AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ, ಬಜರಂಗದಳ ವಿರುದ್ಧ ಅವಹೇಳನ: ಚಿಕ್ಕಮಗಳೂರಿನ ಪಾಕ್ ಪ್ರೇಮಿಗೆ ನ್ಯಾಯಾಂಗ ಬಂಧನ

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಜರಂಗದಳದ ವಿರುದ್ಧ ಅವಹೇಳನ ಪೋಸ್ಟ್ ಹಾಕಿದ್ದಲ್ಲದೇ ಪಾಕಿಸ್ತಾನ ಪೋಸ್ಟರ್ ಹಾಕಿದ್ದ ಕಾಫಿನಾಡು ಚಿಕ್ಕಮಗಳೂರಿನ ಪಾಕ್​ ಪ್ರೇಮಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.

ಮೋದಿ, ಬಜರಂಗದಳ ವಿರುದ್ಧ ಅವಹೇಳನ: ಚಿಕ್ಕಮಗಳೂರಿನ ಪಾಕ್ ಪ್ರೇಮಿಗೆ ನ್ಯಾಯಾಂಗ ಬಂಧನ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ರಮೇಶ್ ಬಿ. ಜವಳಗೇರಾ|

Updated on:May 24, 2024 | 8:09 PM

Share

ಚಿಕ್ಕಮಗಳೂರು, (ಮೇ 24): ಫೇಸ್​ಬುಕ್​ನಲ್ಲಿ ಪಾಕಿಸ್ತಾನ ಪರ ಪೋಸ್ಟ್ ಮಾಡಿದ್ದ ಚಿಕ್ಕಮಗಳೂರಿನ ಕೊಪ್ಪದ ಅಸ್ಗರ್ ಎಂಬಾತನಿಗೆ ಕೋರ್ಟ್​ ನ್ಯಾಯಾಂಗ ಬಂಧನ ವಿಧಿಸಿದೆ. ಅಸ್ಗರ್ ಕೊಪ್ಪಗೆ ಜೂನ್​ 6ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಎನ್.ಆರ್.ಪುರ ನ್ಯಾಯಾಲಯ ಆದೇಶ ಹೊರಡಿಸಿದೆ. ಪ್ರಧಾನಿ ನರೇಂದ್ರ ಮೋದಿ, ಬಜರಂಗದಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟ್ ಹಾಕಿದ್ದ. ಅಲ್ಲದೇ ಪಾಕಿಸ್ತಾನ ಪರ ಪೋಸ್ಟರ್ ಹಾಕಿದ್ದ. ಈ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆ ಮುಖಂಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಪೊಲೀಸರು ಸುಮೊಟೊ ಕೇಸ್ ದಾಖಲಿಸಿಕೊಂಡು ಅಸ್ಗರ್​ನನ್ನು ಬಂಧಿಸಿದ್ದರು.

ಫೇಸ್ ಬುಕ್ ನಲ್ಲಿ ಪೋಸ್ಟ್: ಪಾಕಿಸ್ತಾನ ಜಿಂದಾಬಾದ್ , ಮೋದಿ , ಕೊಪ್ಪ ಭಜರಂಗದಳದ ವಿರುದ್ಧ ಸಹಾ ಅವಹೇಳನಕಾರಿ ಆಗಿ ಆಸ್ಗರ್ ಕೊಪ್ಪ ಎಂಬ ಫೇಸ್ಬುಕ್ ಅಕೌಂಟ್ನಲ್ಲಿ ಪೋಸ್ಟ್ ಹಾಕಿದ್ದು, ಈ ಸಂಬಂಧ ಭಾರೀ ವಿರೋಧ ವ್ಯಕ್ತವಾಗಿತ್ತು. ಬಳಿಕ ಆಸ್ಗರ್​ ಫೇಸ್​ಬುಕ್​ ಆಕೌಂಟನ್ನೇ ಡಿಲೀಟ್ ಮಾಡಿದ್ದ. ಆದರೂ ಸಹ ಆಸ್ಗರ್​ ವಿರುದ್ಧ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಪಡಿಸಿದ್ದವು. ಬೆನ್ನಲ್ಲೇ ಆರೋಪಿ ಆಸ್ಗರ್​ ವಿರುದ್ಧ ಕೊಪ್ಪ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಸಿಕೊಂಡು ಬಂಧಿಸಿ ಇಂದು (ಮೇ 24) ಎನ್​ಆರ್​ ಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಇದನ್ನೂ ಓದಿ: ಚಿಕ್ಕಮಗಳೂರು: ಫೇಸ್​ಬುಕ್​ನಲ್ಲಿ ಪಾಕಿಸ್ತಾನ ಪರ ಪೋಸ್ಟ್, ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಪೊಲೀಸರು

ವಿಚಾರಣೆ ನಡೆಸಿದ ಎನ್ ಆರ್ ಪುರ ಕೋರ್ಟ್ ಆರೋಪಿಗೆ ಜೂನ್ 6ರವರೆಗೆ ನ್ಯಾಯಾಂಗ ವಿಧಿಸಿ ಆದೇಶ ನೀಡಿದೆ. ಇನ್ನು ಕೊಪ್ಪ ಭಜರಂಗದಳದ ವಿರುದ್ಧ ಪೋಸ್ಟ್ ಹಾಕಿದ್ದ ಆಸ್ಗರ್ ವಿರುದ್ಧ ಜಿಲ್ಲೆಯಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಆರೋಪಿಯನ್ನು ಸಾರ್ವಜನಿಕರಿಗೆ ಒಪ್ಪಿಸುವಂತೆ ಒತ್ತಾಯ ಸಹಾ ಕೇಳಿ ಬಂದಿತ್ತು.

Published On - 7:14 pm, Fri, 24 May 24

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್