ಚಿಕ್ಕಮಗಳೂರಿನಲ್ಲಿ ಉಲ್ಬಣಗೊಂಡ ಮಂಗನ ಕಾಯಿಲೆ: ಒಂದೇ ದಿನ ನಾಲ್ವರಲ್ಲಿ ದೃಢ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ವ್ಯಾಪಕವಾಗಿ ಹರಡುತ್ತಿದೆ. ಒಂದೇ ದಿನ ನಾಲ್ವರಲ್ಲಿ ಕಾಯಿಲೆ ದೃಢಪಟ್ಟಿದೆ. ಒಟ್ಟು 18 ಜನರಲ್ಲಿ ಕೆಎಫ್‌ಡಿ ಪತ್ತೆಯಾಗಿದೆ. ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ತೆರೆಯಲಾಗಿದೆ. ಆರೋಗ್ಯ ಇಲಾಖೆ ಕಾಡಿಗೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ. ಸದ್ಯ ಜನರಲ್ಲಿ ಆತಂಕ ಹೆಚ್ಚಾಗಿದೆ.

ಚಿಕ್ಕಮಗಳೂರಿನಲ್ಲಿ ಉಲ್ಬಣಗೊಂಡ ಮಂಗನ ಕಾಯಿಲೆ: ಒಂದೇ ದಿನ ನಾಲ್ವರಲ್ಲಿ ದೃಢ
ಚಿಕ್ಕಮಗಳೂರಿನಲ್ಲಿ ಉಲ್ಬಣಗೊಂಡ ಮಂಗನ ಕಾಯಿಲೆ: ಒಂದೇ ದಿನ ನಾಲ್ವರಲ್ಲಿ ದೃಢ
Updated By: ಗಂಗಾಧರ​ ಬ. ಸಾಬೋಜಿ

Updated on: Feb 14, 2025 | 8:03 PM

ಚಿಕ್ಕಮಗಳೂರು, ಫೆಬ್ರವರಿ 14: ಕಾಫಿನಾಡಿನಲ್ಲಿ ಮಂಗನ ಕಾಯಿಲೆ (Monkey Fever) ಉಲ್ಬಣಗೊಂಡಿದ್ದು, ಒಂದೇ ದಿನ ನಾಲ್ವರಲ್ಲಿ ಮಂಗನ ಕಾಯಿಲೆ ದೃಢ ಪಟ್ಟಿದೆ. ಕೊಪ್ಪ ಮತ್ತು ಎನ್​ಆರ್​ ಪುರ ತಾಲೂಕಿನ ನಾಲ್ವರಲ್ಲಿ ಕೆಎಫ್​ಡಿ ದೃಢಪಟ್ಟಿದೆ. ಒಟ್ಟು ಜಿಲ್ಲೆಯಲ್ಲಿ 18 ಜನರಲ್ಲಿ ಕೆಎಫ್​ಡಿ ಪತ್ತೆಯಾಗಿದೆ. ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ತೆರೆದು ಚಿಕಿತ್ಸೆ ನೀಡಲಾಗಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ.

ದಿನದಿಂದ ದಿನಕ್ಕೆ ಕೆಎಫ್​ಡಿ ಹೆಚ್ಚುತ್ತಲೇ ಇದೆ. ಹಾಗಾಗಿ ಮಂಗನ ಕಾಯಿಲೆ ಪತ್ತೆಯಾದ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ಮಾಡಿದ್ದು, ರಕ್ತದ ಮಾದರಿ ಸಂಗ್ರಹಿಸಿದ್ದಾರೆ. ಸದ್ಯ ಕಾಡಿಗೆ ತೆರಳದಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಚಿಕ್ಕಮಗಳೂರು: ಮತ್ತೆ ಇಬ್ಬರಲ್ಲಿ ಕಾಣಿಸಿಕೊಂಡ ಮಂಗನ ಕಾಯಿಲೆ, ರೋಗಿಗಳ ಸಂಖ್ಯೆ 6ಕ್ಕೆ ಏರಿಕೆ

ಸ್ವಚ್ಛಂದ ಗಾಳಿ ಸುಂದರ ಪರಿಸರಕ್ಕೆ ಹೇಳಿ ಮಾಡಿಸಿದ ಜಿಲ್ಲೆ ಅಂದರೆ ಅದು ಕಾಫಿನಾಡು ಚಿಕ್ಕಮಗಳೂರು. ಮಳೆಗಾಲ ಕಳೆದು ಇನ್ನೇನು ಚಳಿಗಾಲ ಮುಗಿದು ಬೇಸಿಗೆ ಆರಂಭವಾಗಿದೆ. ಬಿಸಿಲ ಬೇಗೆ ಹೆಚ್ಚಾಗುತ್ತಿದ್ದಂತೆ ಕಾಫಿನಾಡಿಗೆ ಮಹಾಮಾರಿ‌ KFD ಕಾಯಿಲೆ ಸದ್ದಿಲ್ಲದೆ ಎಂಟ್ರಿ ಕೊಟ್ಟಿದೆ. ಇದೀಗ ಈ ಮಾರಣಾಂತಿಕ ರೋಗ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಆರಂಭದಲ್ಲಿ ತೀವ್ರ ಸ್ವರೂಪ ಪಡೆದಿದ್ದ ಕೆ.ಎಫ್.ಡಿ. ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿಯ ಮತ್ತಿಖಂಡ‌ ಗ್ರಾಮದ 25 ವರ್ಷದ ಯುವಕನಲ್ಲಿ ಕಾಣಿಸಿಕೊಂಡಿತ್ತು. ಬಳಿಕ ಜಿಲ್ಲೆಯಲ್ಲಿ 7 ಜನರಲ್ಲಿ ಮಂಗನ ಕಾಯಿಲೆ ಕಾಣಸಿಕೊಂಡು ಆತಂಕ ಸೃಷ್ಟಿ ಮಾಡಿತ್ತು. NR ಪುರ ಗ್ರಾಮದ ಮೇಲ್ಪಾಲ್ ಗ್ರಾಮದಲ್ಲೇ ಮೂರು ಜನರಲ್ಲಿ KFD ಕಾಣಿಸಿಕೊಂಡಿತ್ತು.

ಇದನ್ನೂ ಓದಿ: ಚಿಕ್ಕಮಗಳೂರು: ಮತ್ತೆ ಕಾಣಿಸಿಕೊಂಡ ಮಂಗನ ಕಾಯಿಲೆ, ಆರೋಗ್ಯ ಇಲಾಖೆ ಅಲರ್ಟ್​ ಘೋಷಣೆ

ಕಳೆದ‌ ವರ್ಷ ಜಿಲ್ಲೆಯಲ್ಲಿ 132 ಜನರಲ್ಲಿ KFD ಕಾಣಿಸಿಕೊಂಡು ನಾಲ್ವರನ್ನ ಬಲಿ ಪಡೆದಿತ್ತು. ಕಾಡಂಚಿನ ತಾಲೂಕುಗಳಾದ ಚಿಕ್ಕಮಗಳೂರು, ಕೊಪ್ಪ, ಎನ್.ಆರ್.ಪುರ, ಶೃಂಗೇರಿ ತಾಲೂಕುಗಳಲ್ಲಿ ಮಂಗನ ಕಾಯಿಲೆ ತನ್ನ ರುದ್ರರೂಪ ತಾಳುವ ಮುನ್ನ ಅರೋಗ್ಯ ಇಲಾಖೆ ‌KFD ಅಲರ್ಟ್ ಘೋಷಣೆ ಮಾಡಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.