4ವರ್ಷ ಪ್ರೀತಿಸಿ ಮದುವೆಯಾಗಿದ್ದವಳು ಮೂರೇ ದಿನಕ್ಕೆ ತಾಯಿ ಮನೆ ಸೇರಿದ್ಳು, ನೊಂದ ರಾಷ್ಟ್ರೀಯ ಕಬಡ್ಡಿ ಆಟಗಾರ ಸ್ಮಶಾನ ಸೇರಿದ

ಚಿಕ್ಕಮಗಳೂರು ನಗರದ ಹೊರವಲಯದ ತೇಗೂರು ಗ್ರಾಮದ ಮನೆಯಲ್ಲಿ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ವಿನೋದ್(24) ಆತ್ಮಹತ್ಯೆ ಮಾಡಿಕೊಂಡಿದ್ದ. ನಿನ್ನೆ ರಾತ್ರಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. 4 ವರ್ಷದಿಂದ ಪ್ರೀತಿಸುತ್ತಿದ್ದ ಯುವತಿಯನ್ನು ಮನೆಯವರ ವಿರೋಧದ ನಡುವೆಯೂ ವಿನೋದ್ ಮದುವೆಯಾಗಿದ್ದ. ಆದರೆ ಯುವತಿ ಠಾಣೆಗೆ ಹೋಗುತ್ತಿದ್ದಂತೆ ತನ್ನ ವರಸೆ ಬದಲಾಯಿಸಿ ತಾಯಿ ಜೊತೆ ಹೋಗುತ್ತೇನೆ ಎಂದಿದ್ದಳು. ಇದರಿಂದ ನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

4ವರ್ಷ ಪ್ರೀತಿಸಿ ಮದುವೆಯಾಗಿದ್ದವಳು ಮೂರೇ ದಿನಕ್ಕೆ ತಾಯಿ ಮನೆ ಸೇರಿದ್ಳು, ನೊಂದ ರಾಷ್ಟ್ರೀಯ ಕಬಡ್ಡಿ ಆಟಗಾರ ಸ್ಮಶಾನ ಸೇರಿದ
ವಿನೋದ್
Follow us
TV9 Web
| Updated By: ಆಯೇಷಾ ಬಾನು

Updated on:Feb 06, 2024 | 11:12 AM

ಚಿಕ್ಕಮಗಳೂರು, ಫೆ.06: ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ (Kabaddi Player) ವಿನೋದ್(24) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಿಕ್ಕಮಗಳೂರು ನಗರದ ಹೊರವಲಯದ ತೇಗೂರು ಗ್ರಾಮದ ಮನೆಯಲ್ಲಿ ನೇಣು (Hangging) ಬಿಗಿದು ಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿನೋದ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಪ್ರೀತಿಸಿ ಮದುವೆಯಾದ ಮೂರೇ ದಿನಕ್ಕೆ ಹೆಂಡತಿ ಬಿಟ್ಟು ಹೋದಳೆಂದು ಮನನೊಂದ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ವಿನೋದ್ ಮನೆಯಲ್ಲಿ ಯಾರು ಇಲ್ಲದ ವೇಳೆ ಸಮಯ ನೋಡಿಕೊಂಡು ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.

ತೇಗೂರು ಗ್ರಾಮದ ತನುಜಾ ಎಂಬ ಯುವತಿ ಹಾಗೂ ವಿನೋದ್ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇವರ ಪ್ರೀತಿಗೆ ಯುವತಿ ಮನೆಯವರ ಸಮ್ಮತಿ ಇರಲಿಲ್ಲ. ಹೀಗಾಗಿ ಯುವತಿ ಮನೆಯವರ ವಿರೋಧದ ನಡುವೆಯೇ ಇಬ್ಬರೂ ಓಡಿ ಹೋಗಿ ಮದುವೆಯಾಗಿದ್ದರು. ಡಿಸೆಂಬರ್ 10 ರಂದು ವಿನೋದ್ ಹಾಘೂ ತನುಜಾ ಮದುವೆಯಾಗಿದ್ದರು. ಇನ್ನೇನು ಪರಸ್ಪರ ಪ್ರೀತಿ ಮಾಡಿದ್ದ ಜೋಡಿ ಹಕ್ಕಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟು ಸಂಸಾರ ಶುರು ಮಾಡುವ ಹೊತ್ತಲ್ಲೇ ಪೊಲೀಸರು ನವ ಜೋಡಿಯನ್ನು ಠಾಣೆಗೆ ಕರೆ ತಂದಿದ್ದರು. ಯುವತಿಯ ಕುಟುಂಬಸ್ಥರ ದೂರಿನ ಮೇರೆಗೆ ಠಾಣೆಯಲ್ಲಿ ಪಂಚಾಯಿತಿ ನಡೆದಿದ್ದು ಯುವತಿ ತನ್ನ ತಾಯಿ ಮನೆಗೆ ಹೋಗುವುದಾಗಿ ಹೇಳಿಕೆ ನೀಡಿದ್ದಾಳೆ. ಮದುವೆಯಾದ ಮೂರೇ ದಿನಕ್ಕೆ ಗಂಡನನ್ನು ಬಿಟ್ಟು ತಾಯಿ ಜೊತೆ ಹೋಗುವುದಾಗಿ ಹೇಳಿ ಯುವತಿ ಉಲ್ಟಾ ಹೊಡೆದಿದ್ದಾಳೆ. ಇದರಿಂದ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಇದನ್ನೂ ಓದಿ: ಮದುವೆಯಾಗುವುದಾಗಿ ನಂಬಿಸಿ ವಂಚನೆ ಆರೋಪ; ಹಾಕಿ ತಂಡದ ಡಿಫೆಂಡರ್ ವರುಣ್ ಕುಮಾರ್ ವಿರುದ್ಧ ದೂರು ದಾಖಲು

ಮನ ನೊಂದ ವಿನೋದ್ ಫೆಬ್ರವರಿ 2 ರಂದು ಆತ್ಮಹತ್ಯೆಗೆ ಯತ್ನಿಸಿದ್ದ ನೇಣು ಹಾಕಿಕೊಂಡಿದ್ದ ವಿನೋದ್ ರಕ್ಷಿಸಿ ಕುಟುಂಬಸ್ಥರು ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ನಿನ್ನೆ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ವಿನೋದ್ ಮೃತಪಟ್ಟಿದ್ದಾನೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನೈತಿಕ ಪೊಲೀಸ್​ಗಿರಿ, ನಾಲ್ವರು ಖಾಕಿ ವಶಕ್ಕೆ

ಮಂಗಳೂರಿನ ಪಣಂಬೂರು ಬೀಚ್​ನಲ್ಲಿ ನೈತಿಕ ಪೊಲೀಸ್​ಗಿರಿ ಪ್ರಕರಣ ಭಾರೀ ಸದ್ದು ಮಾಡ್ತಿದೆ. ಇದ್ರ ಸಂಬಂಧ ರಾಮಸೇನಾ ಸಂಘಟನೆಯ ನಾಲ್ವರು ಆರೋಪಿಗಳನ್ನು ಪಣಂಬೂರು ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಿತಾಲುಬೆಟ್ಟು ನಿವಾಸಿ ಪ್ರಶಾಂತ್ ಭಂಡಾರಿ, ಕರಾಯ ನಿವಾಸಿ ಉಮೇಶ್, ಪುತ್ತಿನ ನಿವಾಸಿ ಸುಧೀರ್, ಮಚ್ಚಿನ ನಿವಾಸಿ ಕೀರ್ತನ್ ಪೂಜಾರಿ ಎಂಬಾತನನ್ನ ವಶಕ್ಕೆ ಪಡೆಯಲಾಗಿದೆ. ಇತ್ತೀಚೆಗೆ ಪಣಂಬೂರು ಬೀಚ್​ನಲ್ಲಿ ಅನ್ಯಕೋಮಿನ ಯುವಕ, ಯುವತಿ ಮೇಲೆ ಮಾಡಿದ್ದರು ಎಂದು ದೂರಲಾಗಿತ್ತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:03 am, Tue, 6 February 24

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ