ಆನೆ ದಾಳಿಗೆ ಮಹಿಳೆ ಬಲಿ: ಸಾಂತ್ವನ ಹೇಳಲು ಬಂದ ಬಿಜೆಪಿ ಶಾಸಕನ ಮೇಲೆ ಹಲ್ಲೆ, ಪೊಲೀಸರ ವೈಫಲ್ಯ ಎಂದ ಕುಮಾರಸ್ವಾಮಿ

| Updated By: ರಮೇಶ್ ಬಿ. ಜವಳಗೇರಾ

Updated on: Nov 20, 2022 | 11:02 PM

ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಮೇಲೆ ಪ್ರತಿಭಟನಾ ನಿರತರು ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಆನೆ ದಾಳಿಗೆ ಮಹಿಳೆ ಬಲಿ:  ಸಾಂತ್ವನ ಹೇಳಲು ಬಂದ ಬಿಜೆಪಿ ಶಾಸಕನ ಮೇಲೆ ಹಲ್ಲೆ, ಪೊಲೀಸರ ವೈಫಲ್ಯ ಎಂದ ಕುಮಾರಸ್ವಾಮಿ
ಶಾಸಕ ಎಂ.ಪಿ.ಕುಮಾರಸ್ವಾಮಿ ಮೇಲೆ ಹಲ್ಲೆ
Follow us on

ಚಿಕ್ಕಮಗಳೂರು: ಮೂಡಿಗೆರೆ ತಾಲೂಕು ಕುಂದೂರು ಸಮೀಪದ ಹುಲ್ಲೆಮನೆ ಗ್ರಾಮದ ಶೋಭಾ (45) ಕಾಡಾನೆ ದಾಳಿಯಿಂದ ಭಾನುವಾರ ಬೆಳಗ್ಗೆ ಮೃತಪಟ್ಟಿದ್ದು, ಸ್ಥಳಕ್ಕೆ ತಡವಾಗಿ ಬಂದ ಶಾಸಕ ಎಂ.ಪಿ.ಕುಮಾರಸ್ವಾಮಿ (BJP MLA MP Kumaraswamy) ಅವರನ್ನು ಅಟ್ಟಾಡಿಸಿ ಹಲ್ಲೆ ಮಾಡಿರುವುದಲ್ಲದೇ ಬಟ್ಟೆಯನ್ನು ಹರಿದಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಭಾನುವಾರ ಬೆಳಗ್ಗೆ ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದಾಗಿ ಶೋಭಾ ಮೃತಪಟ್ಟಿದ್ದರು. ಘಟನೆ ಬೆಳಗ್ಗೆ ನಡೆದಿದ್ದರೂ ಕ್ಷೇತ್ರದ ಶಾಸಕ ಎಂ.ಪಿ.ಕುಮಾರಸ್ವಾಮಿ ಸಂಜೆ ಗ್ರಾಮಕ್ಕೆ ಬಂದಿದ್ದಾರೆ.  ಈ ವೇಳೆ ಗ್ರಾಮಸ್ಥರು ಆಕ್ರೋಶಗೊಂಡು ಶಾಸಕ ಕುಮಾರಸ್ವಾಮಿ ಅವರಿಗೆ ಘೇರಾವ್ ಹಾಕಿದಲ್ಲದೆ. ಗ್ರಾಮದ ಮುಖ್ಯರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಬಂದಿದ್ದಾರೆ. ತೀವ್ರ ಅಕ್ರೋಶಗೊಂಡಿದ್ದ ಕೆಲ ಗ್ರಾಮಸ್ಥರು ಅವಾಚ್ಯ ಶಬ್ಧಗಳಿಂದ ನಿಂದಿಸಿದಲ್ಲದೆ. ಶಾಸಕರನ್ನು ಹಿಡಿದು ಎಳೆದಾಡಿದ್ದಾರೆ.

ಈ ವೇಳೆ ಉದ್ರಿಕ್ತಗೊಂಡ ಗ್ರಾಮಸ್ಥರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದು, ಪರಿಸ್ಥಿತಿ ಕೈ ಮೀರಿದ ವೇಳೆ ಲಾಠಿ ಲಾಠಿ ಚಾರ್ಜ್ ಮಾಡಿ ಶಾಸಕರನ್ನು ಕರೆದುಕೊಂಡು ಬಂದ ಕಾರಿನಲ್ಲಿ ಕೂಡಿಸಿದ್ದಾರೆ. ಈ ಸಂದರ್ಭದಲ್ಲಿ ಎಂ.ಪಿ. ಕುಮಾರಸ್ವಾಮಿ ಅವರ ಶರ್ಟ್ ಹರಿದಿಲ್ಲ. ಆದ್ರೆ, ಕುಮಾರಸ್ವಾಮಿ ಅವರು ಈ ಘಟನೆ ಬಗ್ಗೆ ವಿಡಿಯೋ ಹೇಳಿಕೆಯೊಂದನ್ನು ನೀಡಿದ್ದು, ಆ ವಿಡಿಯೋದಲ್ಲಿ ಶಾಸಕರ ಶರ್ಟ್ ಹರಿದಿದೆ. ಅಲ್ಲದೇ ಇದೊಂದು ವ್ಯವಸ್ಥಿತ ಪಿತೂರಿ ಎಂದು ಸ್ವತಃ ಕುಮಾರಸ್ವಾಮಿ ಅವರೇ ವಿಡಿಯೋನಲ್ಲಿ ಆರೋಪಸಿದ್ದಾರೆ.

,ಆನೆ ದಾಳಿಯಿಂದ ಮೃತಪಟ್ಟ ಮಹಿಳೆಯ ಮೃತದೇಹವನ್ನು ವೀಕ್ಷಿಸಲು ತೆರಳಿದ ವೇಳೆ ನನ್ನ ಮೇಲೆ ಗ್ರಾಮಸ್ಥರು ಆಕ್ರೋಶಗೊಂಡಿದ್ದು, ಪ್ರತಿಭಟನಾ ನಿರತರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ಇದು ವ್ಯವಸ್ಥಿತ ಪಿತೂರಿತಯಾಗಿದೆ. ನಮ್ಮದೇ ಸರ್ಕಾರದ ಪೊಲೀಸ್ ಇಲಾಖೆ ನನಗೆ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ ಎಂದು ವಿಡಿಯೋನಲ್ಲಿ ದೂರಿದ್ದಾರೆ.

ಆದ್ರೆ, ಶಾಸಕರನ್ನು ಪೊಲೀಸರು ಕರೆದುಕೊಂಡು ಹೋಗುವಾಗ ಯಾವುದೇ ಬಟ್ಟೆ ಹರಿದಿಲ್ಲ. ಅದನ್ನು ಈ ಕೆಳಗಿರುವ ವಿಡಿಯೋನಲ್ಲಿ ನೋಡಬಹುದು. ಇತ್ತ ಕುಮಾರಸ್ವಾಮಿ ಅವರು ಹಲ್ಲೆ ಮಾಡಿ ಬಟ್ಟೆ ಹರಿದಿದ್ದಾರೆ ಎಂದು ಆರೋಪಿಸಿದ್ದು, ಹಲವು ಅನುಮಾಗಳು ವ್ಯಕ್ತವಾಗಿವೆ.

ನಿಜವಾಗಿಯೂ ಜನರು ಶಾಸಕರ ಮೇಲೆ ಹಲ್ಲೆ ನಡೆಸಿದ್ರಾ.?ಶರ್ಟ್ ಹರಿದು ಹಾಕಿ ನಡು ರೋಡಲ್ಲಿ ನಿಲ್ಲಿಸಿದ್ರಾ.? ಇಲ್ಲಾ ಅನುಕಂಪ ಗಿಟ್ಟಿಸಲು ಕುಮಾರಸ್ವಾಮಿ ಸುಳ್ಳು ಹೇಳುತ್ತಿದ್ದಾರಾ..? ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:58 pm, Sun, 20 November 22