ಚಿಕ್ಕಮಗಳೂರು; ಬಿರಿಯಾನಿ ಸೇವಿಸಿ 17 ಮಂದಿ ಅಸ್ವಸ್ಥ, ಆಸ್ಪತ್ರೆಗೆ ಶಾಸಕ ಭೇಟಿ
ಮನೆಯ ಶುಭಕಾರ್ಯ ಮುಗಿಸಿ ಸಂಜೆ ಸಂಬಂಧಿಕರಿಗಾಗಿ ಬಿರಿಯಾನಿ ತಯಾರಿಸಲಾಗಿತ್ತು. ಬಿರಿಯಾನಿ ಸೇವಿಸಿದವರಿಗೆ ಭೇದಿ, ವಾಂತಿ ಕಾಣಿಸಿಕೊಂಡಿದ್ದು 17 ಜನ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡವರನ್ನ ಕಡೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು ಆಸ್ಪತ್ರೆ ಆಡಳಿತಾಧಿಕಾರಿ ಡಾ.ಎಸ್.ಎನ್.ಉಮೇಶ್ ಹಾಗೂ ಸಿಬ್ಬಂದಿ ಚಿಕಿತ್ಸೆ ನೀಡಿದ್ದಾರೆ.
ಚಿಕ್ಕಮಗಳೂರು, ನ.21: ಕುಟುಂಬ ಸಮಾರಂಭದಲ್ಲಿ ಬಿರಿಯಾನಿ (Biryani) ಸೇವಿಸಿದ 17 ಮಂದಿ ಅಸ್ವಸ್ಥಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮರವಂಜಿ ಗ್ರಾಮದ ಮನೆಯೊಂದರಲ್ಲಿ ನಡೆದಿದೆ. ಅಸ್ವಸ್ಥರಾದವರು ಕಡೂರು ಸರಕಾರಿ ಆಸ್ಪತ್ರೆಯಲ್ಲಿ (Kadur Government Hospital) ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಮತ್ತೊಂದೆಡೆ ಬೆಂಗಳೂರು ವಿವಿ ಹಾಸ್ಟೆಲ್ ಊಟದಲ್ಲಿ ಹುಳುಗಳು ಪತ್ತೆಯಾಗಿದ್ದು ಹಾಸ್ಟೆಲ್ ವಾರ್ಡನ್ ನಿರ್ಲಕ್ಷ್ಯದ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ಹೊರ ಹಾಕಿದ್ದಾರೆ.
ಬಿರಿಯಾನಿ ತಿಂದು ಆಸ್ಪತ್ರೆ ಸೇರಿದ ಗ್ರಾಮಸ್ಥರು
ಮನೆಯ ಶುಭಕಾರ್ಯ ಮುಗಿಸಿ ಸಂಜೆ ಸಂಬಂಧಿಕರಿಗಾಗಿ ಬಿರಿಯಾನಿ ತಯಾರಿಸಲಾಗಿತ್ತು. ಬಿರಿಯಾನಿ ಸೇವಿಸಿದವರಿಗೆ ಭೇದಿ, ವಾಂತಿ ಕಾಣಿಸಿಕೊಂಡಿದ್ದು 17 ಜನ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡವರನ್ನ ಕಡೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು ಆಸ್ಪತ್ರೆ ಆಡಳಿತಾಧಿಕಾರಿ ಡಾ.ಎಸ್.ಎನ್.ಉಮೇಶ್ ಹಾಗೂ ಸಿಬ್ಬಂದಿ ಚಿಕಿತ್ಸೆ ನೀಡಿದ್ದಾರೆ. ಆಸ್ಪತ್ರೆಯ ಮೂರು ಕೊಠಡಿಗಳಲ್ಲಿ ಅಸ್ವಸ್ಥರನ್ನು ದಾಖಲಿಸಲಾಗಿದೆ. ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಅಸ್ವಸ್ಥರಲ್ಲಿ ಒಂಬತ್ತು ಮಂದಿ ಮಹಿಳೆಯರಿದ್ದಾರೆ. ಶಾಸಕ ಕೆ ಎಸ್ ಆನಂದ್ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿದರು.
ಇದನ್ನೂ ಓದಿ: ರಾಮನಗರ: ದರ್ಗಾದಲ್ಲಿ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಜನರು ಅಸ್ವಸ್ಥ
ಬೆಂಗಳೂರು ವಿವಿ ಹಾಸ್ಟೆಲ್ ಊಟದಲ್ಲಿ ಹುಳುಗಳು ಪತ್ತೆ
ಇನ್ನು ಮತ್ತೊಂದೆಡೆ ಬೆಂಗಳೂರು ವಿವಿ ಹಾಸ್ಟೆಲ್ನ ಊಟದಲ್ಲಿ ಹುಳುಗಳು ಪತ್ತೆಯಾಗಿವೆ. ಈ ಹಿನ್ನೆಲೆ ಹಾಸ್ಟೆಲ್ ವಾರ್ಡನ್ ನಿರ್ಲಕ್ಷ್ಯದ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ಹೊರ ಹಾಕಿದ್ದಾರೆ. ಕಳಪೆ ಆಹಾರ ನೀಡಲಾಗುತ್ತಿದೆ. ಇದನ್ನು ಪ್ರಶ್ನೆ ಮಾಡಿದರೆ ನಮ್ಮ ಮೇಲೆ ದಬ್ಬಾಳಿಕೆ ಮಾಡುತ್ತಾರೆ. ಕಳಪೆ ಆಹಾರ ತಿಂದು ಆರೋಗ್ಯಕ್ಕೆ ಸಮಸ್ಯೆಯಾದರೆ ಯಾರು ಹೊಣೆ. ಕೂಡಲೇ ವಾರ್ಡನ್ ಅಮಾನತುಗೊಳಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ