ಮೂಡಿಗೆರೆ ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಫೋಟ: ಟಿಕೆಟ್ ವಿಡಿಯೋ ವೈರಲ್
ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಟಿಕೆಟ್ ಫೈಟ್ ಶುರುವಾಗಿದೆ. ಅದರಂತೆ ಮೂಡಿಗೆರೆ ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಟಿಕೆಟ್ ವಿಡಿಯೋ ವೈರಲ್ ಆಗಿದೆ.
ಚಿಕ್ಕಮಗಳೂರು: ವಿಧಾನಸಭಾ ಚುನಾವಣೆಗೆ ಇನ್ನೇನೂ ಕೆಲ ತಿಂಗಳುಗಳಷ್ಟೇ ಬಾಕಿಯಿದೆ. ಈ ಮಧ್ಯೆ ಹಲವು ಆಕಾಂಕ್ಷಿಗಳು ಟಿಕೆಟ್ ಮೇಲೆ ಕಣ್ಣಿಟ್ಟಿದ್ದಾರೆ. ಅದರಂತೆ ಮೀಸಲು ವಿಧಾನಸಭಾ ಕ್ಷೇತ್ರವಾಗಿರುವ ಮೂಡಿಗೆರೆ ಕಾಂಗ್ರೆಸ್ ಟಿಕೆಟ್ ಗಾಗಿ ಮಾಜಿ ಸಚಿವೆ ಮೋಟಮ್ಮ ಪುತ್ರಿ, ನಯನಾ ಮೋಟಮ್ಮ ಲಾಬಿ ನಡೆಸುತ್ತಿರುವುದು ಗುಟ್ಟಾಗಿ ಏನೂ ಉಳಿದಿಲ್ಲ. ಆದ್ರೆ, ಇದಕ್ಕೆ ವಿರೋಧ ವ್ಯಕ್ತವಾಗಿದೆ.
ಹೌದು.. ಯಾವುದೇ ಕಾರಣಕ್ಕೂ ನಯನಾ ಮೋಟಮ್ಮಗೆ ಪಕ್ಷ ಟಿಕೆಟ್ ಕೊಡಬಾರದು. ಬೇರೆ ಯಾರಿಗೆ ಟಿಕೆಟ್ ಕೊಟ್ರೂ ನಮ್ಮ ಅಭ್ಯಂತರವಿಲ್ಲ ಎಂದು ಸ್ಥಳೀಯ ಕೈ ಮುಖಂಡರೇ ರಹಸ್ಯ ಸಭೆ ನಡೆಸಿದ್ದಾರೆ. ಸೋಲುವ ಕ್ಯಾಂಡಿಡೇಟ್ಗೆ ಯಾಕೆ ಟಿಕೇಟ್ ಕೊಡಬೇಕು. ಜನಭಿಪ್ರಾಯವೇ ಅವರ ವಿರುದ್ಧ ಇದೆ. ಹೋಬಳಿ-ಹೋಬಳಿಯಲ್ಲೂ ಅವರ ವಿರುದ್ಧ ನಾವು ಧ್ವನಿ ಎತ್ತಬೇಕು ಎಂದು ಸಭೆಯಲ್ಲಿ ಮುಖಂಡರೊಬ್ಬರು ಭಾಷಣ ಮಾಡಿದ್ದಾರೆ. ಇದೀಗ ಈ ವಿಡಿಯೋ ಫುಲ್ ವೈರಲ್ ಆಗಿದೆ. ಇದರೊಂದಿಗೆ ಮೂಡಿಗೇರೆ ಕಾಂಗ್ರೆಸ್ನಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದು ಸಾಬೀತಾಗಿದೆ.
ವಿಧಾನಸಭೆ ಚುನಾವಣೆ ಮೊದಲೇ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ: 14 ಪದಾಧಿಕಾರಿಗಳ ಉಚ್ಛಾಟನೆ
ಪುತ್ರಿಗೆ ಟಿಕೆಟ್ ಕೊಡಿಸಲು ಮೊಟಮ್ಮ ಕಸರತ್ತು
ಮುಂಬರುವ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದ್ದು, ಎಲ್ಲ ಪಕ್ಷಗಳಲ್ಲಿ ಹಲವಾರು ಅಭ್ಯರ್ಥಿಗಳು ಕ್ಷೇತ್ರದಾದಂತ ಬಿರುಸಿನ ಪ್ರವಾಸ ಕೈಗೊಂಡಿದ್ದು, ಮಾಜಿ ಸಚಿವೆ ಮೊಟ್ಟಮ್ಮನವರ ಪುತ್ರಿ ಸಹ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಹೈಕಮಾಂಡ್ ಮಟ್ಟದಲ್ಲಿ ಪ್ರಭಾವ ಹೊಂದಿರುವ ಮೋಟಮ್ಮ ತಮ್ಮ ಪುತ್ರಿಗೆ ಮುಂದಿನ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವ ಪ್ರಯತ್ನದಲ್ಲಿದ್ದಾರೆ. ಈಗಾಗಲೇ ಕ್ಷೇತ್ರದ್ಯಾಂತ ಸಂಚಾರ ನಡೆಸಿ ಚುನಾವಣೆಗೆ ತಯಾರಿ ನಡೆಸುತ್ತಿದ್ದಾರೆ.
ಈ ನಡುವೆ ಮೂಡಿಗೆರೆ ಕಾಂಗ್ರೆಸ್ ನಲ್ಲಿ ವಿರೋಧ ವ್ಯಕ್ತವಾಗಿದೆ. ನಮ್ಮಂತಹರವರು ಚುನಾವಣೆ ಎದುರಿಸೋದು ಕಷ್ಟ, ಕಳೆದ ಚುನಾವಣೆಯಲ್ಲಿ ಸಾಕಷ್ಟು ನೊಂದಿದ್ದೇನೆ. ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ, ನನ್ನ ಮಗಳಿಗೆ ಟಿಕೆಟ್ ಕೊಡಲು ಕೇಳಿದ್ದೇನೆ ಎಂದು ಈ ಹಿಂದೆ ಮೋಟಮ್ಮ ಹೇಳಿದ್ದರು.
2018 ರ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಎಂ. ಪಿ. ಕುಮಾರಸ್ವಾಮಿ ಗೆಲುವು ಸಾಧಿಸಿದ್ದರು. ಕಾಂಗ್ರೆಸ್ನಿಂದ ಸ್ಪರ್ಧೆ ಮಾಡಿದ್ದ ಮೋಟಮ್ಮ 12512 ಮತಗಳ ಅಂತರದಿಂದ ಸೋಲು ಅನುಭವಿಸಿದ್ದರು. ಆದ್ರೆ, ಮುಂದಿನ ಚುನಾವಣೆ ಟಿಕೆಟ್ ಪುತ್ರಿ ನಯನಾ ಮೋಟಮ್ಮ ನೀಡುವಂತೆ ನಾಯಕರಿಗೆ ಮನವಿ ಮಾಡಿದ್ದಾರೆ.
ಮೋಟಮ್ಮ ಮಗಳಿಗೆ ಟಿಕೆಟ್ ಕೊಡಿಸಲು ಕಸರತ್ತು ನಡೆಸಿರುವ ಮಧ್ಯೆ ಮೂಡಿಗೆರೆ ಕಾಂಗ್ರೆಸ್ ಭಿನ್ನಮತ ಸ್ಫೋಟಗೊಂಡಿದ್ದು, ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಯಾರು ಆಗುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.