ಶೃಂಗೇರಿಗೆ ಆಗಮಿಸಿದ ರಾಷ್ಟ್ರಪತಿ ಕೋವಿಂದ್; ಕುಟುಂಬ ಸಮೇತರಾಗಿ ಶೃಂಗೇರಿ ಶಾರದಾಂಬೆ ದೇವಾಲಯ ಪ್ರವೇಶ

ಏರ್ಪೋರ್ಟ್​ನಿಂದ ಹೆಲಿಕಾಪ್ಟರ್​ನಲ್ಲಿ ಶೃಂಗೇರಿಯತ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಯಾಣಿಸಲಿದ್ದಾರೆ. ನಿನ್ನೆ ರಾತ್ರಿ ಮಂಗಳೂರಿನ ಸರ್ಕ್ಯೂಟ್ ಹೌಸ್​ನಲ್ಲಿ ರಾಷ್ಟ್ರಪತಿ ವಾಸ್ತವ್ಯ ಹೂಡಿದ್ದರು.

ಶೃಂಗೇರಿಗೆ ಆಗಮಿಸಿದ ರಾಷ್ಟ್ರಪತಿ ಕೋವಿಂದ್; ಕುಟುಂಬ ಸಮೇತರಾಗಿ ಶೃಂಗೇರಿ ಶಾರದಾಂಬೆ ದೇವಾಲಯ ಪ್ರವೇಶ
ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ಕೋವಿಂದ್
Follow us
TV9 Web
| Updated By: preethi shettigar

Updated on:Oct 08, 2021 | 1:23 PM

ಚಿಕ್ಕಮಗಳೂರು: ಮೆಣಸೆ ಹೆಲಿಪ್ಯಾಡ್​ಗೆ ಹೆಲಿಕ್ಯಾಪ್ಟರ್ ಮೂಲಕ ರಾಷ್ಟ್ರಪತಿ ರಾಮನಾಥ್​ ಕೋವಿಂದ್ ಆಗಮಿಸಿದ್ದಾರೆ. ಕುಟುಂಬ ಸಮೇತರಾಗಿ ಶೃಂಗೇರಿ ಶಾರದಾಂಬೆ ದೇವಾಲಯ ಪ್ರವೇಶ ಮಾಡಿದ್ದಾರೆ. ಮಠದ ವತಿಯಿಂದ ರಾಷ್ಟ್ರಪತಿಗಳಿಗೆ ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಗಿದೆ. ಆನೆ, ಅಶ್ವ, ಕುಂಭದೊಂದಿಗೆ ರಾಷ್ಟ್ರಪತಿ ಕೋವಿಂದ್​ ಅವರಿಗೆ ಸ್ವಾಗತಿಸಲಾಗಿದೆ. ಶಾರದಾಂಬೆಯ ದರ್ಶನ ಬಳಿಕ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗುರುವತ್ರಯರ ಆಶೀರ್ವಾದ ಪಡೆಯಲಿದ್ದಾರೆ. ಆ ಬಳಿಕ ನವರಾತ್ರಿ ಉತ್ಸವದಲ್ಲಿ ಕುಟುಂಬ ಸಮೇತರಾಗಿ ರಾಷ್ಟ್ರಪತಿ ಭಾಗಿಯಾಗಲಿದ್ದಾರೆ. ಸಂಜೆ ನಾಲ್ಕು ಗಂಟೆವರೆಗೂ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಗಿಯಾಗಲಿದ್ದಾರೆ.

ಮಂಗಳೂರಿನಿ‌ಂದ ತೆರಳಿದ ರಾಷ್ಟ್ರಪತಿ ಕೋವಿಂದ್; ಏರ್​​ಪೋರ್ಟ್​ನಿಂದ ಹೆಲಿಕಾಪ್ಟರ್​​ನಲ್ಲಿ ಶೃಂಗೇರಿಯತ್ತ ಪ್ರಯಾಣ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಂಗಳೂರಿನಿಂದ ಶೃಂಗೇರಿಗೆ ತೆರಳಿದ್ದಾರೆ. ಮಂಗಳೂರಿನ ಸರ್ಕ್ಯೂಟ್ ಹೌಸ್​ನಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದತ್ತ ಕೋವಿಂದ್ ತೆರಳಿದ್ದಾರೆ. ಏರ್ಪೋರ್ಟ್​ನಿಂದ ಹೆಲಿಕಾಪ್ಟರ್​ನಲ್ಲಿ ಶೃಂಗೇರಿಯತ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಯಾಣಿಸಲಿದ್ದಾರೆ. ನಿನ್ನೆ ರಾತ್ರಿ ಮಂಗಳೂರಿನ ಸರ್ಕ್ಯೂಟ್ ಹೌಸ್​ನಲ್ಲಿ ರಾಷ್ಟ್ರಪತಿ ವಾಸ್ತವ್ಯ ಹೂಡಿದ್ದರು. ಇಂದು ಶೃಂಗೇರಿಗೆ ಭೇಟಿ ನೀಡಿ ಶಾರದಾಂಬೆ ದರ್ಶನ ಪಡೆಯಲಿದ್ದಾರೆ.

ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ಕೋವಿಂದ್ ಶಾರದಾಂಬೆ ದರ್ಶನ ಪಡೆದ ರಾಷ್ಟ್ರಪತಿ ರಾಮನಾಥ ಕೋವಿಂದ್, ವಿಶೇಷ ಪೂಜೆ ಸಲ್ಲಿಸಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭಾಗಿಯಾಗಿದ್ದರು. ನವರಾತ್ರಿ 2ನೇ ದಿನದಂದು ವಿಶೇಷ ಪೂಜೆ ಸಲ್ಲಿಸಿದ ಕೋವಿಂದ್, ಶ್ರೀ ಭಾರತಿ ತೀರ್ಥ ಸ್ವಾಮೀಜಿ ಆಶೀರ್ವಾದ ಪಡೆದಿದ್ದಾರೆ. ಪತ್ನಿ, ಪುತ್ರಿ ಜತೆ ರಾಷ್ಟ್ರಪತಿ ಕೋವಿಂದ್ ಶೃಂಗೇರಿಗೆ ಆಗಮಿಸಿದ್ದಾರೆ.

ಶೃಂಗೇರಿಗೆ ರಾಷ್ಟ್ರಪತಿ ಭೇಟಿ: ದನಕರುಗಳು, ಕೋಳಿ, ಹಂದಿ ಮತ್ತು ಇತರ ಸಾಕುಪ್ರಾಣಿಗಳಿಗೂ ನಿರ್ಬಂಧ ಇಂದು (ಅಕ್ಟೋಬರ್ 8) ಶೃಂಗೇರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಭೇಟಿ ನೀಡಲಿರುವ ಕಾರಣ ಶೃಂಗೇರಿ ನಾಗರಿಕರಿಗೆ ನಿರ್ಬಂಧಗಳ ಮೇಲೆ ನಿರ್ಬಂಧ ವಿಧಿಸಲಾಗುತ್ತಿದೆ. ಈಗಾಗಲೇ ಜನಸಾಮಾನ್ಯರ ಓಡಾಟದ ಮೇಲೆ ನಿರ್ಬಂಧ ಹೇರಿರುವ ಜಿಲ್ಲಾಡಳಿತ ಇದೀಗ ದನಕರುಗಳು, ಕೋಳಿ, ಹಂದಿ ಮತ್ತು ಇತರ ಸಾಕುಪ್ರಾಣಿಗಳಿಗೂ ನಿರ್ಬಂಧ ಹೇರಿದೆ. ಮನೆಯಲ್ಲೇ ದನಕರುಗಳು, ಕೋಳಿ, ಹಂದಿ ಕೂಡಿ ಹಾಕುವಂತೆ ಸಾರ್ವಜನಿಕರಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ. ಸಾರ್ವಜನಿಕ ಸ್ಥಳ ಸೇರಿದಂತೆ ಯಾವುದೇ ಬೀದಿಯಲ್ಲಿ ಜಾನುವಾರುಗಳನ್ನು ಬಿಡದಂತೆ ಆದೇಶಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸಾಕುಪ್ರಾಣಿಗಳು ಸಿಕ್ಕರೆ ವಶಕ್ಕೆ ಪಡೆಯುವುದಾಗಿಯೂ ಜಿಲ್ಲಾಡಳಿತ ಘೋಷಿಸಿದೆ.

ಈ ಹಿನ್ನೆಲೆ ನಿನ್ನೆ (ಅ.7) ಮತ್ತು ಇಂದು (ಅ.8) ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣ ಬಂದ್ ಮಾಡಲಾಗಿದೆ. ಶೃಂಗೇರಿ ಪಟ್ಟಣ ಬಂದ್ ಮಾಡಿ ಜಿಲ್ಲಾಡಳಿತದ ಆದೇಶ ಹೊರಡಿಸಿದೆ. ಅಂಗಡಿ ಮುಂಗಟ್ಟು ಮುಚ್ಚಲು ಜಿಲ್ಲಾಡಳಿತ ಸೂಚಿಸಿದೆ. ಚಿಕ್ಕಮಗಳೂರು ಜಿಲ್ಲಾಡಳಿತದ ನಡೆಗೆ ವ್ಯಾಪಾರಸ್ಥರು ಗರಂ ಆಗಿದ್ದಾರೆ. ಎರಡು ದಿನದ ನಷ್ಟವನ್ನು ಭರಿಸುವಂತೆ ಜಿಲ್ಲಾಡಳಿತಕ್ಕೆ ಆಗ್ರಹಿಸುತ್ತಿದ್ದಾರೆ. ಜೊತೆಗೆ ಜಿಲ್ಲಾಡಳಿತ ತುಘಲಕ್ ದರ್ಬಾರ್ ನಡೆಸುತ್ತಿದೆ ಅಂತ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಕ್ಟೋಬರ್ 8ರಂದು ಶೃಂಗೇರಿ ಶಾರದಾಂಬಾ ದರ್ಶನಕ್ಕೆ ಭಕ್ತರಿಗೆ ನಿರ್ಬಂಧ ಇಂದು ಶೃಂಗೇರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿ ನೀಡಲಿರುವ ಕಾರಣ, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಶಾರದಾಂಬೆ ದೇಗುಲಕ್ಕೆ ಭಕ್ತರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಬೆಳಗ್ಗೆ 11ರಿಂದ ಸಂಜೆ 4ರವರೆಗೆ ರಾಷ್ಟ್ರಪತಿಗಳ ಕಾರ್ಯಕ್ರಮ ಶೃಂಗೇರಿಯಲ್ಲಿ ನಡೆಯಲಿದೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶೃಂಗೇರಿಗೆ ಆಗಮಿಸುತ್ತಿರುವ ಹಿನ್ನೆಲೆ ನಿನ್ನೆ ಮತ್ತು ಇಂದು ಶೃಂಗೇರಿ ಪಟ್ಟಣ ಬಂದ್ ಮಾಡಿ ಜಿಲ್ಲಾಡಳಿತ ಆದೇಶ ನೀಡಿದೆ. ಕೃಷಿ ಸಂಬಂಧಿತ ಕೆಲಸಗಳಿಗೂ ರೈತರು ಪಟ್ಟಣಕ್ಕೆ ಬಾರದಂತೆ ಸೂಚನೆ ನೀಡಿದೆ. ಅಂಗಡಿ ಮುಂಗಟ್ಟುಗಳನ್ನ ಬಂದ್ ಮಾಡಲು ಜಿಲ್ಲಾಡಳಿತ ಸೂಚಿಸಿದೆ. ಹೀಗಾಗಿ ಜಿಲ್ಲಾಡಳಿತ ವಿರುದ್ಧ ವ್ಯಾಪಾರಸ್ಥರು ಗರಂ ಆಗಿದ್ದಾರೆ. ಕೊರೊನಾ ಹಿನ್ನೆಲೆ ಈಗಾಗಲೇ ವ್ಯಾಪಾರಸ್ಥರು ನಷ್ಟ ಅನುಭವಿಸುತ್ತಿದ್ದಾರೆ. ನವರಾತ್ರಿ ಸಂದರ್ಭದಲ್ಲಿ ಮತ್ತೆ 2 ದಿನ ಅಂಗಡಿ ಮುಂಗಟ್ಟು ಮುಚ್ಚಲು ಜಿಲ್ಲಾಡಳಿತ ತಿಳಿಸಿದೆ. ಜಿಲ್ಲಾಡಳಿತದ ಈ ಆದೇಶಕ್ಕೆ ವ್ಯಾಪಾರಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಎರಡು ದಿನದ ನಷ್ಟವನ್ನು ಭರಿಸುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಅ.8ಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶೃಂಗೇರಿಗೆ ಭೇಟಿ; ಜಿಲ್ಲಾಡಳಿತ ವಿರುದ್ಧ ವ್ಯಾಪಾರಸ್ಥರು ಗರಂ

ಬಿಳಿಗಿರಿ ರಂಗನಾಥಸ್ವಾಮಿ ದೇವಸ್ಥಾನಕ್ಕೆ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿ; ಚಾಮರಾಜನಗರದಲ್ಲಿ ನೂತನ ಆಸ್ಪತ್ರೆ ಉದ್ಘಾಟನೆ

Published On - 11:45 am, Fri, 8 October 21

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್