AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shringeri Sharadamba: ಅಕ್ಟೋಬರ್ 8ರಂದು ಶೃಂಗೇರಿ ಶಾರದಾಂಬಾ ದರ್ಶನಕ್ಕೆ ಭಕ್ತರಿಗೆ ನಿರ್ಬಂಧ

President Ram Nath Kovind Visit to Shringeri Sharadamba: ಅಕ್ಟೋಬರ್ 8ರ ಬೆಳಗ್ಗೆ 11ರಿಂದ ಸಂಜೆ 4ರವರೆಗೆ ರಾಷ್ಟ್ರಪತಿಗಳ ಕಾರ್ಯಕ್ರಮ ಶೃಂಗೇರಿಯಲ್ಲಿ ನಡೆಯಲಿದೆ. ಶಾರದಾಂಬೆ ದರ್ಶನದ ಜತೆಗೆ ಉಭಯ ಶ್ರೀಗಳನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿ ಮಾಡಲಿದ್ದಾರೆ.

Shringeri Sharadamba: ಅಕ್ಟೋಬರ್ 8ರಂದು ಶೃಂಗೇರಿ ಶಾರದಾಂಬಾ ದರ್ಶನಕ್ಕೆ ಭಕ್ತರಿಗೆ ನಿರ್ಬಂಧ
ಶೃಂಗೇರಿ ಶಾರದಾಂಬಾ
TV9 Web
| Updated By: guruganesh bhat|

Updated on:Oct 06, 2021 | 3:18 PM

Share

ಚಿಕ್ಕಮಗಳೂರು: ಅಕ್ಟೋಬರ್ 8ರಂದು ಶೃಂಗೇರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿ ನೀಡಲಿರುವ ಕಾರಣ ಅಂದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಶಾರದಾಂಬೆ ದೇಗುಲಕ್ಕೆ ಭಕ್ತರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಅಕ್ಟೋಬರ್ 8ರ ಬೆಳಗ್ಗೆ 11ರಿಂದ ಸಂಜೆ 4ರವರೆಗೆ ರಾಷ್ಟ್ರಪತಿಗಳ ಕಾರ್ಯಕ್ರಮ ಶೃಂಗೇರಿಯಲ್ಲಿ ನಡೆಯಲಿದೆ. ಶಾರದಾಂಬೆ ದರ್ಶನದ ಜತೆಗೆ ಉಭಯ ಶ್ರೀಗಳನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿ ಮಾಡಲಿದ್ದಾರೆ.

ಶೃಂಗೇರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿ ಹಿನ್ನೆಲೆಯಲ್ಲಿ ಹೆಲಿಪ್ಯಾಡ್ ನಿರ್ಮಿಸಲು ಮರಗಳಿಗೆ ಕೊಡಲಿ ಪೆಟ್ಟು ಕೊಡಲಾಗಿದೆ. ಹೆಲಿಪ್ಯಾಡ್ ನಿರ್ಮಿಸಲು ಮರಗಳಿಗೆ ಕೊಡಲಿಯೇಟು ನೀಡಲಾಗಿದೆ. ಮರಗಳನ್ನು ಕಡಿಯುತ್ತಿರುವುದಕ್ಕೆ ಪರಿಸರ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬುಧವಾರದಿಂದ 4 ದಿನಗಳ ಕಾಲ ರಾಷ್ಟ್ರಪತಿ ರಾಮನಾಥ ಕೋವಿಂದ್ (Ramnath Kovind) ಕರ್ನಾಟಕ ಪ್ರವಾಸದಲ್ಲಿ ಇರಲಿದ್ದಾರೆ. ಇಂದಿನಿಂದ ರಾಷ್ಟ್ರಪತಿಗಳ ರಾಜ್ಯ ಪ್ರವಾಸ ಆರಂಭವಾಗಲಿದ್ದು, ಐಎಎಫ್‌ ವಿಶೇಷ ವಿಮಾನದಲ್ಲಿ ಹೆಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ರಾಜ್ಯಪಾಲ ಟಿ.ಸಿ. ಗೆಹ್ಲೋಟ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದ್ದಾರೆ. ಕರ್ನಾಟಕ ಪ್ರವಾಸ ಮುಗಿಸಿ ಅ. 9ರಂದು ರಾಷ್ಟ್ರಪತಿಗಳು ದೆಹಲಿಗೆ ವಾಪಾಸ್ ಹೋಗಲಿದ್ದಾರೆ.

ನಾಲ್ಕು ದಿನಗಳ ರಾಜ್ಯ ಪ್ರವಾಸಕ್ಕಾಗಿ ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಮೈಸೂರು, ಚಾಮರಾಜನಗರ ಜಿಲ್ಲಾ ಪ್ರವಾಸ ಮಾಡಲಿದ್ದಾರೆ. ಅ. 7ರಂದು ಸಂಜೆ ಮಂಗಳೂರಿಗೆ ತೆರಳಲಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅ. 8ರಂದು ಚಿಕ್ಕಮಗಳೂರಿನ ಶೃಂಗೇರಿ ಶಾರದಾಂಬ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಅ. 9ರಂದು ಮಂಗಳೂರು ವಿಮಾನ ನಿಲ್ದಾಣದ ಮೂಲಕ ರಾಮನಾಥ್ ಕೋವಿಂದ್ ದೆಹಲಿಗೆ ತೆರಳಲಿದ್ದಾರೆ.

ಅ. 8ರಂದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಗೆ ಭೇಟಿ ನೀಡಲಿರುವ ರಾಷ್ಟ್ರಪತಿಗಳು ಅದಕ್ಕಾಗಿ ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಅಕ್ಟೋಬರ್ 7 ಮತ್ತು 8ರಂದು ರಾಮನಾಥ್ ಕೋವಿಂದ್ ಮಂಗಳೂರಿನ ಸರ್ಕ್ಯುಟ್ ಹೌಸ್‌ನಲ್ಲಿ ಉಳಿದುಕೊಳ್ಳಲಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ರಾಷ್ಟ್ರಪತಿಗಳು ಮಂಗಳೂರಿನ ಸರ್ಕ್ಯುಟ್ ಹೌಸ್‌ಗೆ ಆಗಮಿಸಲಿದ್ದಾರೆ.

ರಾಮನಾಥ ಕೋವಿಂದ್‌ ಶಾರದಾ ಪೀಠಕ್ಕೆ ಅ. 8ರಂದು ಆಗಮಿಸುವ ಹಿನ್ನೆಲೆಯಲ್ಲಿ ಮೂರು ಹೆಲಿಕಾಪ್ಟರ್‌ ಇಳಿಯುವುದಕ್ಕಾಗಿ ಹೆಲಿಪ್ಯಾಡ್‌ಗಳ ನಿರ್ಮಾಣ ಮಾಡಲಾಗಿದೆ. ಗಾಂಧಿ ಮೈದಾನದಲ್ಲಿದ್ದ ಅಂಗಡಿ ಮುಂಗಟ್ಟುಗಳು, ಹೋಟೆಲ್‌, ರಸ್ತೆ ಬದಿ ವ್ಯಾಪಾರದ 25ಕ್ಕೂ ಹೆಚ್ಚು ಅಂಗಡಿಗಳ ತೆರವು ಮಾಡಲಾಗಿದೆ.

ಇದನ್ನೂ ಓದಿ: 

ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್; ನಾಳೆಯಿಂದ ಬಿಳಿಗಿರಿ ರಂಗನ ಬೆಟ್ಟ, ಶೃಂಗೇರಿ ಪ್ರವಾಸ

Published On - 2:45 pm, Wed, 6 October 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!