ಚಿಕ್ಕಮಗಳೂರು: ಚುನಾವಣೆ ಸಮಯದಲ್ಲಿ ಮತದಾರರನ್ನು ಒಲಿಸಿಕೊಳ್ಳಲು ಜನನಾಯಕರು ಹರಸಾಹಸ ಪಡುತ್ತಾರೆ. ವಿವಿಧ ಆಮಿಷಗಳನ್ನು ಒಡ್ಡುತ್ತಾರೆ. ಕಾಂಗ್ರೆಸ್ (Congress) ಪಾಲಿಗೆ ಅಲ್ಪ ಸಂಖ್ಯಾತರ ಮತಗಳು ಕಟ್ಟಿಟ್ಟ ಬುತ್ತಿಯಾಗಿತ್ತು. ಆದರೆ ಈಗ ಮುಸ್ಲಿಂರ (Muslim) ಮತಗಳು ಕೂಡ ಇಬ್ಬಾಗವಾಗುತ್ತಿದ್ದು, ಕಾಂಗ್ರೆಸ್ ವಿರುದ್ಧ ತಿರುಗಿ ಬೀಳುತ್ತಿದ್ದಾರೆ. ಚಿಕ್ಕಮಗಳೂರಿನಲ್ಲಿ (Chikkamagaluru) ಆಯೋಜಿಸಲಾಗಿದ್ದ, ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ, ನಾಯಕರ ವಿರುದ್ಧ ಜಿಲ್ಲಾ ಮುಸ್ಲಿಂ ಒಕ್ಕೂಟ ಆಕ್ರೋಶ ವ್ಯಕ್ತಪಿಡಿಸಿದೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾತನಾಡಿದಾಗ ಮುಸ್ಲಿಂ ಸಮುದಾಯ ಬೀದಿಗಿಳಿದು ಹೋರಾಡುತ್ತದೆ. ಆದರೆ ಮುಸ್ಲಿಮರ ಹತ್ಯೆಯಾದಾಗ, ಧಾರ್ಮಿಕ ಕೇಂದ್ರಗಳ ಮೇಲೆ ದಾಳಿಯಾದಾಗ ಕಾಂಗ್ರೆಸ್ ಸ್ಪಂದಿಸಿಲ್ಲ. ಹಿಜಾಬ್, ವ್ಯಾಪಾರ ಬಹಿಷ್ಕಾರ, ಹಲಾಲ್ ಕಟ್ ಸಂದರ್ಭದಲ್ಲಿ ಕಾಂಗ್ರೆಸ್ ನಮ್ಮ ಜೊತೆ ನಿಲ್ಲಲಿಲ್ಲ. ನಾವು ನಿಮ್ಮ ಜೊತೆ ನಿಲ್ಲುವಂತೆ, ನೀವು ನಮ್ಮ ಜೊತೆ ನಿಲ್ಲಬೇಕು ಎಂದು ಮುಖಂಡರ ಎದುರಲ್ಲೇ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ಕೇಸರಿ’ ಕೋಟೆಯಲ್ಲಿ ಇಂದು ರಾಹುಲ್ ಗಾಂಧಿ ಯುವ ಮಂತ್ರ..ಯುವಕರಿಗೆ ಒಂದು ಗ್ಯಾರಂಟಿ ಘೋಷಣೆ ಸಾಧ್ಯತೆ
ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರವನ್ನು ಸ್ಟೇಟಸ್ ಇಟ್ಟಿದ್ದಕ್ಕೆ ಯುವಕನೋರ್ವನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿರುವ ಘಟನೆ ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ನಡೆದಿತ್ತು. ರಾಘವೇಂದ್ರ ಪೂಜಾರ (33) ಹಲ್ಲೆಗೊಳಗಾದ ಯುವಕ. ಕಾಂಗ್ರೆಸ್ ಕಾರ್ಯಕರ್ತರಾದ ಮಲ್ಲರಡ್ಡಿ ಅಗಸನಕೊಪ್ಪ, ಶ್ರೀನಿವಾಸ ಅಗಸನಕೊಪ್ಪ ಮತ್ತು ಹಲವರ ವಿರುದ್ಧ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿತ್ತು. ಕಾಂಗ್ರೆಸ್ ಕಾರ್ಯಕರ್ತರು, ರಾಘವೇಂದ್ರ ಪೂಜಾರ ಅವರ ಮನೆಗೆ ನುಗ್ಗಿ, ಪ್ರಧಾನಿ ಮೋದಿಯವರ ಭಾವಚಿತ್ರ ಸ್ಟೇಟಸ್ ಇಡ್ತೀಯಾ, ಮೋದಿ ಪೋಸ್ಟ್ಗೆ ಲೈಕ್ ಕೋಡ್ತಿಯಾ ಅಂತ ಹಲ್ಲೆ ಮಾಡಿದ್ದಾರೆಂದು ಆರೋಪ ವ್ಯಕ್ತವಾಗಿತ್ತು.
ಕಾರ್ಯಕರ್ತರು ಥರ್ಮಕೋಲ್ ಕಟರ್, ಕಲ್ಲು ಸಮೇತ ಬಂದು ಹಲ್ಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದರು. ಹಲ್ಲೆ ವಿಷಯ ತಿಳಿಯುತ್ತಿದ್ದಂತೆ ಬಿಜೆಪಿ ಟಿಕೆಟ್ ಆಕಾಂಕ್ಷಿ ರಾಜು ಕುರುಡಗಿ ಹಾಗೂ ಕಾರ್ಯಕರ್ತರು ಪೊಲೀಸ್ ಠಾಣೆಗೆ ತೆರಳಿ ಕೂಡಲೆ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದರು. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:35 pm, Mon, 20 March 23