ಮೋದಿ ಮತ್ತೆ ಪ್ರಧಾನಿ, ಡಿಕೆ ಶಿವಕುಮಾರ್ ಸಿಎಂ ಆಗುವ ದಿನ ಬರಲಿದೆ: ರಾಜಗುರು ದ್ವಾರಕಾನಾಥ್ ಭವಿಷ್ಯ

ಚಿಕ್ಕಮಗಳೂರಿನ ದತ್ತಪೀಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಜ್ಯೋತಿಷಿ ರಾಜಗುರು ದ್ವಾರಕಾನಾಥ್, ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗುವುದನ್ನ ತಪ್ಪಿಸಲು ಯಾರಿಂದಲೂ ಆಗಲ್ಲ. ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯುತ್ತಾರೆ. ದತ್ತಪೀಠದ ದತ್ತಾತ್ರೇಯರ ಜಾಗದಲ್ಲಿ ಹೇಳುತ್ತೇನೆ ಸದ್ಯಕ್ಕೆ ಕಾಂಗ್ರೆಸ್ ಸರ್ಕಾರ ಬೀಳಲ್ಲ ಎಂದಿದ್ದಾರೆ.

ಮೋದಿ ಮತ್ತೆ ಪ್ರಧಾನಿ, ಡಿಕೆ ಶಿವಕುಮಾರ್ ಸಿಎಂ ಆಗುವ ದಿನ ಬರಲಿದೆ: ರಾಜಗುರು ದ್ವಾರಕಾನಾಥ್ ಭವಿಷ್ಯ
ನರೇಂದ್ರ ಮೋದಿ, ರಾಜಗುರು ದ್ವಾರಕಾನಾಥ್
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on:Dec 26, 2023 | 3:46 PM

ಚಿಕ್ಕಮಗಳೂರು, ಡಿಸೆಂಬರ್​ 26: ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗಲಿದ್ದಾರೆ. ಅವರು ಪ್ರಧಾನಿ ಆಗುವುದನ್ನ ತಪ್ಪಿಸಲು ಯಾರಿಂದಲೂ ಆಗಲ್ಲ ಎಂದು ಜ್ಯೋತಿಷಿ ರಾಜಗುರು ದ್ವಾರಕಾನಾಥ್ (Rajaguru Dwarkanath)​ ಭವಿಷ್ಯ ನುಡಿದಿದ್ದಾರೆ. ನಗರದ ದತ್ತಪೀಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯುತ್ತಾರೆ. ದತ್ತಪೀಠದ ದತ್ತಾತ್ರೇಯರ ಜಾಗದಲ್ಲಿ ಹೇಳುತ್ತೇನೆ ಸದ್ಯಕ್ಕೆ ಕಾಂಗ್ರೆಸ್ ಸರ್ಕಾರ ಬೀಳಲ್ಲ ಎಂದಿದ್ದಾರೆ.

ಸಿದ್ದರಾಮಯ್ಯ ಅವರಿಗೆ ಸದ್ಯಕ್ಕೆ ಯಾವುದೇ ತೊಂದರೆ ಇಲ್ಲ. ಆದರೆ, ಗುಣದಲ್ಲಿ ಬದಲಾವಣೆ ಮಾಡಿಕೊಂಡರೆ ಡಿಸಿಎಂ ಡಿಕೆ ಶಿವಕುಮಾರ್​ ಸಿಎಂ ಆಗುತ್ತಾರೆ. ಮುಂದೊಂದು ದಿನ ಸಿಎಂ ಆಗಲಿದ್ದಾರೆ. ಅವರು ರಾಜ್ಯವನ್ನ ಆಳುವ ದಿನ ಬರಲಿದೆ. ಅಕ್ಕಿ ಹಾಕಿದ ತಕ್ಷಣ ಅನ್ನ ಆಗಲ್ಲ, ಇದು ಹಾಗೇನೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರಿನ ಶಾಂತವೇರಿ ದರ್ಗಾದಲ್ಲಿ ದಾಂಧಲೆ ನಡೆಸಿದ ಯುವಕರ ಗುಂಪು

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಎಷ್ಟು ಸ್ಥಾನ ಬರುವುದು ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತಿರಿಸಿದ ಅವರು, ಮೇ 1 ರಂದು ಹೇಳುತ್ತೇನೆ. ಏಕೆಂದರೆ ಏಪ್ರಿಲ್ 1 ರಂದು ಗುರು ಬದಲಾವಣೆ ಆಗುತ್ತದೆ. ಮೇ 15ರ ಬಳಿಕ ಚುನಾವಣೆ ಬರುತ್ತದೆ ಎಂದಿದ್ದಾರೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತೆ.

ಕಾಂಗ್ರೆಸ್​ನವರು ತಮ್ಮ ತಪ್ಪುಗಳನ್ನು ಅರ್ಥ ಮಾಡಿಕೊಂಡು ತಿದ್ದಿಕೊಂಡರೆ ಒಳ್ಳೆಯದು. ಎಲ್ಲದಕ್ಕೂ ಅಂತ್ಯವಿದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:18 pm, Tue, 26 December 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ