AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkamagaluru: ಮಳೆನಾಡಿನಲ್ಲಿ ಕೈಕೊಟ್ಟ ಮಳೆ, ಶಕ್ತಿ ದೇವತೆಯ ಸನ್ನಿಧಿಯಲ್ಲಿ ವರುಣನಿಗಾಗಿ ಪೂಜೆ

ಮುಂಗಾರು ಮುಗಿದು ಹಿಂಗಾರು ಆರಂಭವಾದ್ರು ಮಳೆ ಮಾತ್ರ ಈ ವರ್ಷ ಮರೀಚಿಕೆಯಾಗಿದೆ, ಕಾಫಿನಾಡಿನ ಮಲೆನಾಡು ಭಾಗ ಸೇರಿದಂತೆ ಜಿಲ್ಲೆಯಾದ್ಯಂತ ಅಬ್ಬರಿಸಿ ಸುರಿಯಬೇಕಿದ್ದ ವರುಣ 30 ವರ್ಷ ಗಳ ಬಳಿಕ ಕೈಕೊಟ್ಟಿದೆ, ರಾಜ್ಯಾದ್ಯಂತ ಮಳೆಗಾಗಿ ಶಕ್ತಿ ದೇವತೆ ಹೊರನಾಡು ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ದಿನನಿತ್ಯ ವಿಶೇಷ ಪೂಜೆ ನಡೆಯುತ್ತಿದೆ.

Chikkamagaluru: ಮಳೆನಾಡಿನಲ್ಲಿ ಕೈಕೊಟ್ಟ ಮಳೆ, ಶಕ್ತಿ ದೇವತೆಯ ಸನ್ನಿಧಿಯಲ್ಲಿ ವರುಣನಿಗಾಗಿ ಪೂಜೆ
ಮಳೆಗಾಗಿ ಹೊರನಾಡು ಅನ್ನಪೂರ್ಣೆಶ್ವರಿ ಮೊರೆ ಹೋದ ಜಿಲ್ಲೆಯ ಜನ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jun 23, 2023 | 6:23 PM

Share

ಚಿಕ್ಕಮಗಳೂರು: ಮಳೆನಾಡು ಎಂದೇ ಖ್ಯಾತಿ ಪಡೆದಿರುವ ಚಿಕ್ಕಮಗಳೂರು(Chikkamagaluru) ಜಿಲ್ಲೆಯಲ್ಲಿ ಈ ವರ್ಷ ವರುಣ ದೈವ ಕಣ್ಣ ಮುಚ್ಚಾಲೆ ಆಟವಾಡ ತೊಡಗಿದ್ದಾನೆ. 30 ವರ್ಷದ ಬಳಿಕ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ‌ ಕೈಕೊಟ್ಟಿದ್ದು, ಮಳೆ ಇಲ್ಲದೆ‌ ಕಾಫಿನಾಡಿನ ಜನತೆ ಕಂಗೆಟ್ಟು ಹೋಗಿದ್ದಾರೆ. ಪ್ರತಿ ವರ್ಷ ಜಿಲ್ಲೆಯಲ್ಲಿ, ಜೂನ್ ವರೆಗೂ ಆಗುತ್ತಿದ್ದ ವಾಡಿಕೆ ಮಳೆಯಲ್ಲಿ 30% ರಷ್ಟು ಮಳೆ‌ ಮಾತ್ರ ಆಗಿದ್ದು, ಈ ಭಾಗದ ರೈತರಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನಲೆ ಮಳೆನಾಡಿನಲ್ಲಿ ಮಳೆಗಾಗಿ ಶಕ್ತಿ ದೇವತೆ ಸನ್ನಿಧಿಯಾದ ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ವಿಶೇಷ ಪೂಜೆ ನಡೆಯುತ್ತಿದೆ.

ಜುಲೈ ಮೊದಲ ವಾರದಿಂದ ವರುಣನ ಕೃಪೆಗಾಗಿ ಹೋಮ ಹವನ

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪ್ರತಿ ವರ್ಷ ಸುರಿಯಬೇಕಿದ್ದ ವಾಡಿಕೆ ಮಳೆಯ ಪ್ರಮಾಣದಲ್ಲಿ ಈ ವರ್ಷ ಜೂನ್ ತಿಂಗಳ ಕೊನೆಯಾದ್ರು, ಶೇಕಡ 30% ರಷ್ಟು ಮಳೆಯಾಗಿದೆ. ರಾಜ್ಯಾದ್ಯಂತ ವರುಣ ಮುನಿಸಿಕೊಂಡಿದ್ದು, ಕೃಪೆ ತೋರುತ್ತಿಲ್ಲ. ಇದರಿಂದ ಹೊರನಾಡು ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ಮಳೆಗಾಗಿ ಪ್ರತಿ ನಿತ್ಯ ವಿಶೇಷ ಪೂಜೆಯನ್ನ ಮಾಡುತ್ತಿದ್ದು, ಜುಲೈ ಮೊದಲ ವಾರ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ಮಳೆಗಾಗಿ ವಿಶೇಷ ಹೋಮ ಹವನ ನಡೆಯಲಿದೆ.

ಇದನ್ನೂ ಓದಿ:ಚಿಕ್ಕಮಗಳೂರು: 15 ದಿನಗಳಿಂದ ಚಾರ್ಮಾಡಿ ಘಾಟ್​ನಲ್ಲಿ ಕಾಡಾನೆ ಹಾವಳಿ; ಅನಾಹುತವಾಗುವ ಮೊದಲೇ ಆನೆ ಸ್ಥಳಾಂತರಕ್ಕೆ ಜನರ ಮನವಿ

ರಾಜ್ಯಾದ್ಯಂತ ಮುನಿಸಿಕೊಂಡ ವರುಣ

ಇನ್ನು ರಾಜ್ಯಾದ್ಯಂತ ವರುಣ ಮುನಿಸಿಕೊಂಡಿದ್ದು, ಮಳೆಗಾಗಿ ರಾಜ್ಯದ ಜನತೆ ಕಾದು ಕುಳಿತಿದ್ದು ದೇವರ ಮೊರೆ ಹೋಗಿದ್ದಾರೆ .ರಾಜ್ಯದಲ್ಲಿ ಜಲಕ್ಷಾಮದ ಆತಂಕ ಎದುರಾಗಿದ್ದು . ಮಳೆಗಾಗಿ ಶಕ್ತಿ‌ ದೇವತೆಗಳ ಸನ್ನಿಧಿಯಲ್ಲಿ ನಡೆಯುತ್ತಿರುವ ವಿಶೇಷ ಪೂಜೆ ,ಹೋಮಗಳು ವರುಣ ದೈವದ ಕೋಪವನ್ನ ತಣಿಸಿ ಮಳೆ ಸುರಿಸುವಂತೆ ಮಾಡುತ್ತಾ ಕಾದುನೋಡಬೇಕಿದೆ…

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ .

Follow Us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!