ಮಹಿಳೆಗೆ ಬ್ಲ್ಯಾಕ್ಮೇಲ್ ಆರೋಪ: ಶಾಸಕಿ ನಯನಾ ಮೋಟಮ್ಮ ಆಪ್ತ ಆದಿತ್ಯ ಅರೆಸ್ಟ್
ಫೋಟೋ, ವಿಡಿಯೋ ಇಟ್ಟುಕೊಂಡು ಮಹಿಳೆಗೆ ಬ್ಲ್ಯಾಕ್ಮೇಲ್ ಆರೋಪ ಸಂಬಂಧ ಆದಿತ್ಯ ಎಂಬಾತನನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿ, ಶಾಸಕಿ ನಯನಾ ಮೋಟಮ್ಮ ಅವರ ಆಪ್ತ ಎಂಬುದು ಗೊತ್ತಾಗಿದ್ದು, ಬ್ಲ್ಯಾಕ್ಮೇಲ್ ವಿಚಾರವಾಗಿ ಈತನ ಮನೆಗೇ ನುಗ್ಗಿ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದರು. ಆದರೆ ಆ ಬಗ್ಗೆ ಈವರೆಗೂ ದೂರು ದಾಖಲಾಗಿಲ್ಲ ಎನ್ನಲಾಗಿದೆ.
ಚಿಕ್ಕಮಗಳೂರು, ಅಕ್ಟೋಬರ್ 29: ಫೋಟೋ, ವಿಡಿಯೋ ಇಟ್ಟುಕೊಂಡು ಮಹಿಳೆಗೆ ಬ್ಲ್ಯಾಕ್ಮೇಲ್ ಆರೋಪ ಸಂಬಂಧ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ (Nayana Motamma) ಆಪ್ತ ಆದಿತ್ಯ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯೋರ್ವರು ನೀಡಿರುವ ದೂರು ಆಧರಿಸಿ ಆರೋಪಿಯನ್ನ ಅರೆಸ್ಟ್ ಮಾಡಲಾಗಿದೆ. ಬ್ಲ್ಯಾಕ್ಮೇಲ್ ಮಾತ್ರವಲ್ಲದೆ ವಿಡಿಯೋವನ್ನ ಸಂಬಂಧಿಕರು, ಗೊತ್ತಿದ್ದವರಿಗೆ ಕಳುಹಿಸಿ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದ್ದು, ಈ ಬಗ್ಗೆಉ ವಿಚಾರಣೆ ನಡೆಸಲಾಗುತ್ತಿದೆ. ಆದಿತ್ಯ ಮೇಲೆ ಹಲ್ಲೆ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ. ದೂರು ಕೊಟ್ಟರೆ ಹಲ್ಲೆ ಬಗ್ಗೆಯೂ ಪ್ರಕರಣ ದಾಖಲು ಮಾಡುತ್ತೇವೆ ಎಂದು ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಆಮ್ಟೆ ಹೇಳಿದ್ದಾರೆ. ಬ್ಲ್ಯಾಕ್ಮೇಲ್ ಆರೋಪ ಸಂಬಂಧ ಚಿಕ್ಕಮಗಳೂರಿನ ಆದಿಶಕ್ತಿ ನಗರದಲ್ಲಿನ ಆದಿತ್ಯ ಮನೆಗೇ ನುಗ್ಗಿ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದರು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Oct 29, 2025 04:09 PM