AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂವರು ಮಕ್ಕಳ ತಾಯಿಯ ಡೆಡ್ಲಿ ಮರ್ಡರ್​​: ಪ್ರಾಣಕ್ಕೆ ಸಂಚು ತಂತಾ ಲವ್ವಿಡವ್ವಿ?

ಆಕೆ ಮೂರು ಮಕ್ಕಳ ತಾಯಿ. ಅದ್ಯಾವುದೋ ಕಾರಣಕ್ಕೆ ಕಳೆದ ಮೂರು ವರ್ಷಗಳ ಹಿಂದೆ ಗಂಡನನ್ನು ಬಿಟ್ಟು ತವರು ಮನೆ ಸೇರಿದ್ದಳು. ಕಾಫಿತೋಟದಲ್ಲಿ ಕೆಲಸ ಮಾಡಿಕೊಂಡಿದ್ದ ಈಕೆ ಕಳೆದ ಕೆಲದಿನಗಳ ಹಿಂದೆ ದಿಢೀರ್​​ ನಾಪತ್ತೆಯಾಗಿದ್ದಾಳೆ. ಎಷ್ಟು ಹುಡುಕಿದರೂ ಮಗಳು ಸಿಗದ ಹಿನ್ನಲೆ ತಂದೆ ಪೊಲೀಸರಿಗೆ ದೂರನ್ನೂ ನೀಡಿದ್ದಾರೆ. ಆದ್ರೆ ಆ ಬೆನ್ನಲ್ಲೇ ಮನೆಗೆ ಹಿಂದಿರುಗಿ ಬಂದಿದ್ದ ಮಹಿಳೆ, ಮರುದಿನ ಭೀಕರವಾಗಿ ಕೊಲೆಯಾಗಿದ್ದಾಳೆ. ಆಕೆಯನ್ನು ಕೊಂದಿದ್ದು ಯಾರು? ಘಟನೆ ಏನು ಎನ್ನುವ ಮಾಹಿತಿ ಇಲ್ಲಿದೆ.

ಮೂವರು ಮಕ್ಕಳ ತಾಯಿಯ ಡೆಡ್ಲಿ ಮರ್ಡರ್​​: ಪ್ರಾಣಕ್ಕೆ ಸಂಚು ತಂತಾ ಲವ್ವಿಡವ್ವಿ?
ಕೊಲೆಯಾದ ಸಂಧ್ಯಾ.
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಪ್ರಸನ್ನ ಹೆಗಡೆ|

Updated on: Dec 03, 2025 | 2:56 PM

Share

ಚಿಕ್ಕಮಗಳೂರು, ಡಿಸೆಂಬರ್​​ 03: ಗಂಡನನ್ನು ಬಿಟ್ಟು ಮಕ್ಕಳ ಜೊತೆ ತಾಯಿಮನೆ ಸೇರಿದ್ದ ಮಹಿಳೇಯೋರ್ವರು ಭೀಕರ ಕೊಲೆಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಅರೇನೂರು ಗ್ರಾಮದಲ್ಲಿ ನಡೆದಿದೆ. ಮನೆಯ ಹಿಂದೆ ಬಟ್ಟೆ ತೊಳೆಯುತ್ತಿದ್ದ ಮಹಿಳೆಯ ಕುತ್ತಿಗೆಯನ್ನು ಚಾಕುವಿನಿಂದ ಸೀಳಿ ಬರ್ಬರ ಹತ್ಯೆ ಮಾಡಲಾಗಿದೆ. ಸಂಧ್ಯಾ (32) ಮೃತ ಮಹಿಳೆಯಾಗಿದ್ದಾರೆ.

ಮೃತ ಸಂಧ್ಯಾ ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಅರೇನೂರು ಗ್ರಾಮದವರು. ಕಳೆದ 10 ವರ್ಷಗಳ ಹಿಂದೆ ಅರೇನೂರು ಗ್ರಾಮದಿಂದ 20 ಕಿಮೀ ದೂರದ ಶಿರಗೋಳ ಗ್ರಾಮದ ರವಿ ಅವರೊಂದಿಗೆ ಸಂಧ್ಯಾ ಮದುವೆಯಾಗಿತ್ತು. ಇಬ್ಬರ ದಾಂಪತ್ಯಕ್ಕೆ ಸಾಕ್ಷಿ ಎಂಬಂತೆ ಮೂವರು ಮಕ್ಕಳಿದ್ದರು. ಆದರೆ ಇವರಿಬ್ಬರ ನಡುವೆ ಅದೇನಾಯ್ತೋ ಗೊತ್ತಿಲ್ಲ. ಗಂಡನ ಬಿಟ್ಟು ಬಂದಿದ್ದ ಸಂಧ್ಯಾ, ಕಳೆದ 3 ವರ್ಷಗಳಿಂದ ಅರೇನೂರು ಗ್ರಾಮದ ತಾಯಿ ಮನೆ ಸೇರಿದ್ದರು. ಕಾಫಿತೋಟದಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಈ ನಡುವೆ ಕಳೆದ ಕೆಲ ದಿನಗಳ ಹಿಂದೆ ಸಂಧ್ಯಾ ನಾಪತ್ತೆಯಾಗಿದ್ದು, ಮನೆಯವರು ಎಷ್ಟು ಹುಡುಕಿದ್ರೂ ಅವರ ಸುಳಿವಿರಲಿಲ್ಲ. ಆತಂಕಗೊಂಡ ಅವರ ತಂದೆ ಈ ಬಗ್ಗೆ ಆಲ್ದೂರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ಕೂಡ ನೀಡಿದ್ದರು. ಆದರೆ ಸೋಮವಾರ ಸಂಜೆ ಅರೇನೂರು ಗ್ರಾಮದ ತಾಯಿ ಮನೆಗೆ ಸಂಧ್ಯಾ ವಾಪಸ್ ಬಂದಿದ್ದಾರೆ. ತಾನು ಸಂಬಂಧಿಕರ ಮನೆಗೆ ಹೋಗಿದ್ದೆ ಎಂದು ಮನೆಯವರಿಗೆ ತಿಳಿಸಿದ್ದಾರೆ. ಆದ್ರೆ ನಿನ್ನೆ ಬೆಳಗ್ಗೆ ಮನೆಯ ಹಿಂಭಾಗ ಅವರು ಬಟ್ಟೆ ತೊಳೆಯುತ್ತಿದ್ದ ಸಂಧ್ಯಾರ ಕುತ್ತಿಗೆಯನ್ನು ಚಾಕುವಿನಿಂದ ಸೀಳಲಾಗಿದೆ. ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯದಲ್ಲಿ ಅವರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ದರ್ಶನ್ ಸಾವು; ಪೊಲೀಸರಿಂದಲೇ ಕೊಲೆ ಆರೋಪ, ಪ್ರಕರಣ ಸಿಐಡಿ ಹೆಗಲಿಗೆ

ಇನ್ನು ಸಂಧ್ಯಾ ಕೊಲೆಗೆ ಲವ್​​ ಕಹಾನಿ ಕಾರಣವಾಗಿರಬಹುರು ಎಂಬ ಅನುಮಾನ ವ್ಯಕ್ತವಾಗಿದೆ. ತನ್ನ ಕುಟುಂಬದ ಹತ್ತಿರದ ಸಂಬಂಧಿಯೊಂದಿಗೆ ಮೂರು ಮಕ್ಕಳ ತಾಯಿ ಸಂಧ್ಯಾಳಿಗೆ ಪ್ರೇಮವಾಗಿತ್ತು. ಗಂಡನಿಂದ ದೂರವಾಗಿದ್ದ ಸಂಧ್ಯಾ ಮತ್ತೊಂದು ಮದುವೆ ಬಗ್ಗೆ ಯೋಚನೆ ಮಾಡಿದ್ದರು. ಆದರೆ ಈ ಪ್ರೇಮಕ್ಕೆ ಕುಟುಂಬದ ವಿರೋಧ ವ್ಯಕ್ತವಾಗಿತ್ತು. ಆ ಬೆನ್ನಲ್ಲೇ ಮಕ್ಕಳನ್ನು ಕರೆದುಕೊಂಡ ಸಂಧ್ಯಾ ಪ್ರೇಮಿ ಜೊತೆ ಹೋಗಿದ್ದರು. ಇತ್ತ ತಂದೆ ಮಗಳ ಮಿಸ್ಸಿಂಗ್​​ ಬಗ್ಗೆ ದೂರು ನೀಡಿದ್ದರಿಂದ, ಪೊಲೀಸರಿಗೆ ಇವರ ಸುಳಿವು ಸಿಕ್ಕ ಮಾಹಿತಿ ಬೆನ್ನಲ್ಲೇ ತಾಯಿ ಮನೆಗೆ ಸಂಧ್ಯಾ ಹಿಂದಿರುಗಿದ್ದರು. ಇದೇ ಕಾರಣಕ್ಕೆ ಆಕ್ರೋಶಗೊಂಡ ಪ್ರೇಮಿ, ಸಂಧ್ಯಾ ಹತ್ಯೆಮಾಡಿದ್ನಾ ಎಂಬ ಅನುಮಾನ ವ್ಯಕ್ತವಾಗಿದೆ. ಘಟನೆ ಬಗ್ಗೆ ಆಲ್ದೂರು ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ್ದು, ಹಂತಕನ ಬಂಧನಕ್ಕೆ ಎರಡುತಂಡ ರಚನೆ ಮಾಡಿ ಪೊಲೀಸರು ಶೊಧ ನಡೆಸುತ್ತಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ