AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂಕ್ತ ಪರಿಹಾರಕ್ಕಾಗಿ ಆಗ್ರಹಿಸಿ ಶ್ರೀಗಂಧ ಬೆಳೆಗಾರರಿಂದ ಅರೆಬೆತ್ತಲೆ ಪ್ರತಿಭಟನೆ; 27ನೇ ದಿನಕ್ಕೆ ಕಾಲಿಟ್ಟ ಹೋರಾಟ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ನಡೆಗೆ ರೈತರು ಈ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ 27 ದಿನಗಳಿಂದ 22 ರೈತ ಕುಟುಂಬ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದೆ. ಪೋಷಕರಿಗೆ ಬೆಂಬಲ ಸೂಚಿಸಿ ಮಕ್ಕಳು ಕೂಡ ಪ್ರತಿಭಟನೆಗೆ ಸಾಥ್ ನೀಡಿದ್ದಾರೆ.

ಸೂಕ್ತ ಪರಿಹಾರಕ್ಕಾಗಿ ಆಗ್ರಹಿಸಿ ಶ್ರೀಗಂಧ ಬೆಳೆಗಾರರಿಂದ ಅರೆಬೆತ್ತಲೆ ಪ್ರತಿಭಟನೆ; 27ನೇ ದಿನಕ್ಕೆ ಕಾಲಿಟ್ಟ ಹೋರಾಟ
ಅರೆಬೆತ್ತಲೆ ಪ್ರತಿಭಟನೆ
TV9 Web
| Edited By: |

Updated on:Mar 26, 2022 | 8:45 AM

Share

ಚಿಕ್ಕಮಗಳೂರು: ಸೂಕ್ತ ಪರಿಹಾರಕ್ಕಾಗಿ ಆಗ್ರಹಿಸಿ ಶ್ರೀಗಂಧ ಬೆಳೆಗಾರರು (sandalwood growers) ಸತತ 27 ದಿನಗಳಿಂದ ಹೋರಾಟ ನಡೆಸುತ್ತಿದ್ದಾರೆ. ಅದರಂತೆ ಇಂದು (ಮಾರ್ಚ್​ 26) ಕೂಡ ಅರೆಬೆತ್ತಲೆ ಪ್ರತಿಭಟನೆ (Protest) ನಡೆಸುತ್ತಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆಯ ಹಳಿಯೂರು ಗ್ರಾಮದಲ್ಲಿ ಶರ್ಟ್ ಕಳಚಿ ಪುರುಷರು, ಮಕ್ಕಳು ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ಹೈಕೋರ್ಟ್ (High Court) ನಿಗದಿಪಡಿಸಿರುವ ಪರಿಹಾರವನ್ನು ನೀಡುವಂತೆ ರೈತರು ಪಟ್ಟು ಹಿಡಿದಿದ್ದಾರೆ. ಆದರೆ ಕೋರ್ಟ್ ಸೂಚಿಸಿರುವ ಪರಿಹಾರವನ್ನು ನೀಡಲು ಅಧಿಕಾರಿಗಳು ಮಾತ್ರ ಮೀನಾಮೇಷ ಎಣಿಸುತ್ತಿದ್ದಾರೆ. ಇದರಿಂದ ಬೇಸತ್ತ ಶ್ರೀಗಂಧ ಬೆಳೆಗಾರರು ಪ್ರತಿಭಟನೆಗೆ ಮುಂದಾಗಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ನಡೆಗೆ ರೈತರು ಈ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ 27 ದಿನಗಳಿಂದ 22 ರೈತ ಕುಟುಂಬ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದೆ. ಪೋಷಕರಿಗೆ ಬೆಂಬಲ ಸೂಚಿಸಿ ಮಕ್ಕಳು ಕೂಡ ಪ್ರತಿಭಟನೆಗೆ ಸಾಥ್ ನೀಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ನಡೆ ಬಗ್ಗೆ ಬೆಳೆಗಾರರು ಆಕ್ರೋಶ ವ್ಯಕ್ತಪಡಿಸಿದರು. ಕೋರ್ಟ್ ಸೂಚಿಸಿರುವ ಪರಿಹಾರ ನೀಡಲು ಅಧಿಕಾರಿಗಳು ತಡ ಮಾಡುತ್ತಿದ್ದಾರೆ ಎಂದು ರೈತರು ದೂರಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ನಡೆಯ ಬಗ್ಗೆ ಅವರು ಆಕ್ರೋಶ ವ್ಯಕ್ತಪಡಿಸಿದರು. ಕಳೆದ 27 ದಿನಗಳಿಂದ 22 ರೈತರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಪೋಷಕರಿಗೆ ಬೆಂಬಲ ಸೂಚಿಸಿ ಸ್ಥಳಕ್ಕೆ ಬಂದಿದ್ದ ಮಕ್ಕಳ ಪೈಕಿ ಕೆಲವರು ಇಂದು ಧರಣಿಯ ಸ್ಥಳದಲ್ಲೇ ಹುಟ್ಟುಹಬ್ಬ ಆಚರಿಸಿಕೊಂಡು ಗಮನ ಸೆಳೆದರು.

ಇದನ್ನೂ ಓದಿ:

ಬೆಂಗಳೂರಿನಲ್ಲಿ ಶಿಕ್ಷಕಿ ಬೈದಿದ್ದಕ್ಕೆ ನೊಂದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು, ಶಾಲೆ ಮುಂದೆ ಪೋಷಕರ ಪ್ರತಿಭಟನೆ

ಜಿಲ್ಲಾಡಳಿತ ಮೂಲಸೌಕರ್ಯ ನೀಡದ ಆರೋಪ; ಚರಂಡಿಯಲ್ಲಿದ್ದ ಕಸ ಸುರಿದುಕೊಂಡು ಪ್ರತಿಭಟನೆಗೆ ಯತ್ನಿಸಿದ ಸಫಾಯಿ ಕರ್ಮಚಾರಿ

Published On - 8:42 am, Sat, 26 March 22

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ