AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡೂರು: ವಸತಿ ಶಾಲೆಯ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಮೂವರು ಅರೆಸ್ಟ್

ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯ ವಸತಿ ಶಾಲೆಯೊಂದರಲ್ಲಿ ಸರ್ಕಾರಿ ಅಧಿಕಾರಿಯಿಂದಲೇ ಅಮಾಯಕ ಹೆಣ್ಣು ಮಕ್ಕಳನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಕ್ರೂರ ಕೃತ್ಯ ನಡೆದಿದೆ. ಘಟನೆ ಸಂಬಂಧ ಮೂವರನ್ನ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಪ್ಯಾರಾ ನರ್ಸಿಂಗ್ ಕೋರ್ಸ್ ಹೆಸರಲ್ಲಿ ಅಮಲು ಬರೆಸುವ ಔಷಧಿ ನೀಡಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು ಎಂದು ತಿಳಿದು ಬಂದಿದೆ.

ಕಡೂರು: ವಸತಿ ಶಾಲೆಯ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಮೂವರು ಅರೆಸ್ಟ್
ಸುರೇಶ್, ಚಂದನ, ವಿನಯ್ ಬಂಧಿತ ಆರೋಪಿಗಳು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಆಯೇಷಾ ಬಾನು|

Updated on: Nov 11, 2023 | 8:55 AM

Share

ಚಿಕ್ಕಮಗಳೂರು, ನ.11: ವಸತಿ ಶಾಲೆಯಲ್ಲಿ ಮಕ್ಕಳನ್ನ ಓದಿಸುವ ಪೋಷಕರೇ ಎಚ್ಚರ. ಏಕೆಂದರೆ ಚಿಕ್ಕಮಗಳೂರಲ್ಲಿ ಶಿಕ್ಷಣ ಇಲಾಖೆ (Education Department) ತಲೆತಗ್ಗಿಸುವ ಘನಘೋರ ಘಟನೆ ಬೆಳಕಿಗೆ ಬಂದಿದೆ. ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಪ್ಯಾರಾ ನರ್ಸಿಂಗ್ ಕೋರ್ಸ್ ಹೆಸರಲ್ಲಿ ಅಮಲು ಬರೆಸುವ ಔಷಧಿ ನೀಡಿ ಲೈಂಗಿಕ ದೌರ್ಜನ್ಯ (Physical Abuse) ಎಸಗಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಕಾಫಿನಾಡಲ್ಲಿ ಸರ್ಕಾರಿ ಅಧಿಕಾರಿಯಿಂದ್ಲೇ ಮಕ್ಕಳ ಮೂಲಕ ಹಸಿಮಾಂಸ ದಂಧೆ ನಡೆಯುತ್ತಿದ್ದು ಈ ಸಂಬಂಧ ಕಡೂರು ಪೊಲೀಸರು (Kadur Police) ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯ ವಸತಿ ಶಾಲೆಯೊಂದರಲ್ಲಿ ಸರ್ಕಾರಿ ಅಧಿಕಾರಿಯಿಂದಲೇ ಅಮಾಯಕ ಹೆಣ್ಣು ಮಕ್ಕಳನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಕ್ರೂರ ಕೃತ್ಯ ನಡೆದಿದೆ. ಘಟನೆ ಸಂಬಂಧ ಮೂವರನ್ನ ಪೊಲೀಸರು ಬಂಧಿಸಿದ್ದಾರೆ. ವಸತಿ ಶಾಲೆಯ ಡಿ. ದರ್ಜೆ ನೌಕರ ಸುರೇಶ್, ಶೂಶ್ರುಕಿ ಚಂದನ, ವಿನಯ್ ಬಂಧಿತ ಆರೋಪಿಗಳು. ವಿನಯ್ ಎಂಬಾತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ನರ್ಸ್ ಪ್ರಿಯಕರನಾಗಿದ್ದಾನೆ. ಆರೋಪಿಗಳು ವಸತಿ ಶಾಲೆಯ ಹಲವು ಮಕ್ಕಳನ್ನ ಬಳಸಿಕೊಂಡಿರುವ ಆರೋಪ‌ ಕೇಳಿ ಬಂದಿದೆ.

ಇದನ್ನೂ ಓದಿ: ಟಿಪ್ಪು ಸೇರಿದಂತೆ ಮುಸ್ಲಿಂ ರಾಜರನ್ನು ಅವಮಾನಿಸುವ ಸ್ಟೇಟಸ್, ಬ್ಯಾನರ್; ಚಿಕ್ಕೋಡಿಯಲ್ಲಿ ಬಿಗುವಿನ ವಾತಾವರಣ

ಅಮಲು ಬರೆಸಿ ದೌರ್ಜನ್ಯ

ಈ ಆರೋಪಿಗಳು ವಿದ್ಯಾರ್ಥಿನಿಯರಿಗೆ ಅಮಲು ಬರೆಸುವ ಔಷಧಿ ನೀಡಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು. ತಿಂಗಳುಗಳಿಂದ ಈ ಕೃತ್ಯ ನಡೆಯುತ್ತಿತ್ತು ಎಂದು ಪೊಲೀಸರ ತನಿಖೆಯಿಂದ ಬಯಲಾಗಿದೆ. ವಸತಿ ಶಾಲೆಯ ಡಿ. ದರ್ಜೆ ನೌಕರ ಸುರೇಶ್ ಎಂಬಾತ ಮೊದಲಿಗೆ ಪ್ಯಾರಾ ಮೆಡಿಕಲ್ ಕೋರ್ಸ್‌ ಕೊಡಿಸುತ್ತೇನೆ ಎಂದು ವಿದ್ಯಾರ್ಥಿನಿಯರನ್ನು ಪುಸಲಾಯಿಸುತ್ತಿದ್ದ. ಪರೀಕ್ಷೆಯಲ್ಲಿ ಪಾಸಾದರೆ ಕೆಲಸ ಸಿಗುತ್ತದೆ ಎಂದು ನಂಬಿಸುತ್ತಿದ್ದ. ಇದಕ್ಕೆ ಒಪ್ಪಿದ ಮಕ್ಕಳ ಪೋಷಕರನ್ನು ನಂಬಿಸಿ ವಿದ್ಯಾರ್ಥಿನಿಯರನ್ನು ಚಂದನಾ ಬಳಿ ಕಳಿಸುತ್ತಿದ್ದ. ಚಂದನಾ ಆರೋಗ್ಯ ಕೇಂದ್ರಕ್ಕೆ ಬರುವ ವಿದ್ಯಾರ್ಥಿನಿಯರನ್ನು ಅಲ್ಲೇ ಉಳಿಸಿಕೊಳ್ಳುತ್ತಿದ್ದಳು. ಕಾಫಿ- ಟೀಯಲ್ಲಿ ಮತ್ತು ಬರುವ ಔಷಧಿ ಬೆರೆಸಿ ವಿದ್ಯಾರ್ಥಿನಿಯರಿಗೆ ನೀಡುತ್ತಿದ್ದಳು. ಅರೆಪ್ರಜ್ಞಾವಸ್ಥೆಯಲ್ಲಿರುತ್ತಿದ್ದ ಮಕ್ಕಳ ಮೇಲೆ ಚಂದನಾ ಲವರ್ ವಿನಯ್ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎಂದು ಪೊಲೀಸರ ತನಿಖೆ ವೇಳೆ ತಿಳಿದುಬಂದಿದೆ. ಮೂವರು ಆರೋಪಿಗಳ ವಿರುದ್ಧ ಕಡೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!