ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ

ಕಾಫಿನಾಡು ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಪ್ರಸಿದ್ಧ ತಾಣ ಮುಳ್ಳಯ್ಯನಗಿರಿಗೆ ಪ್ರವಾಸಿಗರು ಸಾವಿರಾರು ಸಂಖ್ಯೆಯಲ್ಲಿ ತೆರಳುತ್ತಿದ್ದಾರೆ.ಒಂದು ಕಡೆ ಟ್ರಾಫಿಕ್ ಜಾಮ್​ನಲ್ಲಿ ಸಿಲುಕಿ ಪ್ರವಾಸಿಗರು ಪರದಾಡಿದರೆ ಮತ್ತೊಂದಡೆ ಪ್ರವಾಸೋದ್ಯಮ ಇಲಾಖೆ, ಪೊಲೀಸ್ ಇಲಾಖೆ ಪ್ರವಾಸಿಗರಿಗೆ ಶಾಕ್ ನೀಡಿದೆ.

ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ
ಪ್ಲಾಸ್ಟಿಕ್​ ನಿಷೇಧ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ವಿವೇಕ ಬಿರಾದಾರ

Updated on:Jun 24, 2024 | 8:00 AM

ಚಿಕ್ಕಮಗಳೂರು, ಜೂನ್​ 23: ಕಾಫಿನಾಡು ಚಿಕ್ಕಮಗಳೂರಿಗೆ (Chikkamagaluru) ವೀಕೆಂಡ್ ಮಸ್ತಿಗಾಗಿ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು (Tourists) ತೆರಳುತ್ತಾರೆ. ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ (Chandradrona Parvata) ಸಾಲಿನಲ್ಲಿರುವ ಮುಳ್ಳಯ್ಯನಗಿರಿಗೆ (Mullayangiri) ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ತೆರಳುತ್ತಾರೆ. ಹೀಗೆ ತೆರಳುವಾಗ ಅನೇಕರು ಪ್ಲಾಸ್ಟಿಕ್​ ವಸ್ತುಗಳನ್ನು ತೆಗೆದುಕೊಂಡು ಹೋಗುತ್ತಾರೆ. ಆದರೆ, ಇನ್ಮುಂದೆ ಪ್ಲಾಸ್ಟಿಕ್​ ವಸ್ತುಗಳನ್ನು ಒಯ್ಯುವಂತಿಲ್ಲ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಪ್ಲಾಸ್ಟಿಕ್​ ಬಳಕೆಯನ್ನು ಸರ್ಕಾರ ಸಂಪೂರ್ಣ ನಿಷೇಧಿಸಿದೆ.

ಪ್ಲಾಸ್ಟಿಕ್ ನಿಷೇಧ ಮಾಡಿದ ಹಿನ್ನೆಲೆಯಲ್ಲಿ ಚೆಕ್​​​ಪೋಸ್ಟ್​​ನಲ್ಲಿ ವಾಹನಗಳನ್ನು ತಪಾಸಣೆ ಮಾಡುತ್ತಿದ್ದು, ಒಂದು ವೇಳೆ ಪ್ಲಾಸ್ಟಿಕ್​​​ ವಸ್ತುಗಳು ಸಿಕ್ಕರೆ ಸೀಜ್​​ ಮಾಡಲಾಗುತ್ತಿದೆ. ಪಶ್ಚಿಮ ಘಟ್ಟಗಳ ಸಾಲು ಸೇರಿದಂತೆ, ಪ್ರವಾಸಿತಾಣಗಳನ್ನ ರಕ್ಷಿಸುವ ಸಲುವಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ. ಸರ್ಕಾರದ ಈ ಕ್ರಮವನ್ನು ಪರಿಸರ ಪ್ರೇಮಿಗಳು ಸ್ವಾಗತಿಸಿದ್ದು, ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಮಳೆಗಾಲ ಆರಂಭವಾಗಿದ್ದರಿಂದ ವೀಕೆಂಡ್​​ನಲ್ಲಿ ಹೆಚ್ಚಿನ ಜನರು ಚಿಕ್ಕಮಗಳೂರು ಪ್ರವಾಸಕ್ಕೆ ತೆರಳುತ್ತಾರೆ. ಅಲ್ಲಿನ ಮುಳ್ಳಯ್ಯನಗಿರಿ, ಎತ್ತಿನ ಭುಜ ಶಿಖರದಲ್ಲಿ ಚಾರಣಕ್ಕೆ ತೆರಳುತ್ತಾರೆ. ಹೀಗೆ ತೆರಳುವವರು ಕೆಲವೊಂದು ಸಾರಿ ಅಡ್ಡಾದಿಡ್ಡಿ ವಾಹನ ಪಾರ್ಕ್​ ಮಾಡುತ್ತಾರೆ. ಅಥವಾ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ತೆರಳುವವದರಿಂದ ಘಟ್ಟಗಳ ರಸ್ತೆ ಚಿಕ್ಕದಾಗಿರುವುದರಿಂದ ಕಿಮೀ ಗಟ್ಟಲೆ ಟ್ರಾಫಿಕ್ ​ಜಾಮ್​ ಉಂಟಾಗುತ್ತದೆ.

ಇದನ್ನೂ ಓದಿ: ಪ್ರವಾಸಿಗರ ಗಮನಕ್ಕೆ: ಮುಳ್ಳಯ್ಯನಗಿರಿ ಹಾಗೂ ಎತ್ತಿನಭುಜ ಚಾರಣಕ್ಕೆ ನಿಷೇಧ!

ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರು ಪರದಾಡುತ್ತಾರೆ. ಮುಂಜಾಗ್ರತಾ ಕ್ರಮವಾಗಿ ಚಂದ್ರದ್ರೋಣ ಪರ್ವತಕ್ಕೆ ‌ತೆರಳುವ ರಸ್ತೆಯಲ್ಲಿದ್ದ ಕೈಮರ ಚೆಕ್​ಪೋಸ್ಟ್​​ನ್ನು N,M,D,C ಗ್ರಾಮಕ್ಕೆ ಬದಲಾವಣೆ ಮಾಡಿದ್ದು, ಅಲ್ಲಿನ ಸ್ಥಳೀಯರು ಪ್ರವಾಸಿಗರ ಕಿರುಚಾಟ ಕೂಗಾಟದ ಜೊತೆ ಮೋಜು ಮಸ್ತಿಯಿಂದ ತೊಂದರೆ ಆಗುತ್ತಿದೆ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಳೆಗಾಲದಲ್ಲಿ ಸಾವಿರಾರು ಪ್ರವಾಸಿಗರಿಂದ ಸದಾ ಗಿಜುಗುಡುವ ತಾಣವಾಗಿರುವ ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ ಮುಳ್ಳಯ್ಯನಗಿರಿ, ಮೂಡಿಗೆರೆ ತಾಲೂಕಿನ ಬೈರಾಪುರ ಬಳಿಯ ಎತ್ತಿನಭುಜಕ್ಕೆ ಇದೀಗ ಪ್ರವಾಸಿಗರು ಹಾಗೂ ಚಾರಣಿಗರು ಬರದಂತೆ ನಿಷೇಧ ಹೇರಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗದಲ್ಲಿರುವ ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿ ವಿಹಂಗಮವಾಗಿ ನಿಂತಿರುವ ಶಿಖರವೇ ಎತ್ತಿನ ಭುಜ. ಮಳೆಗಾಲ, ಚಳಿಗಾಲ, ಬೇಸಿಗೆಕಾಲ ಅನ್ನದೆ ವರ್ಷವಿಡೀ ಪ್ರವಾಸಿಗರಿಂದ ತುಂಬಿ ತುಳುಕುವ ಶಿಖರವಿದು. ಕಳೆದ ಒಂದು ತಿಂಗಳಿಂದ ಎತ್ತಿನಭುಜ ಶಿಖರದ ಸೌಂದರ್ಯವನ್ನು ಸಾವಿರಾರು ಪ್ರವಾಸಿಗರು ಅನುಭವಿಸಿ ಹೋಗಿದ್ದಾರೆ.

ಕೇವಲ‌ ಸೌಂದರ್ಯ ಸವಿಯುವದರ ಜೊತೆಗೆ ಇಲ್ಲಿ ಹುಚ್ಚಾಟವಾಡಿ, ಪ್ರಕೃತಿಯ ಒಡಲನ್ನೇ ಹಾಳು ಮಾಡುತ್ತಿದ್ದಾರೆ. ಇವೆಲ್ಲವೂ ಕೂಡ ಸ್ಥಳೀಯರು ಹಾಗೂ ಪ್ರಕೃತಿ ಪ್ರಿಯರ ಕೆಂಗಣ್ಣಿಗೆ ಗುರಿಯಾಗಿದೆ. ಮುಳ್ಳಯ್ಯನಗಿರಿ ಮತ್ತು ಎತ್ತಿನಭುಜಕ್ಕೆ ಪ್ರವಾಸಿಗರು ಆಗಮಿಸುವುದನ್ನು ನಿಷೇಧ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.

ರಾಜ್ಯ ಸರ್ಕಾರ ಇದೀಗ ಎತ್ತಿನಭುಜ, ಮುಳ್ಳಯ್ಯನಗಿರಿ ತಾಣಕ್ಕೆ ಚಾರಣವನ್ನು ನಿರ್ಬಂಧಿಸಿ ಆದೇಶ ಹೊರಡಿಸಿದೆ. ಈ ಮೂಲಕ ಪ್ರವಾಸಿಗರು ಹಾಗೂ ಚಾರಣಿಗರಿಗೆ ಶಾಕ್ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:45 am, Mon, 24 June 24

ನಿಜಾಮನ ರಜಾಕರು ಮುಸಲ್ಮಾನರಲ್ಲ ಅಂತ ಪ್ರಿಯಾಂಕ್ ಹೇಳುತ್ತಾರೆ: ಯತ್ನಾಳ್
ನಿಜಾಮನ ರಜಾಕರು ಮುಸಲ್ಮಾನರಲ್ಲ ಅಂತ ಪ್ರಿಯಾಂಕ್ ಹೇಳುತ್ತಾರೆ: ಯತ್ನಾಳ್
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ