ನಿಫಾ ವೈರಸ್ ಭೀತಿ: ಚಿಕ್ಕಮಗಳೂರು ಪ್ರವಾಸಿ ತಾಣಗಳಿಗೆ ಕೇರಳದ ಪ್ರವಾಸಿಗರಿಗೆ ನಿರ್ಬಂಧ

ಕೇರಳದಲ್ಲಿ ನಿಫಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಜಿಲ್ಲಾಡಳಿತ ಕಟ್ಟೆಚ್ಚರ ವಹಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನಿಫಾ ವಾರ್ಡ್ ಅನ್ನು ಕೂಡ ಜಿಲ್ಲಾಸ್ಪತ್ರೆಯಲ್ಲಿ ತೆರೆದಿದೆ. ಇದರ ನಡುವೆ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಬರುವ ಕೇರಳದ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.

ನಿಫಾ ವೈರಸ್ ಭೀತಿ: ಚಿಕ್ಕಮಗಳೂರು ಪ್ರವಾಸಿ ತಾಣಗಳಿಗೆ ಕೇರಳದ ಪ್ರವಾಸಿಗರಿಗೆ ನಿರ್ಬಂಧ
ನಿಫಾ ವೈರಸ್ ಭೀತಿ ಹಿನ್ನೆಲೆ ಪ್ರವಾಸಿ ತಾಣಗಳಿಗೆ ಕೇರಳದ ಪ್ರವಾಸಿಗರ ಭೇಟಿಯನ್ನು ನಿರ್ಬಂಧಿಸಿದ ಚಿಕ್ಕಮಗಳೂರು ಜಿಲ್ಲಾಡಳಿತ
Follow us
Rakesh Nayak Manchi
|

Updated on:Sep 18, 2023 | 8:13 PM

ಚಿಕ್ಕಮಗಳೂರು, ಸೆ.18: ನೆರೆಯ ರಾಜ್ಯ ಕೇರಳದಲ್ಲಿ ನಿಫಾ ವೈರಸ್ (Nipah Virus) ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವ ಚಿಕ್ಕಮಗಳೂರಿನಲ್ಲಿ (Chikmagalur) ಕಟ್ಟೆಚ್ಚರವಹಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತವು ಈಗಾಗಲೇ ಜಿಲ್ಲಾಸ್ಪತ್ರೆಯಲ್ಲಿ ನಿಫಾ ವಾರ್ಡ್ ತೆರೆದಿದೆ. ಇದರ ಜೊತೆಗೆ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಕೇರಳದ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿದೆ.

ಜಿಲ್ಲೆಯಾದ್ಯಂತ ನಿಫಾ ವೈರಸ್ ಭೀತಿ ಆವರಿಸಿದ್ದು, ಮಲೆನಾಡು ಪ್ರದೇಶ ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವುದರಿಂದ ಕೇರಳದ ಪ್ರವಾಸಿಗರ ಪ್ರವೇಶವನ್ನು ಆಡಳಿತ ಮಂಡಳಿ ನಿಷೇಧಿಸಿದೆ. ಅಲ್ಲದೆ, ಕೇರಳದ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ನೀಡದಂತೆ ರೆಸಾರ್ಟ್‌ಗಳು, ಹೋಂಸ್ಟೇಗಳು ಮತ್ತು ಹೋಟೆಲ್‌ಗಳ ಮಾಲೀಕರಿಗೆ ಸೂಚಿಸಲಾಗಿದೆ.

ಮತ್ತೊಂದೆಡೆ, ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯನಗಿರಿ ಬೆಟ್ಟದ ಸಾಲುಗಳು ವಿವಿಧ ರಾಜ್ಯಗಳಿಂದ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದ್ದು, ಪ್ಯಾಕೇಜ್ ಏಜೆನ್ಸಿಗಳ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ.

ಇದನ್ನೂ ಓದಿ: Nipah Virus ಭೀತಿ: ನಿಫಾ ವಾರ್ಡ್ ತೆರೆದ ಚಿಕ್ಕಮಗಳೂರು ಜಿಲ್ಲಾಡಳಿತ, ಮೈಸೂರಿನಲ್ಲಿ ಕಟ್ಟೆಚ್ಚರ

ಮತ್ತೊಂದೆಡೆ, ವೈರಸ್‌ ಬಾವಲಿಗಳಿಂದ ಹರಡುತ್ತಿರುವುದರಿಂದ ಸ್ಥಳೀಯ ನಿವಾಸಿಗಳು ಮರಗಳಲ್ಲಿ ವಾಸಿಸುವ ಬಾವಲಿಗಳನ್ನು ಸ್ಥಳಾಂತರಿಸುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ. ನಾಗರಿಕರ ಮನಸ್ಸಿನಲ್ಲಿರುವ ಭಯವನ್ನು ಹೋಗಲಾಡಿಸಲು ಮತ್ತು ವೈರಸ್ ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಳ್ಳಲು ಜನರಿಗೆ ತಿಳಿಸುವ ಅಗತ್ಯವಿದೆ ಎಂದು ಸಾಮಾಜಿಕ ಕಾರ್ಯಕರ್ತ ಸುಂದರೇಶ್ ಹೇಳಿದ್ದಾಗಿ ಸುದ್ದಿ ಸಂಸ್ಥೆ ದಿ ನ್ಯೂ ಇಂಡಿಯನ್ ಎಕ್ಸ್​ಪ್ರೆಸ್ ವರದಿ ಮಾಡಿದೆ.

ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳು ವರದಿಯಾಗದ ಕಾರಣ ಭಯ ಪಡುವ ಅಗತ್ಯವಿಲ್ಲ. ಆದರೆ ಮುಂಜಾಗ್ರತಾ ಕ್ರಮವಾಗಿ ವಿಶೇಷ ವಾರ್ಡ್‌ನಲ್ಲಿ ವೆಂಟಿಲೇಟರ್ ಮತ್ತು ಆಮ್ಲಜನಕದ ಸೌಲಭ್ಯವಿರುವ ಆರು ಹಾಸಿಗೆಗಳನ್ನು ಮೀಸಲಿರಿಸಲಾಗಿದೆ ಎಂದು ಮಲ್ಲೇಗೌಡ ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಮೋಹನ್ ಕುಮಾರ್ ಹೇಳಿದರು. ಅಲ್ಲದೆ, ಬಾವಲಿಗಳು ಅರ್ಧ ಕಚ್ಚಿದ ಹಣ್ಣುಗಳನ್ನು ತಿನ್ನದಂತೆ ಸಾರ್ವಜನಿಕರಿಗೆ ಮನವಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:10 pm, Mon, 18 September 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ