ಚಿಕ್ಕಮಗಳೂರು: ಶತಕದ ಗಡಿ ದಾಟಿದ್ದ ಈರುಳ್ಳಿ ಬೆಲೆ ಕಾಫಿನಾಡಿನಲ್ಲಿ ಇಳಿಕೆ

ಮಹಾರಾಷ್ಟ್ರ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಕುಸಿತ ಕಂಡಿದ್ದು ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ದಾಸ್ತಾನು ಇರೋದ್ರಿಂದ ಕರ್ನಾಟಕ ರಾಜ್ಯಾದ್ಯಂತ ರಫ್ತು ಮಾಡಲಾಗುತ್ತಿದೆ. ಇದ್ರಿಂದ ಈರುಳ್ಳಿ ಬೆಲೆ ಇಂದು ಇಳಿಕೆಯಾಗಿದೆ.

ಚಿಕ್ಕಮಗಳೂರು: ಶತಕದ ಗಡಿ ದಾಟಿದ್ದ ಈರುಳ್ಳಿ ಬೆಲೆ ಕಾಫಿನಾಡಿನಲ್ಲಿ ಇಳಿಕೆ
ಚಿಕ್ಕಮಗಳೂರು: ಶತಕದ ಗಡಿ ದಾಟಿದ್ದ ಈರುಳ್ಳಿ ಬೆಲೆ ಕಾಫಿನಾಡಿನಲ್ಲಿ ಇಳಿಕೆ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: Ganapathi Sharma

Updated on: Nov 03, 2023 | 7:03 PM

ಚಿಕ್ಕಮಗಳೂರು, ನವೆಂಬರ್ 3: ರಾಜ್ಯದಾದ್ಯಂತ ದಿಢೀರ್ ಏರಿಕೆ ಕಂಡಿದ್ದ ಈರುಳ್ಳಿ (Onion Price) ಚಿಕ್ಕಮಗಳೂರಿನಲ್ಲಿ (Chikkamagaluru) ಕೆಜಿಗೆ 100 ರೂಪಾಯಿ ಗಡಿ ದಾಟಿತ್ತು. ಆದರೆ ರಾಜ್ಯದ ಮಾರುಕಟ್ಟೆಗಳಿಗೆ ಮಹಾರಾಷ್ಟ್ರದ ಈರುಳ್ಳಿ ಲಗ್ಗೆಯಿಟ್ಟಿದ್ದು ಈರುಳ್ಳಿ ಬೆಲೆ ಕಡಿಮೆಯಾಗಿದೆ. ಗ್ರಾಹಕರು ನೆಮ್ಮದಿಯಿಂದ ನಿಟ್ಟುಸಿರು ಬಿಡುವಂತಾಗಿದೆ.

ಒಂದು ತಿಂಗಳ ಹಿಂದೆ ಶತಕದ ಗಡಿ ದಾಟಿದ್ದ ಟೊಮ್ಯಾಟೊ ದರ ಇಳಿಕೆ ಕಂಡು ಗ್ರಾಹಕರು ನೆಮ್ಮದಿಯಾಗಿದ್ದ ಸಮಯದಲ್ಲಿ ಈರುಳ್ಳಿ ಗಗನಕೇರಿತ್ತು. ರಾಜ್ಯದಾದ್ಯಂತ ಕೆ.ಜಿ ಈರುಳ್ಳಿ ಬೆಲೆ 70 ,80, 90 ರೂಪಾಯಿಗೆ ತಲುಪಿದ್ರೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ‌ 100 ರ ಗಡಿ ದಾಟಿತ್ತು. ಆದರೆ, ಶುಕ್ರವಾರ ಈರುಳ್ಳಿ ಬೆಲೆ ಇಳಿಕೆ ಕಂಡಿದೆ.

ಮಹಾರಾಷ್ಟ್ರ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಕುಸಿತ ಕಂಡಿದ್ದು ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ದಾಸ್ತಾನು ಇರೋದ್ರಿಂದ ಕರ್ನಾಟಕ ರಾಜ್ಯಾದ್ಯಂತ ರಫ್ತು ಮಾಡಲಾಗುತ್ತಿದೆ. ಇದ್ರಿಂದ ಈರುಳ್ಳಿ ಬೆಲೆ ಇಂದು ಇಳಿಕೆಯಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಏಕಾಏಕಿ ಈರುಳ್ಳಿ ಬೆಲೆ ಕುಸಿತಕ್ಕೆ ಕಾರಣವೇನು?

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ನಾಲ್ಕು ವರ್ಷದ ಬಳಿಕ ಕೆ.ಜಿ ಈರುಳ್ಳಿ 100 ರೂಪಾಯಿ ಗಡಿ ದಾಟಿತ್ತು. ಈ ವರ್ಷ ಜಿಲ್ಲೆಯಾದ್ಯಂತ ಮಳೆ ಕೈಕೊಟ್ಟಿದ್ದು ಚಿಕ್ಕಮಗಳೂರು ಜಿಲ್ಲೆಯ ಕಡೂರು ಅಜ್ಜಂಪುರ ತಾಲೂಕಿನಲ್ಲಿ ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಈರುಳ್ಳಿ ನಾಶವಾಗಿತ್ತು. ಹೀಗಾಗಿ ಮಾರುಕಟ್ಟೆಯಲ್ಲಿ ಜಿಲ್ಲೆಯ ಈರುಳ್ಳಿ ಸಿಗದ ಕಾರಣ ಈರುಳ್ಳಿ ಬೆಲೆ 100 ದಾಟಿತ್ತು. ಆದರೆ, ಚಿಕ್ಕಮಗಳೂರು ಎಪಿಎಂಸಿಗೆ ಮಾರುಕಟ್ಟೆಗೆ ಮಹಾರಾಷ್ಟ್ರ ದಿಂದ ಈರುಳ್ಳಿ ಬಂದಿದ್ದು ಈರುಳ್ಳಿ ಬೆಲೆಯಲ್ಲಿ ಇಳಿಕೆಯಾಗಿದೆ. ನಿನ್ನೆ ವರೆಗೂ 100 ರೂಪಾಯಿಯಿದ್ದ ಈರುಳ್ಳಿ ಮಹಾರಾಷ್ಟ್ರದ ಈರುಳ್ಳಿ ಎಂಟ್ರಿಯಿಂದ ಇಂದು 70 ,ರಿಂದ 85 ರೂಪಾಯಿ ವರೆಗೆ ಮಾರಾಟವಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ