ಚಿಕ್ಕಮಗಳೂರಿನಲ್ಲಿ ಹೆರಿಗೆ ವೇಳೆ ಗರ್ಭಿಣಿ, ಮಗು ಸಾವು! ಆಸ್ಪತ್ರೆ ಮುಂದೆ ಕುಟುಂಬಸ್ಥರು ಧರಣಿ

ಬೆಂಗಳೂರು ಉತ್ತರ ತಾಲೂಕಿನ ಮಾದವಾರ ಕೆರೆಯಲ್ಲಿ ಇಬ್ಬರು ಅಪರಿಚಿತ ಯುವಕರ ಶವ ಪತ್ತೆಯಾಗಿವೆ. ಸ್ಥಳೀಯರ ನೆರವಿನಿಂದ ಪೊಲೀಸ್ ಸಿಬ್ಬಂದಿ ಶವಗಳನ್ನು ಮೇಲೆತ್ತಿದ್ದಾರೆ.

ಚಿಕ್ಕಮಗಳೂರಿನಲ್ಲಿ ಹೆರಿಗೆ ವೇಳೆ ಗರ್ಭಿಣಿ, ಮಗು ಸಾವು! ಆಸ್ಪತ್ರೆ ಮುಂದೆ ಕುಟುಂಬಸ್ಥರು ಧರಣಿ
ಮೃತ ಗರ್ಭಿಣಿ ಕುಟುಂಬಸ್ಥರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದಾರೆ
Edited By:

Updated on: Dec 12, 2021 | 2:51 PM

ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ಗರ್ಭಿಣಿ ಮತ್ತು ಮಗು ಮೃತಪಟ್ಟಿದೆ. 27 ವರ್ಷದ ಶ್ವೇತಾ ಮತ್ತು ಮಗು ಕೊನೆಯುಸಿರೆಳೆದಿದ್ದು, ಚಿಕ್ಕಮಗಳೂರು ವೈದ್ಯ ಎಲ್ಡೋಸ್ ನಿರ್ಲಕ್ಷ್ಯದಿಂದ ತಾಯಿ, ಮಗು ಮೃತಪಟ್ಟಿದ್ದಾರೆ ಅಂತ ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಜೊತೆಗೆ ಆಸ್ಪತ್ರೆ ಎದುರು ಶ್ವೇತಾ ಕುಟುಂಬಸ್ಥರು ಸೇರಿದಂತೆ ಸ್ಥಳೀಯರು ಧರಣಿ ನಡೆಸಿದ್ದಾರೆ. ಪೊಲೀಸ್, ಪ್ರತಿಭಟನಾಕಾರರ ಮಧ್ಯೆ ಮಾತಿನ ಚಕಮಕಿ ನಡೆದಿದೆ.

ಅಪರಿಚಿತ ಯುವಕರ ಶವ ಪತ್ತೆ
ಬೆಂಗಳೂರು ಉತ್ತರ ತಾಲೂಕಿನ ಮಾದವಾರ ಕೆರೆಯಲ್ಲಿ ಇಬ್ಬರು ಅಪರಿಚಿತ ಯುವಕರ ಶವ ಪತ್ತೆಯಾಗಿವೆ. ಸ್ಥಳೀಯರ ನೆರವಿನಿಂದ ಪೊಲೀಸ್ ಸಿಬ್ಬಂದಿ ಶವಗಳನ್ನು ಮೇಲೆತ್ತಿದ್ದಾರೆ. ಗುರುತು ಪತ್ತೆ ಕಾರ್ಯಕ್ಕೆ ಪೊಲೀಸರು ಮುಂದಾಗಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರೈತನ ಮೇಲೆ ಕರಡಿ ದಾಳಿ
ಮೇವು ತರಲು ಹೋಗಿದ್ದ ರೈತನ ಮೇಲೆ ಕರಡಿ ದಾಳಿ ನಡೆಸಿದೆ. ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲೂಕಿನ ನಗೆ ಗ್ರಾಮದಲ್ಲಿ ರಾಮಗೌಡ (60) ಮೇಲೆ ಕರಡಿ ದಾಳಿ ನಡೆಸಿದೆ. ಗಾಯಾಳು ರೈತನಿಗೆ ಕಾರವಾರದ ಕಿಮ್ಸ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಯುವಕನ ಬರ್ಬರ ಹತ್ಯೆ
ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ಯುವಕನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈಯಲಾಗಿದೆ. ರಶೀದ್ ಚಿತ್ತಾಪುರ ಪಟ್ಟಣದ ಆಶ್ರಯ ಕಾಲೋನಿಯ ಮೊಹಮ್ಮದ್ ರಶೀದ್(25) ಹತ್ಯೆಗೊಳಗಾದ ಯುವಕ. ದುಷ್ಕರ್ಮಿಗಳು ಕಳೆದ ರಾತ್ರಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸದ್ಯ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ

ಟ್ರೆಂಡಿಂಗ್​ ಪೈಪೋಟಿಯಲ್ಲಿ ಪರಭಾಷೆ ಚಿತ್ರಗಳಿಗೆ ಫೈಟ್​ ಕೊಟ್ಟ ಏಕೈಕ ಕನ್ನಡ ಸಿನಿಮಾ ಯಾವುದು?

‘ಯಾಕೆ ಬೆತ್ತಲೆಯಾಗಿ ತಿರುಗುತ್ತೀಯಾ’ ಅಂತ ಫ್ರೆಂಡ್ಸ್​ ಕೇಳಿದ್ರು, ಬಾಯ್​ಫ್ರೆಂಡ್​ ಬಿಟ್ಟುಹೋದ; ನಟಿ ನಿಯಾ ಬೇಸರದ ಕಥೆ