ಚಿಕ್ಕಮಗಳೂರು, ಸೆ.28: ತೀವ್ರ ಜ್ವರದಿಂದ ಬಳಲುತ್ತಿದ್ದ ಏಳು ವರ್ಷದ ಬಾಲಕನಿಗೆ ಖಾಸಗಿ ಕ್ಲಿನಿಕ್ ವೈದ್ಯ ನೀಡಿದ ಇಂಜೆಕ್ಷನ್ನಿಂದ (Injection) ಬಾಲಕ ಮೃತಪಟ್ಟಿರುವ (Death) ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ ನಡೆದಿದೆ. ಅಜ್ಜಂಪುರ ಸಮೀಪದ ಕೆಂಚಾಪುರ ಗ್ರಾಮದ ಅಶೋಕ್ ಅವರ 7 ವರ್ಷದ ಮಗ ಸೋನೇಶ್ ಕಳೆದ ನಾಲ್ಕು ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದ. ಸೋನೇಶ್ ನನ್ನ ಪೋಷಕರು ಅಜ್ಜಂಪುರ ಪಟ್ಟಣದ ಖಾಸಗಿ ಕ್ಲಿನಿಕ್ ವೈದ್ಯ ವರುಣ್ ಬಳಿ ಸೆಪ್ಟೆಂಬರ್ 24 ರಂದು ಚಿಕಿತ್ಸೆಗಾಗಿ ಕರೆದೊಯ್ದಿದ್ರು. ವೈದ್ಯ ವರುಣ್, ಬಾಲಕ ಸೋನೇಶ್ ಅವರ ಸೊಂಟಕ್ಕೆ ಇಂಜೆಕ್ಷನ್ ಮಾಡಿದ್ದು ಇದೆ ಇಂಜೆಕ್ಷನ್ ಓವರ್ ಡೋಸ್ ಆಗಿ ಬಾಲಕನ ಜೀವವನ್ನೇ ತೆಗೆದಿದೆ.
ಅಜ್ಜಂಪುರ ಪಟ್ಟಣದ ಖಾಸಗಿ ಕ್ಲಿನಿಕ್ ವೈದ್ಯ ವರುಣ್ ನೀಡಿದ ಓವರ್ ಡೋಸ್ ಇಂಜೆಕ್ಷನ್ ನಿಂದ ಬಾಲಕನ ಸೊಂಟದ ಭಾಗದಲ್ಲಿ ಬೊಬ್ಬೆಗಳು ಕಾಣಿಸಿಕೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ರು. ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಸೋನೇಶ್ ಮೃತಪಟ್ಟಿದ್ದಾರೆ. ಶವ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಸರ್ಕಾರಿ ಆಸ್ಪತ್ರೆಗೆ ಬಾಲಕನ ಮೃತದೇಹ ರವಾನೆ ಮಾಡಲಾಗಿದೆ. ಇನ್ನೂ ಈ ಸಂಬಂಧ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಡಾ ವರುಣ್ ವಿರುದ್ಧ ಪ್ರಕರಣ ದಾಖಲಾಗಿದೆ. BAMS ವ್ಯಾಸಂಗ ಮಾಡಿರುವ ವರುಣ್ ಮಕ್ಕಳಿಗೆ ಇಂಜೆಕ್ಷನ್ ಮಾಡುವಂತಿಲ್ಲ ಎಂಬ ನಿಯಮವಿದ್ದರೂ ಇಂಜೆಕ್ಷನ್ ನೀಡಿರುವುದಕ್ಕೆ ಅಜ್ಜಂಪುರ ತಾಲೂಕಿನಲ್ಲಿ ಆಕ್ರೋಶ ವ್ಯಕ್ತವಾಗಿದ್ದು ಕ್ರಮಕ್ಕೆ ಆಗ್ರಹಿಸಿದ್ದಾರೆ. ವೈದ್ಯನ ನಿರ್ಲಕ್ಷ್ಯಕ್ಕೆ ಜ್ವರದಿಂದ ಬಳಲುತ್ತಿದ್ದ 7 ವರ್ಷದ ಬಾಲಕ ಓವರ್ ಡೋಸ್ ಇಂಜೆಕ್ಷನ್ಗೆ ಬಲಿಯಾಗಿದ್ದು ದುರಂತ.
ಇದನ್ನೂ ಓದಿ: ರಾಯಚೂರು: ಮನೆ ಖಾಲಿ ಮಾಡು ಎಂದ ಮಾಲೀಕಿಯನ್ನೇ ಕೊಂದ ಬಾಡಿಗೆದಾರ, ಕೊಲೆ ಸುಳಿವು ಸಿಕ್ಕಿದ್ದೇ ರೋಚಕ
ಬೆಂಗಳೂರಿನಲ್ಲಿ ಹಾಡಹಗಲೇ ಆಟೋ ಚಾಲಕನ ಹುಚ್ಚಾಟ ಮೆರೆದಿದ್ದಾನೆ. ಪ್ಯಾಂಟ್ ಬಿಚ್ಚಿ ಖಾಸಗಿ ಅಂಗಾಂಗ ತೋರಿಸಿ ಅಪರಿಚಿತ ವಿಕೃತಿ ಮೆರೆದಿದ್ದಾನೆ. ಮಧ್ಯಾಹ್ನ ಊಟಕ್ಕೆ ಬ್ಯೂಟಿ ಪಾರ್ಲರ್ನಿಂದ ಹೊರಬಂದಿದ್ದ ಯುವತಿ, ಪಾರ್ಲರ್ನಿಂದ ಸ್ವಲ್ಪ ದೂರದಲ್ಲಿರುವ ಮನೆಗೆ ತೆರಳ್ತಿದ್ಲು. ರಾಜಾಜಿನಗರದ ಈಸ್ಟ್ ವೆಸ್ಟ್ ಕಾಲೇಜು ಬಳಿ ಬೆನ್ನತ್ತಿ ಬಂದಿದ್ದ ಆಟೋ ಚಾಲಕ, ಯಾರೂ ಇಲ್ಲದ ಸಮಯ ನೋಡಿ ಪ್ಯಾಂಟ್ ಜಿಪ್ ಓಪನ್ ಮಾಡಿ, ಬ್ಯೂಟಿಷಿಯನ್ ಮುಂದೆ ನಿಂತು ಖಾಸಗಿ ಅಂಗಾಂಗ ಪ್ರದರ್ಶನ ಮಾಡಿದ್ದಾನೆ. ಭಯದಿಂದ ಯುವತಿ ಚಾಲಕನತ್ತ ಚಪ್ಪಲಿ ತೂರಿದ್ರು. ಇದಾದ ಬೆನ್ನಲ್ಲೇ ಆತ ಪರಾರಿಯಾಗಿದ್ದಾನೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ