ವಿಲ್ಲುಪುರಂ-ಮಂಗಳೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅಪಘಾತ: ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ರಾಸುಗಳ ಸಾವು

ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ನಿಂದ ಕೊಟ್ಟಿಗೆಹಾರದವರೆಗೂ ನೂರಾರು ಬಿಡಾಡಿ ದನಗಳಿವೆ. ಜೊತೆಗೆ ರೈತರು ಸಾಕಿರುವ ರಾಸುಗಳು ಇವೆ. ರೈತರು ಕೂಡ ರಾಸುಗಳನ್ನ ಬೀದಿಯಲ್ಲಿ ಬಿಟ್ಟಿದ್ದಾರೆ. ಹಾಗಾಗಿ, ರಸ್ತೆಯಲ್ಲಿ ನಿತ್ಯ ರಾಸುಗಳು ಪ್ರಾಣ ಕಳೆದುಕೊಳ್ಳುತ್ತಿವೆ.

ವಿಲ್ಲುಪುರಂ-ಮಂಗಳೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅಪಘಾತ: ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ರಾಸುಗಳ ಸಾವು
ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ರಾಸುಗಳ ಸಾವು
Follow us
TV9 Web
| Updated By: ಆಯೇಷಾ ಬಾನು

Updated on:Sep 04, 2022 | 10:13 PM

ಚಿಕ್ಕಮಗಳೂರು: ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ರಾಸುಗಳು ಅಪಘಾತಕ್ಕೀಡಾಗಿ ಸಾವನ್ನಪ್ಪಿರುವ ದುರ್ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮೂಡಿಗೆರೆ-ಕೊಟ್ಟಿಗೆಹಾರ ಮಾರ್ಗದಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಚಕ್ಕಮಕ್ಕಿ ಬಳಿ ಇಂದು ಕೂಡ ಅಪಘಾತದಿಂದ ಎರಡು ಜಾನುವಾರುಗಳು ಸಾವನ್ನಪ್ಪಿವೆ.

ಮೂಡಿಗೆರೆಯಲ್ಲಿ ಹಾದುಹೋಗುವ ವಿಲ್ಲುಪುರಂ-ಮಂಗಳೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅಪಘಾತದಿಂದ ಒಂದು-ಎರಡು ಜಾನುವಾರುಗಳು ಸಾವನ್ನಪ್ಪುತ್ತಿವೆ. ಹತ್ತಾರು ಹಳ್ಳಿಗಳಲ್ಲಿ ರಸ್ತೆ ಮಧ್ಯೆ ನಿಲ್ಲುವ ಅಥವಾ ರಸ್ತೆ ಬದಿ ಮೇಯುತ್ತಿದ್ದ ರಾಸುಗಳು ಅಪಘಾತಕ್ಕೀಡಾಗಿ ಸಾವನ್ನಪ್ಪುತ್ತಿವೆ. ರಾಸುಗಳು ರಸ್ತೆ ಮಧ್ಯೆ ಮಲಗುವುದರಿಂದ ರಾತ್ರಿ ವೇಳೆ ವಾಹನ ಸಾವರರು ವೇಗವಾಗಿ ಹೋಗುವುದರಿಂದ ಒಂದೆಡೆ ರಾಸುಗಳು ಸಾವನ್ನಪ್ಪುತ್ತಿವೆ. ಮತ್ತೊಂದೆಡೆ ಅಪಘಾತಗಳನ್ನ ತಪ್ಪಿಸಲು ಹೋಗಿ ಕಾರು-ಬೈಕ್‍ಗಳು ಅಪಘಾತಗಳಾಗಿ ವಾಹನ ಸವಾರರು ಗಾಯಾಳುಗಳಾಗುತ್ತಿದ್ದಾರೆ.

ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ನಿಂದ ಕೊಟ್ಟಿಗೆಹಾರದವರೆಗೂ ನೂರಾರು ಬಿಡಾಡಿ ದನಗಳಿವೆ. ಜೊತೆಗೆ ರೈತರು ಸಾಕಿರುವ ರಾಸುಗಳು ಇವೆ. ರೈತರು ಕೂಡ ರಾಸುಗಳನ್ನ ಬೀದಿಯಲ್ಲಿ ಬಿಟ್ಟಿದ್ದಾರೆ. ಹಾಗಾಗಿ, ರಸ್ತೆಯಲ್ಲಿ ನಿತ್ಯ ರಾಸುಗಳು ಪ್ರಾಣ ಕಳೆದುಕೊಳ್ಳುತ್ತಿವೆ. ಈ ಬಗ್ಗೆ ಜಿಲ್ಲಾಡಳಿತವಾಗಲಿ ಅಥವಾ ಗ್ರಾಮ ಪಂಚಾಯಿತಿಯೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಆದ್ದರಿಂದ ಸರ್ಕಾರ ಬಿಡಾಡಿ ದನಗಳನ್ನ ಗೋಶಾಲೆಗೆ ಸೇರಿಸಬೇಕೆಂದು ಸ್ಥಳೀಯರು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಜಾನುವಾರುಗಳ ಮೇವಿಗೆ ಇದ್ದ ಗೋಮಾಳಗಳು ಒತ್ತುವರಿಯಾದ ಹಿನ್ನೆಲೆ ರಾಸುಗಳು ಎಲ್ಲೆಂದರಲ್ಲಿ ಮೇಯಲು ಹೋಗಿ ಪ್ರಾಣ ಕಳೆದುಕೊಳ್ಳುತ್ತಿವೆ ಎಂದು ಸ್ಥಳೀಯರು ಗೋಮಾಳ ಒತ್ತುವರಿದಾರರ ವಿರುದ್ಧವೂ ಕಿಡಿಕಾರಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:13 pm, Sun, 4 September 22