ಜ್ವರಕ್ಕೆ ಓವರ್ ಡೋಸ್ ಇಂಜೆಕ್ಷನ್; ವೈದ್ಯನ ನಿರ್ಲಕ್ಷ್ಯಕ್ಕೆ 7 ವರ್ಷದ ಬಾಲಕ ಬಲಿ

ತೀವ್ರ ಜ್ವರದಿಂದ ಬಳಲುತ್ತಿದ್ದ 7 ವರ್ಷದ ಬಾಲಕನಿಗೆ ವೈದ್ಯ ಓವರ್ ಡೋಸ್ ಇಂಜೆಕ್ಷನ್ ನೀಡಿದ್ದು ಬಾಲಕ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ ನಡೆದಿದೆ. ಬಾಲಕ ಸೋನೇಶ್ ಅವರ ಸೊಂಟಕ್ಕೆ ‌ಇಂಜೆಕ್ಷನ್ ಮಾಡಿದ್ದು ಇದೆ ಇಂಜೆಕ್ಷನ್ ಓವರ್ ಡೋಸ್ ಆಗಿ ಬಾಲಕನ ಜೀವವನ್ನೇ ತೆಗೆದಿದೆ.

ಜ್ವರಕ್ಕೆ ಓವರ್ ಡೋಸ್ ಇಂಜೆಕ್ಷನ್; ವೈದ್ಯನ ನಿರ್ಲಕ್ಷ್ಯಕ್ಕೆ 7 ವರ್ಷದ ಬಾಲಕ ಬಲಿ
ಮೃತ ಬಾಲಕ ಸೋನೇಶ್
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಆಯೇಷಾ ಬಾನು

Updated on: Sep 28, 2024 | 10:58 AM

ಚಿಕ್ಕಮಗಳೂರು, ಸೆ.28: ತೀವ್ರ ಜ್ವರದಿಂದ ಬಳಲುತ್ತಿದ್ದ ಏಳು ವರ್ಷದ ಬಾಲಕನಿಗೆ ಖಾಸಗಿ ಕ್ಲಿನಿಕ್ ವೈದ್ಯ ನೀಡಿದ ಇಂಜೆಕ್ಷನ್​ನಿಂದ (Injection) ಬಾಲಕ ಮೃತಪಟ್ಟಿರುವ (Death) ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ ನಡೆದಿದೆ. ಅಜ್ಜಂಪುರ ಸಮೀಪದ ಕೆಂಚಾಪುರ ಗ್ರಾಮದ ಅಶೋಕ್ ಅವರ 7 ವರ್ಷದ ಮಗ ಸೋನೇಶ್ ಕಳೆದ ನಾಲ್ಕು ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದ. ಸೋನೇಶ್ ನನ್ನ ಪೋಷಕರು ಅಜ್ಜಂಪುರ ಪಟ್ಟಣದ ಖಾಸಗಿ ಕ್ಲಿನಿಕ್ ವೈದ್ಯ ವರುಣ್ ಬಳಿ ಸೆಪ್ಟೆಂಬರ್ 24 ರಂದು ಚಿಕಿತ್ಸೆಗಾಗಿ ಕರೆದೊಯ್ದಿದ್ರು. ವೈದ್ಯ ವರುಣ್, ಬಾಲಕ ಸೋನೇಶ್ ಅವರ ಸೊಂಟಕ್ಕೆ ‌ಇಂಜೆಕ್ಷನ್ ಮಾಡಿದ್ದು ಇದೆ ಇಂಜೆಕ್ಷನ್ ಓವರ್ ಡೋಸ್ ಆಗಿ ಬಾಲಕನ ಜೀವವನ್ನೇ ತೆಗೆದಿದೆ.

ಅಜ್ಜಂಪುರ ಪಟ್ಟಣದ ಖಾಸಗಿ ಕ್ಲಿನಿಕ್ ವೈದ್ಯ ವರುಣ್ ನೀಡಿದ ಓವರ್ ಡೋಸ್ ಇಂಜೆಕ್ಷನ್ ನಿಂದ ಬಾಲಕನ ಸೊಂಟದ ಭಾಗದಲ್ಲಿ ಬೊಬ್ಬೆಗಳು ಕಾಣಿಸಿಕೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ‌ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ರು. ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಸೋನೇಶ್ ಮೃತಪಟ್ಟಿದ್ದಾರೆ. ಶವ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಸರ್ಕಾರಿ ಆಸ್ಪತ್ರೆಗೆ ಬಾಲಕನ ಮೃತದೇಹ ರವಾನೆ ಮಾಡಲಾಗಿದೆ. ಇನ್ನೂ ಈ ಸಂಬಂಧ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಡಾ ವರುಣ್ ವಿರುದ್ಧ ಪ್ರಕರಣ ದಾಖಲಾಗಿದೆ. BAMS ವ್ಯಾಸಂಗ ಮಾಡಿರುವ ವರುಣ್ ಮಕ್ಕಳಿಗೆ ಇಂಜೆಕ್ಷನ್ ಮಾಡುವಂತಿಲ್ಲ ಎಂಬ ನಿಯಮವಿದ್ದರೂ ಇಂಜೆಕ್ಷನ್ ನೀಡಿರುವುದಕ್ಕೆ ಅಜ್ಜಂಪುರ ತಾಲೂಕಿನಲ್ಲಿ ಆಕ್ರೋಶ ವ್ಯಕ್ತವಾಗಿದ್ದು ಕ್ರಮಕ್ಕೆ ಆಗ್ರಹಿಸಿದ್ದಾರೆ. ವೈದ್ಯನ ನಿರ್ಲಕ್ಷ್ಯಕ್ಕೆ ಜ್ವರದಿಂದ ಬಳಲುತ್ತಿದ್ದ 7 ವರ್ಷದ ಬಾಲಕ ಓವರ್ ಡೋಸ್ ಇಂಜೆಕ್ಷನ್​ಗೆ ಬಲಿಯಾಗಿದ್ದು ದುರಂತ.

ಇದನ್ನೂ ಓದಿ: ರಾಯಚೂರು: ಮನೆ ಖಾಲಿ ಮಾಡು ಎಂದ ಮಾಲೀಕಿಯನ್ನೇ ಕೊಂದ ಬಾಡಿಗೆದಾರ, ಕೊಲೆ ಸುಳಿವು ಸಿಕ್ಕಿದ್ದೇ ರೋಚಕ

ಹಾಡಹಗಲೇ ಆಟೋ ಚಾಲಕನ ಹುಚ್ಚಾಟ

ಬೆಂಗಳೂರಿನಲ್ಲಿ ಹಾಡಹಗಲೇ ಆಟೋ ಚಾಲಕನ ಹುಚ್ಚಾಟ ಮೆರೆದಿದ್ದಾನೆ. ಪ್ಯಾಂಟ್ ಬಿಚ್ಚಿ ಖಾಸಗಿ ಅಂಗಾಂಗ ತೋರಿಸಿ ಅಪರಿಚಿತ ವಿಕೃತಿ ಮೆರೆದಿದ್ದಾನೆ. ಮಧ್ಯಾಹ್ನ ಊಟಕ್ಕೆ ಬ್ಯೂಟಿ ಪಾರ್ಲರ್​ನಿಂದ ಹೊರಬಂದಿದ್ದ ಯುವತಿ, ಪಾರ್ಲರ್​ನಿಂದ ಸ್ವಲ್ಪ ದೂರದಲ್ಲಿರುವ ಮನೆಗೆ ತೆರಳ್ತಿದ್ಲು. ರಾಜಾಜಿನಗರದ ಈಸ್ಟ್ ವೆಸ್ಟ್ ಕಾಲೇಜು ಬಳಿ ಬೆನ್ನತ್ತಿ ಬಂದಿದ್ದ ಆಟೋ ಚಾಲಕ, ಯಾರೂ ಇಲ್ಲದ ಸಮಯ ನೋಡಿ ಪ್ಯಾಂಟ್ ಜಿಪ್ ಓಪನ್ ಮಾಡಿ, ಬ್ಯೂಟಿಷಿಯನ್ ಮುಂದೆ ನಿಂತು ಖಾಸಗಿ ಅಂಗಾಂಗ ಪ್ರದರ್ಶನ ಮಾಡಿದ್ದಾನೆ. ಭಯದಿಂದ ಯುವತಿ ಚಾಲಕನತ್ತ ಚಪ್ಪಲಿ ತೂರಿದ್ರು. ಇದಾದ ಬೆನ್ನಲ್ಲೇ ಆತ ಪರಾರಿಯಾಗಿದ್ದಾನೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ