AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರಂತರ ಮಳೆಯಿಂದ ಅವಘಡ: ಚಿಕ್ಕಮಗಳೂರಲ್ಲಿ ವೃದ್ಧೆ ಸಾವು

ಕೊಡಗು, ಕರಾವಳಿ, ಮಲೆನಾಡು ಸೇರಿ ರಾಜ್ಯದ 14ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದ್ದು, ಮಳೆ ಸಂಬಂಧಿ ಅವಘಡಗಳಿಂದ ಜನರು ಬಲಿಯಾಗುತ್ತಿದ್ದಾರೆ. ಇದೀಗ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಧಿಕ ಮಳೆಯಿಂದ ಮುಳುಗಡೆಯಾದ ಅಡಿಕೆ ತೋಟ ನೋಡಲು ಹೋದ ವೃದ್ಧೆ ಸಾವನ್ನಪ್ಪಿದ್ದಾರೆ.

ನಿರಂತರ ಮಳೆಯಿಂದ ಅವಘಡ: ಚಿಕ್ಕಮಗಳೂರಲ್ಲಿ ವೃದ್ಧೆ ಸಾವು
ವೃದ್ಧೆ ರಾಮಮ್ಮಗಾಗಿ ಶೋಧ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Jul 26, 2023 | 10:46 AM

Share

ಚಿಕ್ಕಮಗಳೂರು: ಕೊಡಗು, ಕರಾವಳಿ, ಮಲೆನಾಡು ಸೇರಿ ರಾಜ್ಯದ 14ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ (Rain) ಮುಂದುವರಿದಿದ್ದು, ಮಳೆ ಸಂಬಂಧಿ ಅವಘಡಗಳಿಂದ ಜನರು ಬಲಿಯಾಗುತ್ತಿದ್ದಾರೆ. ಅಧಿಕ ಮಳೆಯಿಂದ ಮುಳುಗಡೆಯಾದ ಅಡಿಕೆ ತೋಟ (Arecanut Plantation) ನೋಡಲು ಹೋದ ವೃದ್ಧೆ (Old Women) ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಹೊಸಸಿದ್ರಳ್ಳಿ ಗ್ರಾಮದಲ್ಲಿ ನಡೆದಿದೆ. ಹೊಸಸಿದ್ರಳ್ಳಿ ಗ್ರಾಮದ ರಾಮಮ್ಮ (65) ಮೃತ ವೃದ್ಧೆ. ರಾಮಮ್ಮ ನಿನ್ನೆ (ಜು.25) ಸಂಜೆ ಮುಳುಗಡೆಯಾಗಿದ್ದ ತಮ್ಮ ಅಡಿಕೆ ತೋಟ ನೋಡಲು ಹೋಗಿದ್ದರು. ಹೀಗೆ ಹೋದ ರಾಮಮ್ಮ ಮರಳಿ ಬಾರದ ಹಿನ್ನೆಲೆ ಕುಟುಂಬಸ್ಥರು ರಾಮಮ್ಮ ಅವರನ್ನು ಹುಡುಕಿದ್ದಾರೆ.

ಹೀಗೆ ಹುಡುಕುತ್ತಾ ತಾಯಿಹಳ್ಳದ ಬಳಿ ಬಂದಾಗ ರಾಮಮ್ಮ ಅವರ ಚಪ್ಪಲಿ ಉರುಗೋಲು ಪತ್ತೆಯಾಗಿದೆ. ಕೂಡಲೆ ಅಗ್ನಿಶಾಮಕ ದಳ ಸಿಬ್ಬಂದಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ಕಾರ್ಯ ನಡೆಸಿದಾಗ ರಾಮಮ್ಮ ಅವರ ಶವ ಪತ್ತೆಯಾಗಿದೆ. ಈ ಮೂಲಕ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯಿಂದ ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ನಿರಂತರ ಸುರಿಯುತ್ತಿರುವ ಮಳೆಗೆ  ವೃದ್ಧೆ ಬಲಿ

ಬೆಳಗಾವಿ: ನಿರಂತರ ಮಳೆಯಿಂದ ಬೈಲುಹೊಂಗಲದ ಬುಡರಕಟ್ಟಿ ಗ್ರಾಮದಲ್ಲಿ ನಾಲ್ಕು ದಿನಗಳ ಹಿಂದೆ ಮನೆ ಮೇಲ್ಚಾವಣಿ ಬಿದ್ದು 13 ಜನ ಗಾಯಗೊಂಡಿದ್ದರು. ಇವರಲ್ಲಿ ಗಂಭೀರವಾಗಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್​​ಗೆ ದಾಖಲಾಗಿದ್ದ ಓರ್ವ ವೃದ್ಧೆ ಸಾವನ್ನಪ್ಪಿದ್ದಾರೆ. ಈರಮ್ಮ ಪತ್ರೆಮ್ಮನವರ(95) ಮೃತ ವೃದ್ಧೆ. ಮೃತ ಈರಮ್ಮ ಬೈಲಹೊಂಗಲ ತಾಲೂಕಿನ ಬುಡರಕಟ್ಟಿ ಗ್ರಾಮದ ನಿವಾಸಿಯಾಗಿದ್ದರು.

ಇದನ್ನೂ ಓದಿ: Karnataka Rains: ಕರ್ನಾಟಕದ ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಹಾ ಮಳೆ

ಮಳೆಯಿಂದ ಬುಡರಕಟ್ಟಿ ಗ್ರಾಮದಲ್ಲಿ ಮನೆ ಕುಸಿದು ವೃದ್ಧೆ ಈರಮ್ಮ ಸೇರಿ ಒಂದೇ ಕುಟುಂಬದ 13 ಜನ ಗಾಯಗೊಂಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಈರಮ್ಮ ಅವರನ್ನು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಈರಮ್ಮ ಸಾವನ್ನಪ್ಪಿದ್ದಾರೆ. ದೊಡವಾಡ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು