ಎರಡು ಸರ್ಕಾರಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 20ಕ್ಕೂ ಹೆಚ್ಚು ಜನರಿಗೆ ಗಾಯ

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಬಳಿ ಎರಡು ಸರ್ಕಾರಿ ಬಸ್ಸುಗಳ ಮಧ್ಯೆ ಅಪಘಾತ ಸಂಭವಿಸಿದೆ. ಎರಡೂ ಬಸ್​ಗಳು ಮುಖಾಮುಖಿ ಡಿಕ್ಕಿಯಾಗಿದ್ದರಿಂದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ.

ಎರಡು ಸರ್ಕಾರಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 20ಕ್ಕೂ ಹೆಚ್ಚು ಜನರಿಗೆ ಗಾಯ
ಬಸ್​ ಅಪಘಾತ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ರಮೇಶ್ ಬಿ. ಜವಳಗೇರಾ

Updated on: Dec 10, 2023 | 3:18 PM

ಚಿಕ್ಕಮಗಳೂರು , (ಡಿಸೆಂಬರ್ 10): ಎರಡು ಸರ್ಕಾರಿ ಬಸ್ಸುಗಳ ( Two KSRTC Buses) ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಎರಡೂ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಚಿಕ್ಕಮಗಳೂರು (Chikkamagaluru ) ಜಿಲ್ಲೆ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಬಳಿ ನಡೆದಿದೆ. ಬಸ್ಸುಗಳ ಅಪಘಾತಕ್ಕೆ ಎರಡೂ ಬಸ್ಸಿನ ಚಾಲಕರ ಬೇಜವಾಬ್ದಾರಿ ಹಾಗೂ ಅತಿ ವೇಗವಾಗಿ ಚಲಾಯಿಸಿದ್ದೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಅಪಘಾತದಿಂದ ಎರಡು ಬಸ್ಸಿನ ಚಾಲಕರಿಗೆ ಹೆಚ್ಚಾಗಿ ಗಾಯವಾಗಿದೆ. ಏಕೆಂದರೆ ಬಸ್ಸುಗಳು ಮುಖಾಮುಖಿ ಡಿಕ್ಕಿಯಾದ ಸಂದರ್ಭದಲ್ಲೂ ಕೂಡ ಎರಡು ಬಸ್ಸಿನ ಡ್ರೈವರ್ ಸೀಟಿನ ಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಹಾಗಾಗಿ, ಎರಡು ಬಸ್ಸಿನ ಚಾಲಕರಿಗೂ ಗಂಭೀರ ಗಾಯವಾಗಿದೆ. ಇನ್ನು ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಜನರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು 5 ಆಂಬುಲೆನ್ಸ್ ಗಳಲ್ಲಿ ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂಡಿಗೆರೆ ತಾಲ್ಲೂಕು ಬಹುತೇಕ ಮಲೆನಾಡು ಭಾಗದಿಂದ ಕೂಡಿದೆ. ಇಲ್ಲಿ ಹಾವು ಬಳಕಿನ ಮೈ ಕಟ್ಟಿನ ರಸ್ತೆಯೇ ಹೆಚ್ಚು. ಹಾಗಾಗಿ, ವಾಹನಗಳ ಚಾಲಕರು ಅತ್ಯಂತ ಜಾಗರೂಕರಾಗಿ ವಾಹನ ಚಲಾಯಿಸಬೇಕು. ಇಲ್ಲವಾದರೆ ಅಪಘಾತ ಕಟ್ಟಿಟ್ಟ ಬುತ್ತಿ. ಹಾವು ಬಳುಕಿನ ಮೈಕಟ್ಟಿನ ರಸ್ತೆಯಾಗಿರುವುದರಿಂದ ಮೂಡಿಗೆರೆ ತಾಲೂಕಿನ ಅಲ್ಲಲ್ಲೇ ಸಾಕಷ್ಟು ಅಪಘಾತಗಳು ಕೂಡ ಸಂಭವಿಸುತ್ತಿವೆ. ಆದರೆ, ತರಬೇತಿ ಪಡೆದ ಸರ್ಕಾರಿ ಬಸ್ಸಿನ ಚಾಲಕರು ವೇಗವಾಗಿ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸುತ್ತಿರುವುದಕ್ಕೆ ಸ್ಥಳೀಯರು ಅಸಮಾಧಾನ ಹೊರಹಾಕಿದ್ದಾರೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ