ಅಯ್ಯಪ್ಪ ಮಾಲೆ ಧರಿಸಿಬಂದ ವಿದ್ಯಾರ್ಥಿಗಳನ್ನ ಕಾಲೇಜಿನಿಂದ ಹೊರಹಾಕಿದ ಪ್ರಿನ್ಸಿಪಾಲ್: ಭುಗಿಲೆದ್ದ ಆಕ್ರೋಶ
ಡಿಸೆಂಬರ್ 2 ರಿಂದ ಪ್ರಾರಂಭವಾಗುವ ಮೂರು ದಿನಗಳ ದತ್ತ ಜಯಂತಿ ಉತ್ಸವಕ್ಕೆ ಚಿಕ್ಕಮಗಳೂರು ಸಜ್ಜಾಗಿದೆ. ಹೀಗಾಗಿ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಇದರ ಮಧ್ಯೆ ಶಬರಿಮಲೆ ಅಯ್ಯಪ್ಪ ಮಾಲೆ ವಿಚಾರವಾಗಿ ವಿವಾದವೊಂದು ಬೆಳಕಿಗೆ ಬಂದಿದೆ. ವಿದ್ಯಾರ್ಥಿಗಳು ಅಯ್ಯಪ್ಪ ಮಾಲೆ ಧರಿಸಿಬಂದಿದ್ದರಿಂದ ಕಾಲೇಜಿನಿಂದ ಹೊರಹಾಕಿರುವ ಘಟನೆ ನಡೆದಿದೆ.

ಚಿಕ್ಕಮಗಳೂರು, (ಡಿಸೆಂಬರ್ 01): ಶಬರಿಮಲೆ ಅಯ್ಯಪ್ಪ ಮಾಲೆ (shabarimale ayyappa mala ) ಧರಿಸಿ ಬಂದಿದ್ದ ವಿದ್ಯಾರ್ಥಿಗಳನ್ನು (Students) ಕಾಲೇಜಿನಿಂದ (College) ಹೊರಹಾಕಿರುವ ಘಟನೆ ಚಿಕ್ಕಮಗಳೂರಿನಲ್ಲಿ (Chikkamagaluru) ನಡೆದಿದೆ. ಚಿಕ್ಕಮಗಳೂರು ನಗರದ ಎಂಇಎಸ್ ಪಿಯು ಕಾಲೇಜಿನಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಮೂವರು ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಪ್ರಿನ್ಸಿಪಾಲ್ ಹೊರಗೆ ಹಾಕಿದ್ದು, ಮಾಲೆ ತೆಗೆದು ಒಳಗೆ ಬನ್ನಿ ಎಂದು ತಾಕೀತು ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಈ ವಿಚಾರ ತಿಳಿಯುತ್ತಿದ್ದಂತೆಯೇ ಹಿಂದೂ ಸಂಘಟನೆ, ಬಿಜೆಪಿ ಕಾರ್ಯಕರ್ತರು ಕಾಲೇಜು ಬಳಿ ಬಂದು ಪ್ರಿನ್ಸಿಪಾಲ್ ನಡುವೆ ವಾಗ್ವಾದ ನಡೆಸಿದ್ದಾರೆ.
ಚಿಕ್ಕಮಗಳೂರು ನಗರದ MES ಪಿಯು ಕಾಲೇಜಿನಲ್ಲಿ ಮೊದಲ ವರ್ಷದ ಪಿಯು ವ್ಯಾಸಂಗ ಮಾಡುತ್ತಿರುವ ಮೂವರು ವಿದ್ಯಾರ್ಥಿಗಳು ಅಯ್ಯಪ್ಪ ಮಾಲೆ ಧರಿಸಿ ತರಗತಿಗೆ ಬಂದಿದ್ದಾರೆ. ಆದ್ರೆ, ಇದಕ್ಕೆ ಪ್ರಿನ್ಸಿಪಾಲ್ ಆಕ್ಷೇಪ ವ್ಯಕ್ತಪಡಿಸಿದ್ದು, ಅಯ್ಯಪ್ಪ ಮಾಲೆ ತೆಗೆದು ಬರುವಂತೆ ಸೂಚನೆ ನೀಡಿ ಹೊರಗೆ ಕಳುಹಸಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆಯೇ ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ಸೇರಿದಂತೆ ನೂರಾರು ಹಿಂದೂ ಸಂಘಟನೆಗಳ ಮುಖಂಡರು, ಕಾಲೇಜು ಬಳಿ ಬಂದು ಕಾಲೇಜ್ ಅಡಳಿತ ಮಂಡಳಿಯ ವಿರುದ್ಧ ಆಕ್ರೋಶ ಹೊರಹಾಕಿದ್ದು, ಅಯ್ಯಪ್ಪ ಮೂಲಾಧಾರಿಗಳನ್ನ ಹೊರ ಕಳಿಸಿದ್ರೆ ನೂರಾರು ವಿದ್ಯಾರ್ಥಿಗಳಿಗೆ ಮಾಲೆ ಹಾಕಿಸುವ ಎಚ್ಚರಿಕೆ ನೀಡಿದರು.
ಇದನ್ನೂ ಓದಿ: Ayyappa Mala Deeksha: ಅಯ್ಯಪ್ಪ ಮಾಲಾಧಾರಣೆಯ ನಿಯಮ ಮತ್ತು 41 ದಿನಗಳ ವ್ರತದ ಮಹತ್ವ
ತರಗತಿಗೆ ಕೂರಲು ಒಪ್ಪಿಗೆ ನೀಡಿದ ಪ್ರಿನ್ಸಿಪಾಲ್
ಕಾಲೇಜು ಬಳಿ ನೂರಾರು ಹಿಂದೂ ಸಂಘಟನೆ ಕಾರ್ಯಕರ್ತರು ಆಗಮಿಸಿ ಆಡಳಿ ಮಂಡಿಳಿ ವಿರುದ್ಧ ಆಕ್ರೋಶ ವ್ಯಕ್ತಡಿಸಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಸ್ಥಳಕ್ಕೆ ಬಸವನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಬಳಿ ವಾದ ವಿವಾದದ ಬಳಿಕ ಅಂತಿಮವಾಗಿ ಅಯ್ಯಪ್ಪ ಮಾಲೆ ಹಾಕಿಕೊಂಡು ಬಂದಿದ್ದ ಮೂವರು ವಿದ್ಯಾರ್ಥಿಗಳನ್ನು ತರಗತಿಗೆ ಕೂಡಲು ಪ್ರಿನ್ಸಿಪಾಲ್ ಅನುಮತಿ ನೀಡಿದ್ದಾರೆ. ಜೊತೆಗೆ ಆಡಳಿತ ಮಂಡಳಿ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಸ್ಪಷ್ಟನೆ ನೀಡಿದ ಪ್ರಿನ್ಸಿಪಾಲ್
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ MES ಪಿಯು ಕಾಲೇಜಿನ ಪ್ರಿನ್ಸಿಪಾಲ್, ನಾವು ಸರ್ಕಾರ ಹಾಗೂ ಕಾಲೇಜು ಆಡಳಿತ ಮಂಡಳಿಯ ಆದೇಶ ಪಾಲಿಸಿದ್ದೇವೆ. ನಮ್ಮಲ್ಲಿ ಸಮವಸ್ತ್ರ ಬಿಟ್ಟು ಬೇರೆ ಯಾವುದೇ ಬಟ್ಟೆ ಧರಿಸುವಂತಿಲ್ಲ. ವಿದ್ಯಾರ್ಥಿಗಳಿಗೆ ನಾವು ತಿಳಿ ಹೇಳಿದ್ದೇವೆ ಅಷ್ಟೇ. ಸದ್ಯಕ್ಕೆ ಮೂವರು ವಿದ್ಯಾರ್ಥಿಗಳನ್ನ ತರಗತಿಗೆ ಕೂರುವಂತೆ ಸೂಚನೆ ನೀಡಿದ್ದು, ಈ ಬಗ್ಗೆ ಆಡಳಿತ ಮಂಡಳಿಯ ಜೊತೆ ಚರ್ಚೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.
ದತ್ತ ಜಯಂತಿ ಸಂದರ್ಭದಲ್ಲೇ ಚಿಕ್ಕಮಗಳೂರಿನಲ್ಲಿ ಉದ್ಭವಿಸಿದ್ದ ಅಯ್ಯಪ್ಪಸ್ವಾಮಿ ಮಾಲೆ ವಿವಾದ ಕೊಂಚ ತಣ್ಣಗಾಗಿದೆ.




