ಕಾಫಿನಾಡಲ್ಲಿ ಕಾಂಗ್ರೆಸ್‌ ಗ್ಯಾರಂಟಿ ಸಮಾವೇಶ; ಖಾಕಿ ಹೈ ಅಲರ್ಟ್, ಹಲವೆಡೆ ಸಂಚಾರ ಬಂದ್

| Updated By: ಆಯೇಷಾ ಬಾನು

Updated on: Mar 03, 2024 | 8:07 AM

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಘಟನೆ ನಡೆದ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಡಯುತ್ತಿರುವ ಗ್ಯಾರಂಟಿ ಸಮಾವೇಶಕ್ಕೆ ಭಾರೀ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಕೆಜೆ ಜಾರ್ಜ್ ಭಾಗಿಯಾಗಲಿದ್ದಾರೆ.

ಕಾಫಿನಾಡಲ್ಲಿ ಕಾಂಗ್ರೆಸ್‌ ಗ್ಯಾರಂಟಿ ಸಮಾವೇಶ; ಖಾಕಿ ಹೈ ಅಲರ್ಟ್, ಹಲವೆಡೆ ಸಂಚಾರ ಬಂದ್
ಸಿಎಂ ಸಿದ್ದರಾಮಯ್ಯ
Follow us on

ಚಿಕ್ಕಮಗಳೂರು, ಮಾರ್ಚ್.03: ಇಂದು ನಗರದಲ್ಲಿ ಕಾಂಗ್ರೆಸ್ ಸರ್ಕಾರದಿಂದ (Congress Government) ಗ್ಯಾರಂಟಿ ಸಮಾವೇಶ ಹಮ್ಮಿಕೊಳ್ಳಲಾಗಿದ್ದು ಜಿಲ್ಲಾಡಳಿತದಿಂದ ಸಂಪೂರ್ಣ ಸಿದ್ಧತೆ ಹಾಗೂ ತಯಾರಿ ನಡೆದಿದೆ. ಮತ್ತೊಂದೆಡೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ (Bengaluru Rameshwaram Cafe) ಬಾಂಬ್ ಸ್ಫೋಟ ಘಟನೆ ನಡೆದ ಹಿನ್ನೆಲೆ ಗ್ಯಾರಂಟಿ ಸಮಾವೇಶಕ್ಕೆ ಭಾರೀ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಚಿಕ್ಕಮಗಳೂರು ನಗರದಾದ್ಯಂತ ಪೊಲೀಸ್ ಹೈಅಲರ್ಟ್ ಆಗಿದೆ.

ನಗರದ ಸುಭಾಷ್​ಚಂದ್ರ ಬೋಸ್ ಆಟದ ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನದ ಹಿನ್ನೆಲೆ ವೇದಿಕೆ ಸುತ್ತಮುತ್ತ ಫುಲ್ ಟೈಟ್ ಸೆಕ್ಯೂರಿಟಿ ಮಾಡಿದ್ದು, ಸಮಾವೇಶ ಸ್ಥಳದಲ್ಲಿ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ ನಡೆಸಲಾಗಿದೆ. ಚಿಕ್ಕಮಗಳೂರು ಎಸ್​ಪಿ ವಿಕ್ರಂ ಆಮ್ಟೆ ನೇತೃತ್ವದಲ್ಲಿ ಗ್ಯಾರಂಟಿ ಸಮಾವೇಶ ನಡೆಯುವ ಸ್ಥಳ ಹಾಗೂ ಸುತ್ತಮುತ್ತಲೂ ತಪಾಸಣೆ ನಡೆಸಲಾಗಿದೆ. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಕೆಜೆ ಜಾರ್ಜ್ ಭಾಗಿಯಾಗಲಿದ್ದಾರೆ.

ಹೆಲಿಕಾಪ್ಟರ್ ಮೂಲಕ 11 ಗಂಟೆಗೆ ಚಿಕ್ಕಮಗಳೂರಿಗೆ ಆಗಮಿಸಲಿರುವ ಸಿಎಂ, ಡಿಸಿಎಂ ಗ್ಯಾರಂಟಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಇನ್ನು ಚಿಕ್ಕಮಗಳೂರು ಜಿಲ್ಲೆಯ 5 ಕ್ಷೇತ್ರಗಳ ಫಲಾನುಭವಿಗಳು ಕೂಡ ಭಾಗಿಯಾಗಲಿದ್ದಾರೆ. ಸಿಎಂ ಸಿದ್ದರಾಮಯ್ಯನವರು 28 ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಫಲಾನುಭವಿಗಳ ಕರೆತರಲು 300ಕ್ಕೂ ಹೆಚ್ಚು KSRTC ಬಸ್ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮದ ಭದ್ರತೆಗಾಗಿ 1 ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ: ಯಶ್ ಬೆಂಗಾವಲು ಕಾರು ಹರಿದು ಗಾಯ, ಯುವಕನಿಂದ ದೂರು ದಾಖಲು

ಹಲವೆಡೆ ಸಂಚಾರ ಬಂದ್

ಮುಖ್ಯಮಂತ್ರಿ ಸಂಚರಿಸುವ ಮಾರ್ಗದಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದೆ. ಇಂದು ಬೆಳಗ್ಗೆ 6ರಿಂದ ಕಾರ್ಯಕ್ರಮ ಮುಗಿಯುವವರೆಗೆ ಸಂಚಾರ ಬಂದ್ ಇರಲಿದೆ. ವಾಹನಗಳ ಪಾರ್ಕಿಂಗ್ & ಸಾರ್ವಜನಿಕರ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ಸರ್ಕಲ್, ಕೋಟೆ ಸರ್ಕಲ್, AIT ಸರ್ಕಲ್, ಹೆಲಿಪ್ಯಾಡ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ಬಂದ್. ಚಿಕ್ಕಮಗಳೂರು ನಗರದಲ್ಲಿ ಪೊಲೀಸರು ಸಂಪೂರ್ಣ ತಪಾಸಣೆ ನಡೆಸುತ್ತಿದ್ದಾರೆ.

ಗ್ಯಾರಂಟಿ ಸಮಾವೇಶ ನಡೆಯುವ ಸ್ಥಳ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿರಂತರ ಚೆಕ್ಕಿಂಗ್ ನಡೆಯುತ್ತಿದ್ದು, ಚಿಕ್ಕಮಗಳೂರು ಎಸ್ಪಿ ವಿಕ್ರಂ ಆಮ್ಟೆ ಹಾಗೂ ಡಿಸಿ ಮೀನಾ ನಾಗರಾಜ್ ನೇತೃತ್ವದಲ್ಲಿ ತಪಾಸಣೆ ಮಾಡಲಾಗಿದ್ದು ಟೈಟ್ ಸೆಕ್ಯೂರಿಟಿ ಮಾಡಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ