ಕೊನೆಯ ಬಾರಿ ಹೆತ್ತವಳ ಮುಖ ನೋಡಲು ಬಿಡಲಿಲ್ಲ ಕ್ರೂರಿ ಕೊರೊನಾ!

ಚಿಕ್ಕಮಗಳೂರು: ಹೆತ್ತು-ಹೊತ್ತು ಸಾಕಿ-ಸಲಹಿ ಬದುಕಿನ ದಾರಿ ತೋರಿದ್ದ ಹೆತ್ತವಳ ಅಂತ್ಯಸಂಸ್ಕಾರ ಮಾಡೋದು ಇರಲಿ, ಕೊನೆಯ ಬಾರಿ ಮುಖ ನೋಡಕ್ಕೂ ಕ್ರೂರಿ ಕೊರೊನ ಅವಕಾಶ ನೀಡಿಲ್ಲ. ಇಂತಹ ಒಂದು ಕರುಳು ಹಿಂಡುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಅಜ್ಜಂಪುರದ ಡಣಾಯಕಪುರದಲ್ಲಿ ನಡೆದಿದೆ. ತಾಯಿ ಮಸಣದ ಚಿತೆ ಮೇಲೆ, ಮಗ ಆಸ್ಪತ್ರೆಯ ಬೆಡ್ ಮೇಲೆ: ಕೊರೊನಾದಿಂದ ಮೃತಪಟ್ಟ ಹೆತ್ತ ತಾಯಿ ಮಸಣದ ಚಿತೆ ಮೇಲಿದ್ರೆ, ಋಣ ತೀರಿಸಬೇಕಾದ ಮಗ ಆಸ್ಪತ್ರೆಯ ಬೆಡ್ ಮೇಲೆ ಮತ್ತದೇ ಕೊರೊನಾದಿಂದ ಬಳಲುತ್ತಿದ್ದ. ಒಂದೆಡೆ ಈ […]

ಕೊನೆಯ ಬಾರಿ ಹೆತ್ತವಳ ಮುಖ ನೋಡಲು ಬಿಡಲಿಲ್ಲ ಕ್ರೂರಿ ಕೊರೊನಾ!
Follow us
ಸಾಧು ಶ್ರೀನಾಥ್​
| Updated By:

Updated on: Jun 20, 2020 | 12:54 PM

ಚಿಕ್ಕಮಗಳೂರು: ಹೆತ್ತು-ಹೊತ್ತು ಸಾಕಿ-ಸಲಹಿ ಬದುಕಿನ ದಾರಿ ತೋರಿದ್ದ ಹೆತ್ತವಳ ಅಂತ್ಯಸಂಸ್ಕಾರ ಮಾಡೋದು ಇರಲಿ, ಕೊನೆಯ ಬಾರಿ ಮುಖ ನೋಡಕ್ಕೂ ಕ್ರೂರಿ ಕೊರೊನ ಅವಕಾಶ ನೀಡಿಲ್ಲ. ಇಂತಹ ಒಂದು ಕರುಳು ಹಿಂಡುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಅಜ್ಜಂಪುರದ ಡಣಾಯಕಪುರದಲ್ಲಿ ನಡೆದಿದೆ.

ತಾಯಿ ಮಸಣದ ಚಿತೆ ಮೇಲೆ, ಮಗ ಆಸ್ಪತ್ರೆಯ ಬೆಡ್ ಮೇಲೆ: ಕೊರೊನಾದಿಂದ ಮೃತಪಟ್ಟ ಹೆತ್ತ ತಾಯಿ ಮಸಣದ ಚಿತೆ ಮೇಲಿದ್ರೆ, ಋಣ ತೀರಿಸಬೇಕಾದ ಮಗ ಆಸ್ಪತ್ರೆಯ ಬೆಡ್ ಮೇಲೆ ಮತ್ತದೇ ಕೊರೊನಾದಿಂದ ಬಳಲುತ್ತಿದ್ದ. ಒಂದೆಡೆ ಈ ನೋವಾದ್ರೆ ಮತ್ತೊಂದೆಡೆ ಮೃತಪಟ್ಟ ವೃದ್ಧೆಯಿಂದ ಕೊರೊನಾದ ಆರ್ಭಟ ಇಲ್ಲಿಗೆ ನಿಲ್ಲುತ್ತೋ ಅಥವಾ ಮುಂದುವರಿಯುತ್ತೋ ಅನ್ನೋ ಆತಂಕ ಕೂಡ ಮನೆ ಮಾಡಿದೆ. ಯಾಕಂದ್ರೆ, ಗುರುವಾರ ನಗರದ ಕೋವಿಡ್ ಆಸ್ವತ್ರೆಯಲ್ಲಿ ಕೊರೊನಾದಿಂದ 72 ವರ್ಷದ ವೃದ್ಧೆ ಸಾವನ್ನಪ್ಪಿದ ಪ್ರಕರಣ ಸಂಬಂಧ ವೃದ್ಧೆಯ‌ 52 ವರ್ಷದ ಮಗನಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ಕೊರೊನಾದಿಂದ ಮೃತಪಟ್ಟ ಮಹಿಳೆಯ ಸಂಪರ್ಕದಿಂದ ಸೋಂಕು: ಈಗ ವೃದ್ಧೆಯ ಟ್ರಾವೆಲ್ ಹಿಸ್ಟರಿ ದಾವಣಗೆರೆ-ಚಿಕ್ಕಮಗಳೂರು ಎರಡು ಜಿಲ್ಲೆಗೂ ಕಂಟಕವಾಗಿ ಪರಿಣಮಿಸಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲೂ ಆತಂಕ ಹುಟ್ಟಿಸುತ್ತಿದ್ದು, ಬೀರೂರು, ಅಜ್ಜಂಪುರ ಭಾಗದ ಜನರಲ್ಲಿ ಆತಂಕ ಮನೆ ಮಾಡಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಕೊರೊನಾದಿಂದ ಮೃತಪಟ್ಟ ಮಹಿಳೆಯೊಬ್ಬರ ಪ್ರಾಥಮಿಕ ಸಂಪರ್ಕದಿಂದ ವೃದ್ಧೆಗೆ ಕೊರೊನಾ ಸೋಂಕು ತಗುಲಿತ್ತು. ಚನ್ನಗಿರಿಯ ಕುಂಬಾರ ಬೀದಿಯಲ್ಲಿ ಮೃತ ವೃದ್ಧೆಯ ಮಗಳ ಮನೆಯಿದ್ದು, ವೃದ್ಧೆಯೂ ಮಗಳ ಮನೆಗೆ ತೆರಳಿದ್ದರು. ಅವರ ಎದುರು ಮನೆಯ 56 ವರ್ಷದ ಮಹಿಳೆಗೆ ಕೊರೊನಾ ಸೋಂಕು ತಗುಲಿ ಶಿವಮೊಗ್ಗದ ಆಸ್ಪತ್ರೆಯಲ್ಲಿ ಮೃತರಾಗಿದ್ದರು.

ವೃದ್ಧೆಯಿಂದ ಕುಂಬಾರು ಬೀದಿಯನ್ನು‌ ಸೀಲ್ ಡೌನ್ ಮಾಡಲಾಗಿತ್ತು. ಚನ್ನಗಿರಿಯಲ್ಲಿ ವೃದ್ಧೆಗೆ‌ ಆರೋಗ್ಯ ಸಮಸ್ಯೆ ಕಾಡಿದ್ದು ಚನ್ನಗಿರಿಯ ಆಸ್ವತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.‌ ಅಲ್ಲಿ ಹುಷಾರಾಗದ ಕಾರಣ ಚಿಕ್ಕಮಗಳೂರು ಜಿಲ್ಲೆಯ ಬೀರೂರಿಗೆ ಬಂದು ಸೋಮವಾರ ಪರಿಚಯವಿದ್ದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ನಂತರದಲ್ಲಿ ಮಂಗಳವಾರ ಅಜ್ಜಂಪುರದ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಯಲ್ಲಿ ವೃದ್ಧೆ ಚಿಕಿತ್ಸೆಗಾಗಿ ದಾಖಲಾಗಿದ್ದರು.

ಮಂಗಳವಾರ ಶಿವಮೊಗ್ಗದಲ್ಲಿ‌ ಮಗಳ ಮನೆಯ ಎದುರಿನ ಮಹಿಳೆಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ವೃದ್ಧೆಯನ್ನು ತರೀಕೆರೆಗೆ ಕಳುಹಿಸಿ ಗಂಟಲು ದ್ರವವನ್ನ ಸಂಗ್ರಹಿಸಿ ಶಿವಮೊಗ್ಗ ‌ಲ್ಯಾಬ್​ಗೆ‌ ಕಳುಹಿಸಲಾಗಿತ್ತು. ಬುಧವಾರ ಸಂಜೆ ಸುಮಾರಿಗೆ ಚಿಕ್ಕಮಗಳೂರು ಕೋವಿಡ್ ಆಸ್ಪತ್ರೆಗೆ ವೃದ್ಧೆಯನ್ನು ದಾಖಲು ಮಾಡಲಾಯಿತು. ಗುರುವಾರ ಸಂಜೆ ವೇಳೆಗೆ ಮೃತ ವೃದ್ಧೆಗೆ ಸೋಂಕು‌ ತಗುಲಿರುವುದು ದೃಢಪಟ್ಟಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಮಧ್ಯಾಹ್ನ 12.30ರ ಸುಮಾರಿಗೆ ಮೃತರಾಗಿದ್ದಾರೆ.

ವೈದ್ಯರು, ದಾದಿಯರಿಗೂ ಕೊರೊನಾ ಆತಂಕ: ಮೂಲಗಳ ಪ್ರಕಾರ ಮೃತ ವೃದ್ದೆಗೆ ಒಟ್ಟು ಆರು ವೈದ್ಯರು ಹಾಗೂ ದಾದಿಯರು ಚಿಕಿತ್ಸೆ ನೀಡಿದ್ದರು. ಇವರಿಗೆ ಕೊರೊನಾ ಕಂಟಕ ಎದುರಾಗುವ ಸಾಧ್ಯತೆಯೂ ಇದೆ. ವೃದ್ಧೆಯ ಸಂಪರ್ಕದಲ್ಲಿದ್ದ 36ಕ್ಕೂ ಹೆಚ್ಚು ಜನರನ್ನ ಜಿಲ್ಲಾಡಳಿತ ಕೋವಿಡ್ ಪರೀಕ್ಷೆ ಮಾಡಿದ್ದು, ಕ್ವಾರಂಟೈನ್​ಗೆ ಸೂಚಿಸಿದೆ. ಇಷ್ಟೇ ಅಲ್ಲದೇ ಅಜ್ಜಂಪುರ, ಬೀರೂರಿನಲ್ಲಿ ಜನರಲ್ಲಿ ಆತಂಕ ಹೆಚ್ಚಾಗಿದೆ.

ವೃದ್ಧೆಯ ಸಾವಿನ ವಿಷಯ ತಿಳಿಯುತ್ತಿದ್ದಂತೆ, ಡಣಾಯಕಪುರ ಗ್ರಾಮದಲ್ಲೂ ಹಲವರು ಸೆಲ್ಫ್ ಕ್ವಾರಂಟೈನ್ ಆಗಿದ್ದಾರೆ. ಮನೆಯಿಂದ ಹೊರ ಬರಲು ಗ್ರಾಮಸ್ಥರು ಹೆದರುತಿದ್ದಾರೆ. ಗುರುವಾರ ತಡರಾತ್ರಿ ವೃದ್ಧೆಯ ಜಮೀನಿನಲ್ಲಿ ಜಿಲ್ಲಾಡಳಿತ ಸೀಮಿತ ಅಧಿಕಾರ ನೇತೃತ್ವದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಿದೆ.

ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ