ಚಿಕ್ಕಮಗಳೂರು: ಮಲೆನಾಡಿನಲ್ಲಿ ನಕ್ಸಲ್ ಚಟುವಟಿಕೆ ಮರುಜೀವಕ್ಕೆ ಈ ಅಂಶವೇ ಕಾರಣವಾಯ್ತಾ!

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಘೋಷಣೆ ವಿರೋಧಿಸಿ ಮಲೆನಾಡಿನಲ್ಲಿ ಹುಟ್ಟಿಕೊಂಡಿದ್ದ ನಕ್ಸಲ್ ಚಳವಳಿ ಕ್ರಮೇಣ ಅಸ್ತಿತ್ವ ಕಳೆದುಕೊಂಡಿತ್ತು. ಇದೀಗ ಕಸ್ತೂರಿ ರಂಗನ್ ವರದಿ ಜಾರಿ, ಅರಣ್ಯ ಒತ್ತುವರಿ ತೆರವಿನ ವಿರೋಧಿ ಕಿಚ್ಚನ್ನು ಮುಂದಿಟ್ಟುಕೊಂಡು ಮತ್ತೊಮ್ಮೆ ಮಲೆನಾಡಿನಲ್ಲಿ ನಕ್ಸಲ್ ಹೋರಾಟ ಮರು ಜೀವ ಪಡೆದುಕೊಂಡಿದೆ.

ಚಿಕ್ಕಮಗಳೂರು: ಮಲೆನಾಡಿನಲ್ಲಿ ನಕ್ಸಲ್ ಚಟುವಟಿಕೆ ಮರುಜೀವಕ್ಕೆ ಈ ಅಂಶವೇ ಕಾರಣವಾಯ್ತಾ!
ಪೊಲೀಸರು ಹಾಗೂ ಎಎನ್​ಎಫ್ ಸಿಬ್ಬಂದಿ ವಾಹನಗಳ ತಪಾಸಣೆ ನಡೆಸುತ್ತಿರುವುದು
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: Ganapathi Sharma

Updated on:Nov 13, 2024 | 10:08 AM

ಚಿಕ್ಕಮಗಳೂರು, ನವೆಂಬರ್ 13: ದಶಕಗಳ ಕಾಲ‌ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ತಣ್ಣಗಾಗಿದ್ದ ನಕ್ಸಲ್ ಚಟುವಟಿಕೆ ಮತ್ತೊಮ್ಮೆ ಜೀವ ಪಡೆದುಕೊಂಡಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಘೋಷಣೆ ವಿರೋಧಿಸಿ ಹುಟ್ಟಿಕೊಂಡಿದ್ದ ನಕ್ಸಲ್ ಚಳುವಳಿ ದಶಕಗಳ ಕಾಲ ಆತಂಕ ಸೃಷ್ಟಿ ಮಾಡಿತ್ತು. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಘೋಷಣೆಯಾದ ಬಳಿಕ ಕಾಫಿನಾಡು ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ನಕ್ಸಲ್ ಚಳವಳಿಗೆ ವಿಚಾರ, ಬೆಂಬಲ‌ ಸಿಗದೆ ಪಕ್ಕದ ರಾಜ್ಯ ಕೇರಳಕ್ಕೆ ಶಿಫ್ಟ್ ಆಗಿತ್ತು. ಆದರೆ ಇದೀಗ, ಕರ್ನಾಟಕದ ಕರಾವಳಿ ಮಲೆನಾಡು ಭಾಗದಲ್ಲಿ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಕಾದು ಕುಳಿತ್ತಿದ್ದ ನಕ್ಸಲರು ಮತ್ತ ಚಟುವಟಿಕೆ ಆರಂಭಿಸಿದ್ದಾರೆ.

ಚಿಕ್ಕಮಗಳೂರು ಸೇರಿದಂತೆ ಶಿವಮೊಗ್ಗ ಭಾಗದಲ್ಲಿ ಆತಂಕ ಸೃಷ್ಟಿಸಿರುವ ಅರಣ್ಯ ಒತ್ತುವರಿ ತೆರವು, ಕಸ್ತೂರಿ ರಂಗನ್ ವರದಿ ಜಾರಿ ಆತಂಕವನ್ನೇ ಅಸ್ತ್ರ ಮಾಡಿಕೊಂಡಿರುವ ನಕ್ಸಲ್ ತಂಡ, ಕಾಫಿನಾಡಿನಲ್ಲಿ ಚಟುವಟಿಕೆ ನಡೆಸಿದೆ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಯಡಗುಂದ ಗ್ರಾಮಕ್ಕೆ ತುಂಗಾ ತಂಡದ ಕುಖ್ಯಾತ ನಕ್ಸಲ್ ನಾಯಕಿ ಮುಂಡಗಾರು ಲತಾ ಸೇರಿದಂತೆ 6 ಜನ ಶಸ್ತ್ರಧಾರಿಗಳ ತಂಡ ಭೇಟಿ ನೀಡಿರುವುದು ಧೃಡಪಟ್ಟಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಕೊಪ್ಪ, ಮೂಡಿಗೆರೆ, ಕಳಸ ತಾಲೂಕಿನಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

15 ದಿನಗಳಿಂದ ಸಕ್ರಿಯರಾಗಿರುವ ನಕ್ಸಲರು

ಕಳೆದ 15 ದಿನಗಳಿಂದ ಚಿಕ್ಕಮಗಳೂರು ಜಿಲ್ಲೆಯ ನಕ್ಸಲ್ ಪೀಡಿತ ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಮುಂಡಗಾರು ಲತಾ ನೇತೃತ್ವದ ತಂಡ ಸಕ್ರಿಯವಾಗಿದ್ದು, ಕಾಡಂಚಿನ ಮನೆಗಳಿಗೆ ಭೇಟಿ ನೀಡಿದೆ ಎನ್ನಲಾಗುತ್ತಿದೆ. ಕಸ್ತೂರಿ ರಂಗನ್ ವರದಿ ಜಾರಿ ಸೇರಿದಂತೆ ಅರಣ್ಯ ಒತ್ತುವರಿ ತೆರವು ವಿರುದ್ಧ ಬೆಂಬಲ ಕೋರಿ ಸಭೆ ನಡೆಸಲಾಗಿದೆ ಎಂಬ ಮಾಹಿತಿ ಮೇರೆಗೆ ಚಿಕ್ಕಮಗಳೂರು ‌ಎಸ್ಪಿ ವಿಕ್ರಂ ಆಮ್ಟೆ, ನಕ್ಸಲ್ ನಿಗ್ರಹ ಪಡೆ ಎಸ್ಪಿ ಜಿತೇಂದ್ರ ನೇತೃತ್ವದಲ್ಲಿ ಕೊಪ್ಪ ತಾಲೂಕಿನ ಯಡಗುಂದ, ಕಡೆಗುಂಡಿ‌ ಗ್ರಾಮದ ಮನೆಗಳಲ್ಲಿ ತೀವ್ರ ಶೋಧ ಕಾರ್ಯ ನಡೆಸಲಾಗಿದೆ. ಇದೇ ವೇಳೆ, ಕಡೆಗುಂಡಿ ಗ್ರಾಮದ ಸುಬ್ಬೆಗೌಡ ಎನ್ನುವವರ‌ ಮನೆಯಲ್ಲಿ ಮೂರು ಬಂದೂಕುಗಳು ಪತ್ತೆಯಾಗಿದ್ದು, ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಬಂದೂಕು ಸಿಕ್ಕಿರುವ ಸಂಬಂಧ ಜಯಪುರ ಪೊಲೀಸ್ ‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೀವ್ರಗೊಂಡ ಕೂಂಬಿಂಗ್, ತಪಾಸಣೆ

ಕುದುರೆಮುಖ, ಕೊಪ್ಪ ಶೃಂಗೇರಿ, ಕೆರೆಕಟ್ಟೆ ಭಾಗದಲ್ಲಿ ತೀವ್ರ ಕೂಂಬಿಂಗ್ ಕಾರ್ಯಚರಣೆ ನಡೆಯುತ್ತಿದ್ದು, ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ.ಇ ಏತನ್ಮಧ್ಯೆ ಕಸ್ತೂರಿ ರಂಗನ್ ವರದಿ ಜಾರಿ, ಅರಣ್ಯ ಒತ್ತುವರಿ ತೆರವು ವಿರೋಧಿಸಿ ಕೊಪ್ಪ ಪಟ್ಟಣದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಲಾಗಿದೆ.

ಇದನ್ನೂ ಓದಿ: ಕೊಡಗು-ದಕ್ಷಿಣ ಕನ್ನಡ ಗಡಿಯಲ್ಲಿ ನಕ್ಸಲ್​ ಸದ್ದು; ಅಂಗಡಿಯಿಂದ ದಿನಸಿ ಖರೀದಿಸಿ ತೆರಳಿದ ಬಂದೂಕು ದಾರಿಗಳ ತಂಡ

ಮಲೆನಾಡು ಭಾಗದಲ್ಲಿ ಎದ್ದಿರುವ ಕಸ್ತೂರಿ ರಂಗನ್ ವರದಿ ಜಾರಿ, ಅರಣ್ಯ ಒತ್ತುವರಿ ತೆರವು ವಿರೋಧಿ ಅಲೆಯನ್ನ ಅಸ್ತ್ರ ಮಾಡಿಕೊಂಡಿರುವ ಕೆಂಪು ಉಗ್ರರು ಕಾಫಿನಾಡಿನಲ್ಲಿ ಅಲರ್ಟ್ ಆಗಿರುವುದು ಪೊಲೀಸ್ ಇಲಾಖೆ, ನಕ್ಸಲ್ ನಿಗ್ರಹ ಪಡೆ ಸೇರಿದಂತೆ ಸರ್ಕಾರಕ್ಕೆ ತಲೆ ನೋವು ತರಿಸಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:08 am, Wed, 13 November 24

Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ
ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ
ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಅಸ್ತ್ರ
ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಅಸ್ತ್ರ