ಕೊಟ್ಟಿಗೆಹಾರ: ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ, ಸುಟ್ಟು ಕರಕಲಾದ ಬಸ್

| Updated By: ಸಾಧು ಶ್ರೀನಾಥ್​

Updated on: Jan 01, 2022 | 8:41 AM

Kottigehara: ಬಸ್ಸಲ್ಲಿ ಬೆಂಕಿ ಕಾಣಿಸಿಕೊಂಡಾಗ ಕೂಡಲೇ ಪೆಟ್ರೋಲ್ ಬಂಕ್ ನೌಕರ ಎಚ್ಚೆತ್ತುಕೊಂಡಿದ್ದಾರೆ. ಪೆಟ್ರೋಲ್ ಬಂಕ್​ನಲ್ಲಿ ಸಾವಿರಾರು ಲೀಟರ್ ಪೆಟ್ರೋಲ್ ಡೀಸೆಲ್ ಇತ್ತು. ಆ ನೌಕರನ ಸಮಯಪ್ರಜ್ಞೆಯಿಂದ ದೊಡ್ಡ ದುರಂತ ತಪ್ಪಿದೆ ಎಂದು ತಿಳಿದುಬಂದಿದೆ.

ಕೊಟ್ಟಿಗೆಹಾರ: ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ, ಸುಟ್ಟು ಕರಕಲಾದ ಬಸ್
Follow us on

ಚಿಕ್ಕಮಗಳೂರು: ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ಬಸ್ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪೆಟ್ರೋಲ್ ಬಂಕ್ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ದುರಂತ ತಪ್ಪಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮದಲ್ಲಿರುವ ಪೆಟ್ರೋಲ್ ಬಂಕ್‌ನಲ್ಲಿ ಈ ಘಟನೆ ನಡೆದಿದೆ. ಬಸ್ಸಲ್ಲಿ ಬೆಂಕಿ ಕಾಣಿಸಿಕೊಂಡಾಗ ಕೂಡಲೇ ಪೆಟ್ರೋಲ್ ಬಂಕ್ ನೌಕರ ಎಚ್ಚೆತ್ತುಕೊಂಡಿದ್ದಾರೆ. ಪೆಟ್ರೋಲ್ ಬಂಕ್​ನಲ್ಲಿ ಸಾವಿರಾರು ಲೀಟರ್ ಪೆಟ್ರೋಲ್ ಡೀಸೆಲ್ ಇತ್ತು. ಆ ನೌಕರನ ಸಮಯಪ್ರಜ್ಞೆಯಿಂದ ದೊಡ್ಡ ದುರಂತ ತಪ್ಪಿದೆ ಎಂದು ತಿಳಿದುಬಂದಿದೆ.

ನೈಟ್ ಕರ್ಫ್ಯೂ ವೇಳೆ ರಸ್ತೆಗಳು ಖಾಲಿ, ಖಾಲಿ: ಪುಂಡರಿಂದ ಬೈಕ್ ವ್ಹೀಲಿಂಗ್ ಹಾವಳಿ:
ನೈಟ್ ಕರ್ಫ್ಯೂ ವೇಳೆ ರಸ್ತೆಗಳು ಖಾಲಿಯಾಗಿರುವ ಹಿನ್ನೆಲೆ ರಸ್ತೆಗಳಲ್ಲಿ ಬೈಕ್ ವ್ಹೀಲಿಂಗ್ ಮಾಡಿ ಪುಂಡರು ಹುಚ್ಚಾಟ ಮೆರೆಯುತ್ತಿದ್ದಾರೆ. ಬೆಂಗಳೂರಿನ ನಾಗರಬಾವಿ ಮೇಲ್ಸೇತುವೆ ಮೇಲೆ ಇಂತಹ ವ್ಹೀಲಿಂಗ್ ಪ್ರಕರಣಗಳು ಕಂಡುಬಂದಿವೆ.

ಇದನ್ನೂ ಓದಿ:
ಮತ್ತೆ ಹೆಚ್ಚಾದ ಕೊವಿಡ್​ 19, ಒಮಿಕ್ರಾನ್​ ಸೋಂಕು; ದೆಹಲಿಯಲ್ಲಿ ನಾಳೆಯಿಂದ ನೈಟ್​ ಕರ್ಫ್ಯೂ ಜಾರಿ

ನೈಟ್​ ಕರ್ಫ್ಯೂ : ಅಸಮಧಾನ ವ್ಯಕ್ತಪಡಿಸಿದ ಪಬ್​ ಮಾಲೀಕರು: ಈ ಕುರಿತು ಮರುಪರಿಶೀಲನೆ ಇಲ್ಲ ಎಂದ ಸಿಎಂ ಬಸವರಾಜ ಬೊಮ್ಮಾಯಿ

Published On - 8:31 am, Sat, 1 January 22