6 ನಕ್ಸಲರ ಶರಣಾಗತಿ ಬೆನ್ನಲ್ಲೇ ನಕ್ಸಲರ ಪಟ್ಟಿಯಲ್ಲಿ ಉಳಿದ ಏಕೈಕ ನಕ್ಸಲ್

ಚಿಕ್ಕಮಗಳೂರಿನಲ್ಲಿ ನಡೆದ ಘಟನೆಯಲ್ಲಿ ಆರು ನಕ್ಸಲರು ಮುಖ್ಯಮಂತ್ರಿಗಳ ಎದುರು ಶರಣಾಗಿದ್ದಾರೆ. ಇದು ಕರ್ನಾಟಕದ ಇತಿಹಾಸದಲ್ಲಿ ಮೊದಲ ಬಾರಿಗೆ. ಒಬ್ಬ ನಕ್ಸಲ್​​ ರವೀಂದ್ರ ಮಾತ್ರ ನಕ್ಸಲ್​ ಪಟ್ಟಿಯಲ್ಲಿ ಉಳಿದುಕೊಂಡಿದ್ದಾನೆ. ಇದುವರೆಗೂ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಬಿಜೆಪಿ ಯುವ ಮೋರ್ಚಾ ನಕ್ಸಲರ ಶರಣಾಗತಿಗೆ ವಿರೋಧ ವ್ಯಕ್ತಪಡಿಸಿದೆ.

6 ನಕ್ಸಲರ ಶರಣಾಗತಿ ಬೆನ್ನಲ್ಲೇ ನಕ್ಸಲರ ಪಟ್ಟಿಯಲ್ಲಿ ಉಳಿದ ಏಕೈಕ ನಕ್ಸಲ್
ಕರ್ನಾಟಕದ ನಕ್ಸಲರ ಪಟ್ಟಿಯಲ್ಲಿ ಉಳಿದ ಏಕೈಕ ನಕ್ಸಲ್: ಶರಣಾಗತಿ ಕಮಿಟಿ ಸಂಪರ್ಕಕ್ಕೂ ಸಿಗದ ರವೀಂದ್ರ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on:Jan 09, 2025 | 3:01 PM

ಚಿಕ್ಕಮಗಳೂರು, ಜನವರಿ 09: ನಿನ್ನೆ ಸಿಎಂ ಸಿದ್ದರಾಮಯ್ಯ (Siddaramaiah) ಸೂಚನೆಯಂತೆ ಬೆಂಗಳೂರಿನ ಗೃಹ ಕಚೇರಿ ಕೃಷ್ಣದಲ್ಲಿ 6 ಜನ ನಕ್ಸಲರು ಶರಣಾಗಿದ್ದಾರೆ. ಆ ಮೂಲಕ ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ ಸಿಎಂ ಎದುರು ಕರ್ನಾಟಕದ ನಾಲ್ವರು, ಹೊರ ರಾಜ್ಯದ ಇಬ್ಬರು ನಕ್ಸಲರು ಶರಣಾಗಿದ್ದಾರೆ. ಆದರೆ ನಕ್ಸಲರ ಪಟ್ಟಿಯಲ್ಲಿ ಏಕೈಕ ನಕ್ಸಲ್ ರವೀಂದ್ರ ಮಾತ್ರ ಉಳಿದುಕೊಂಡಿದ್ದಾರೆ. ಇದುವರೆಗೂ ಯಾರ ಸಂಪರ್ಕಕ್ಕೂ ಬಂದಿಲ್ಲ.

8 ನಕ್ಸಲರ ಪೈಕಿ ಇತ್ತೀಚೆಗೆ ವಿಕ್ರಂಗೌಡ ಎನ್​ಕೌಂಟರ್ ಮಾಡಲಾಗಿದೆ. 7 ಜನರ ಪೈಕಿ ನಿನ್ನೆ 6 ನಕ್ಸಲರ ಶರಣಾಗತಿಯಾಗಿದ್ದಾರೆ. ಆದರೆ ಏಕೈಕ ನಕ್ಸಲ್ ರವೀಂದ್ರ ಮಾತ್ರ ಶರಣಾಗಿಲ್ಲ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದ ರವೀಂದ್ರ ವಿರುದ್ಧ 14 ಕೇಸ್​​ಗಳಿವೆ. ನಕ್ಸಲ್ ಶರಣಾಗತಿ ಕಮಿಟಿ ಸಂಪರ್ಕಕ್ಕೂ ಸಿಕ್ಕಿಲ್ಲ. ಕಳೆದ 18 ವರ್ಷಗಳಿಂದ ಭೂಗತವಾಗಿರುವ ನಕ್ಸಲ್​​ ರವೀಂದ್ರ, ಯಾರ ಸಂಪರ್ಕಕ್ಕೆ ಸಿಕ್ಕಿಲ್ಲ. ಆ ಮೂಲಕ ರಾಜ್ಯದ ನಕ್ಸಲರ ಪಟ್ಟಿಯಲ್ಲಿ ಉಳಿದುಕೊಂಡಿದ್ದಾರೆ.

ಇದನ್ನೂ ಓದಿ: ನಕ್ಸಲರು ಶರಣಾದ ನಂತರ ಕಾನೂನು ಪ್ರಕ್ರಿಯೆಗಳು ಏನೇನಿರುತ್ತವೆ? ಇಲ್ಲಿದೆ ಮಾಹಿತಿ

ಶರಣಾಗತಿಯಾದ 6 ನಕ್ಸಲರಾದ ಮುಂಡಗಾರು ಲತಾ, ಜಯಣ್ಣ, ಸುಂದರಿ, ವನಜಾಕ್ಷಿ, ಜೀಶಾ, ವಸಂತ ಅಲಿಯಾಸ್ ರಮೇಶ್​​ನಿಂದ ಕೂಡ ಕೊಪ್ಪ ಡಿವೈಎಸ್​ಪಿ ಬಾಲಾಜಿ ಸಿಂಗ್​ರಿಂದ ಮಾಹಿತಿ ಸಂಗ್ರಹ ಮಾಡಲಾಗಿದೆ. ಎಎನ್​ಎಫ್​, ಗುಪ್ತಚರ ಇಲಾಖೆಯಿಂದಲೂ ಮಾಹಿತಿ ಸಂಗ್ರಹಿಸಲಾಗಿದೆ.

ಇನ್ನು ಶರಣಾಗತಿ ವೇಳೆ ನಕ್ಸಲರು ಶಸ್ತ್ರಾಸ್ತ್ರಗಳನ್ನು ಸರೆಂಡರ್ ಮಾಡಿದ್ದಾರೆ. ನಕ್ಸಲರ ಶಸ್ತ್ರಾಸ್ತ್ರಗಳ ಬಗ್ಗೆ ಪೊಲೀಸರು ಮಾಹಿತಿ ಕಲೆ‌ ಹಾಕುತ್ತಿದ್ದಾರೆ. ಶಸ್ತ್ರಾಸ್ತ್ರ ಸಮೇತ ಚಿಕ್ಕಮಗಳೂರು ಕಾಡಿನಲ್ಲಿ ನಕ್ಸಲರು ಓಡಾಡುತ್ತಿದ್ದರು. ಶಸ್ತ್ರಾಸ್ತ್ರ ಇರುವ ಬಗ್ಗೆ 4 ತಿಂಗಳ ಹಿಂದೆ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ನಕ್ಸಲರ ತನಿಖೆಗೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಡಿವೈಎಸ್​ಪಿ ಬಾಲಾಜಿ ಸಿಂಗ್ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದ್ದು, ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಬಾಲಾಜಿ ಸಿಂಗ್ ತಂಡ ತೆರಳಿದೆ.

ಬಿಜೆಪಿ ಯುವ ಮೋರ್ಚಾದಿಂದ ವಿರೋಧ

ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ 6 ನಕ್ಸಲರ ಶರಣಾಗತಿಗೆ ಚಿಕ್ಕಮಗಳೂರಿನ ಬಿಜೆಪಿ ಯುವ ಮೋರ್ಚಾದಿಂದ ವಿರೋಧ ವ್ಯಕ್ತಪಡಿಸಿದೆ. ನಮ್ಮ ಮೇಲು ಕೇಸ್​ಗಳಿವೆ, ವಾಪಸ್ ಪಡೆದು ಪ್ಯಾಕೇಜ್ ನೀಡಿ. ಸಂಪೂರ್ಣ ಕೇಸ್ ಕ್ಲಿಯರ್ ಮಾಡಿ ಭೂಮಿ ನೀಡಿ ಎಂದು ಆಕ್ರೋಶ ಹೊರಹಾಕಲಾಗಿದೆ. ಈ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಫೇಸ್​ಬುಕ್ ಅಭಿಯಾನ ಮಾಡಲಾಗುತ್ತಿದೆ. ನಕ್ಸಲರ ಶರಣಾಗತಿ ಸಂಬಂಧ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:56 pm, Thu, 9 January 25

ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್