Chikmagalur News: ಚಿಕಿತ್ಸೆ ಫಲಿಸದೆ ಜೈಲಿನಲ್ಲಿದ್ದ ಕೊಲೆ ಆರೋಪಿ ಸಾವು

ಜೈಲಿನಲ್ಲಿದ್ದ ಕೊಲೆ ಆರೋಪಿ ಕೆಂಚಪ್ಪ ಚಿಕಿತ್ಸೆ ಫಲಿಸದೆ ಚಿಕ್ಕಮಗಳೂರು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

Chikmagalur News: ಚಿಕಿತ್ಸೆ ಫಲಿಸದೆ ಜೈಲಿನಲ್ಲಿದ್ದ ಕೊಲೆ ಆರೋಪಿ ಸಾವು
ಮೃತ ಕೆಂಚಪ್ಪ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ವಿವೇಕ ಬಿರಾದಾರ

Updated on: Jul 09, 2023 | 10:28 AM

ಚಿಕ್ಕಮಗಳೂರು: ಜೈಲಿನಲ್ಲಿದ್ದ ಕೊಲೆ ಆರೋಪಿ (Accused) ಕೆಂಚಪ್ಪ (49) ಚಿಕಿತ್ಸೆ ಫಲಿಸದೆ ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ (Government Hospital) ಸಾವನ್ನಪ್ಪಿದ್ದಾರೆ. ಆರೋಪಿ ಕೆಂಚಪ್ಪ ಮೂರು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಕಡೂರು ಪಟ್ಟಣದಲ್ಲಿ ಮೊಬೈಲ್ ವಿಚಾರವಾಗಿ ಮಂಜುನಾಥ್ ಎಂಬುವುರನ್ನು ಹತ್ಯೆಗೈದಿರುವ ಆರೋಪದಡಿ ಕೆಂಚಪ್ಪ 5 ತಿಂಗಳಿನಿಂದ‌ ಚಿಕ್ಕಮಗಳೂರು ಜಿಲ್ಲಾ ಕಾರಾಗೃಹದಲ್ಲಿದ್ದರು. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಅನಾರೋಗ್ಯವಿದ್ದರೂ ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡದ ಹಿನ್ನೆಲೆ ಕೆಂಚಪ್ಪ ಸಾವನ್ನಪ್ಪಿದ್ದಾರೆ ಎಂದು ಮೃತ ಕೆಂಚಪ್ಪ ಕುಟುಂಬಸ್ಥರು ಜೈಲು ಸಿಬ್ಬಂದಿ ಮೇಲೆ ಆರೋಪ ಮಾಡಿದ್ದಾರೆ.

ಇಬ್ಬರು ಅಪರಿಚಿತ ವ್ಯಕ್ತಿಗಳ ನಡುವೆ ಗಲಾಟೆ; ಕೊಲೆಯಲ್ಲಿ ಅಂತ್ಯ

ಬೆಂಗಳೂರು: ಇಬ್ಬರು ಅಪರಿಚಿತ ವ್ಯಕ್ತಿಗಳ ನಡುವೆ ಗಲಾಟೆ ನಡೆದು, ಕೊಲೆಯಲ್ಲಿ ಅಂತ್ಯವಾದ ಘಟನೆ ಮಲ್ಲೇಶ್ವರಂನ ಲಿಂಕ್ ರೋಡ್ ಸಿಗ್ನಲ್ ಬಳಿ ನಡೆದಿದೆ. ಇನ್ನು ಈ ಇಬ್ಬರು ರಸ್ತೆ ಬದಿಯಲ್ಲಿ ಚಿಂದಿ ಆಯುವ ಕೆಲಸ ಮಾಡುತ್ತಿದ್ದು, ನಿನ್ನೆ(ಜು.8) ಸಂಜೆ ಏಳು ವರೆ ಸುಮಾರಿಗೆ ಇಬ್ಬರು ಕುಡಿದು ಗಲಾಟೆ ಮಾಡಿಕೊಂಡು ಹೊಡೆದಾಡಿದ್ದಾರೆ. ಈ ವೇಳೆ ಓರ್ವನಿಗೆ ದೊಣ್ಣೆಯಿಂದ ಏಟು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಕುರಿತು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ