ಚಿಕ್ಕಮಗಳೂರು: ಶಾಸಕ ಶಿವಲಿಂಗೇಗೌಡ ಆಪ್ತನ ಕಾರು, ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹೇಮಗಿರಿ ಗೇಟ್ ಬಳಿ ಕಾಂಗ್ರೆಸ್​ ಶಾಸಕ ಶಿವಲಿಂಗೇಗೌಡ ಆಪ್ತನ ಕಾರು, ಬೈಕ್ ನಡುವೆ ಭೀಕರ ಅಪಘಾತವಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದ್ದು, ಚಾಲಕ ಸ್ಥಳದಲ್ಲೇ ಕಾರು ಬಿಟ್ಟು ಪರಾರಿಯಾಗಿದ್ದಾನೆ.

ಚಿಕ್ಕಮಗಳೂರು: ಶಾಸಕ ಶಿವಲಿಂಗೇಗೌಡ ಆಪ್ತನ ಕಾರು, ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು
ಕಡೂರು ತಾಲೂಕಿನ ಹೇಮಗಿರಿ ಗೇಟ್ ಬಳಿ ಅಪಘಾತ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 20, 2023 | 5:21 PM

ಚಿಕ್ಕಮಗಳೂರು, ಆ.20: ಕಾರು, ಬೈಕ್ ನಡುವೆ ಭೀಕರ ಅಪಘಾತ (Accident) ವಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಡೂರು ತಾಲೂಕಿನ ಹೇಮಗಿರಿ ಗೇಟ್ ಬಳಿ ನಡೆದಿದೆ. ಅರಸೀಕೆರೆ ಕ್ಷೇತ್ರದ ಕಾಂಗ್ರೆಸ್​ಶಾಸಕ ಶಿವಲಿಂಗೇಗೌಡ ಅವರ ಆಪ್ತ ಬಾಣಾವರ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾಗಿದ್ದ ಬಿಳಿ ಚೌಡಯ್ಯ ಎಂಬುವವರಿಗೆ ಸೇರಿದ ಕಾರು ಇದಾಗಿದ್ದು, ಡಿಕ್ಕಿಯ ರಭಸಕ್ಕೆ ಬೈಕ್‌ ಸ್ವಿಫ್ಟ್‌ ಕಾರಿನಲ್ಲಿ ಸಿಲುಕಿಕೊಂಡಿದೆ. ಘಟನೆ ಬಳಿಕ ಚಾಲಕ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಈ ಕುರಿತು ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ತೋಟದಲ್ಲಿ ವಿದ್ಯುತ್ ತಂತಿ ತಗುಲಿ ಒಂಟಿ ಸಲಗ ಸಾವು

ಕೋಲಾರ: ವಿದ್ಯುತ್ ತಂತಿ ತಗುಲಿ ಒಂಟಿ ಸಲಗ ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಬೈರಡ್ಡಪಲ್ಲಿ ಬಳಿಯ ನಲ್ಲಗುಟ್ಟಪಲ್ಲಿ ಬಳಿ ನಡೆದಿದೆ. ಕಳೆದ 6 ತಿಂಗಳಲ್ಲಿ ನಾಲ್ಕು ಆನೆಗಳು ಹೀಗೆ ವಿದ್ಯುತ್ ತಂತಿ ತಗುಲಿ ಸಾವು ಕಂಡಿದ್ದು, ಇದೀಗ ಕೋಲಾರದ ಗಡಿ ಗ್ರಾಮವಾದ ನಲ್ಲಗುಟ್ಟಪಲ್ಲಿ ಗ್ರಾಮದ ರಂಗಸ್ವಾಮಿ ಎಂಬುವವರ ತೋಟಕ್ಕೆ ರಾತ್ರಿ ಬಂದಿರುವ ಕಾಡಾನೆಗೆ ಕರೆಂಟ್ ಶಾಕ್ ಹೊಡೆದು ಕೊನೆಯುಸಿರೆಳೆದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದು, ಆಂದ್ರದ ಬೈರೆಡ್ಡಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ಕೊಪ್ಪಳ: RTO ಅಧಿಕಾರಿಗಳಿಗೆ ಹೆದ್ದಾರಿಯಲ್ಲಿ ದುಡ್ಡಿನ ಸುರಿಮಳೆ, ವಸೂಲಿಗೆ ಬ್ರೇಕ್ ಹಾಕುವವರೇ ಇಲ್ಲ, ಅದರಿಂದ ಅಪಘಾತಗಳೂ ಹೆಚ್ಚುತ್ತಿವೆ!

ಚಾಲಕನಿಗೆ ತಲೆ ಸುತ್ತು, ಡಿವೈಡರ್​ಗೆ ಡಿಕ್ಕಿಯಾಗಿ ಕಾರು ಪಲ್ಟಿ

ರಾಮನಗರ: ತಾಲೂಕಿನ ಮಾಯಾಗನಹಳ್ಳಿ ಬಳಿ, ಚಾಲಕನಿಗೆ ತಲೆ ಸುತ್ತು ಬಂದು ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿಯಾಗಿ ಕಾರು ಪಲ್ಟಿಯಾದ ಘಟನೆ ನಡೆದಿದೆ. ನಾಲ್ವರು ಚನ್ನಪಟ್ಟಣದಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಈ ದುರ್ಘಟನೆ ನಡೆದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ರಾಮನಗರ ಸಂಚಾರಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ಅಪಘಾತ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು