಗಿತ್ತು. ಅದೃಷ್ಟವಶಾತ್ ರೈಲಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿರಲಿಲ್ಲ. ಈ ಕುರಿತು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಈಗ ಇಬ್ಬರು ಮಕ್ಕಳನ್ನು ವಶಕ್ಕೆ ಪಡೆಯಲಾಗಿದೆ.
ಚಿಕ್ಕಮಗಳೂರು ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 12:34 pm, Wed, 5 July 23