Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಚಿಕ್ಕಮಗಳೂರು ಜಿಲ್ಲಾದ್ಯಂತ ಕಳೆದೊಂದು ವಾರದಿಂದ ಧಾರಾಕಾರವಾಗಿ ಮಳೆ ಸುರಿದಿದ್ದು, ಇದೀಗ ಕೊಂಚ ಬಿಡುವು ಕೊಟ್ಟಿದೆ. ಆದರೆ ಮಳೆಯಿಂದ ಉಂಟಾಗುತ್ತಿರುವ ಅವಾಂತರ ಮಾತ್ರ ಕಡಿಮೆಯಾಗಿಲ್ಲ. ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ‌ಸುರಿದ ಮಳೆಯಿಂದ ಗುಡ್ಡ ಕುಸಿತ ಸಂಭವಿಸಿದೆ. ಹೀಗಾಗಿ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ.

ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಮುಳ್ಳಯ್ಯನಗಿರಿ ಬೆಟ್ಟ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ವಿವೇಕ ಬಿರಾದಾರ

Updated on: Jul 23, 2024 | 9:30 AM

ಚಿಕ್ಕಮಗಳೂರು, ಜುಲೈ 23: ಚಿಕ್ಕಮಗಳೂರಿನ (Chikkamagaluru) ಮುಳ್ಳಯ್ಯನಗಿರಿಗೆ (Mullayanagiri) ಪ್ರವಾಸ ಕೈಗೊಳ್ಳಬೇಕು ಎಂದು ಪ್ಲ್ಯಾನ್​ ಹಾಕಿಕೊಂಡವರಿಗೆ ಬ್ಯಾಡ್​ ನ್ಯೂಸ್​. ನಿರಂತರವಾಗಿ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ‌ಸುರಿದ ಮಳೆಯಿಂದ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ಭೂ ಕುಸಿತ, ಗುಡ್ಡ ಕುಸಿತವಾಗಿದ್ದು ಒಂದು ವಾರಗಳ ಕಾಲ‌ ಪ್ರವಾಸಿಗರಿಗೆ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಹೊನ್ನಮ್ಮನ ಹಳ್ಳ ಪ್ರವೇಶಕ್ಕೆ ಅವಕಾಶವಿಲ್ಲ. ಜುಲೈ 31ರ ವರೆಗೂ ಮುಳ್ಳಯ್ಯನಗಿರಿ ಭೇಟಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಸ್ಥಳೀಯ ವಾಹನಗಳಿಗೆ ಮಾತ್ರ ಸಂಚರಿಸಲು ಅವಕಾಶ ನೀಡಲಾಗಿದೆ.

ಪ್ರವಾಸಿಗರು ತೆರಳದಂತೆ ಕೈಮರ ಚೆಕ್ಪೋಸ್ಟ್ ಬಳಿ ಗೇಟ್ ಬಂದ್ ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿ 169ರ ಮಂಗಳೂರು ಶೃಂಗೇರಿ ಮಾರ್ಗ ಮಧ್ಯೆ ನೆಮ್ಮಾರು ಗ್ರಾಮದ ಬಳಿ ಹತ್ತಾರು ಕಡೆ ಭೂ ಕುಸಿತ, ಗುಡ್ಡ ಕುಸಿತವಾಗಿದ್ದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಭೆ ನಡೆಸಲಾಗಿದ್ದು 12,000 ಟನ್ ತೂಕದ ಲಾರಿ ಸೇರಿದಂತೆ ವಾಹನಗಳಿಗೆ ಸಂಚಾರ ನಿಷೇಧ ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಕೊಂಚ ಮಳೆ ವಿರಾಮ ನೀಡಿದ್ದು ಒಂದು ವಾರಗಳ‌ ಕಾಲ ಸುರಿದ ಮಳೆ‌ ವಾಡಿಕೆ‌ ಪ್ರಮಾಣದ 25% ಅಷ್ಟು ಹೆಚ್ಚಿದ್ದು ಗಾಳಿ ಸಹಿತ ಸುರಿದ ಮಳೆ ಒಂದೇ ವಾರಕ್ಕೆ ನೂರು ಕೋಟಿ ನಷ್ಟ ಮಾಡಿದೆ ರಾಜ್ಯದ ಅತ್ಯಂತ ಎತ್ತರದ ಶಿಖರ ಮುಳ್ಳಯ್ಯನಗಿರಿ ಪ್ರವಾಸಿಗರ ಅಚ್ಚುಮೆಚ್ಚಿನ ತಾಣ. ಪ್ರತಿ ದಿನ ಇಲ್ಲಿಗೆ ನೂರಾರು ಸಂಖ್ಯೆಯಲ್ಲಿ ರಾಜ್ಯ, ದೇಶದ ವಿವಿಧ ಭಾಗಗಳಿಂದ ಜನರು ಆಗಮಿಸುತ್ತಾರೆ. ವೀಕೆಂಡ್​, ರಜಾ ದಿನ ಬಂತೆಂದರೆ ಇಲ್ಲಿ ಜನ ಪ್ರವಾಹವೇ ಕಂಡು ಬರುತ್ತದೆ. ಆದರೆ ಇದೀಗ, ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಧಾರಾಕಾರ ಮಳೆಗೆ ಗುಡ್ಡ ಕುಸಿದು, ಬೃಹತ್​ ಗಾತ್ರದ ಕಲ್ಲು, ಮಣ್ಣು, ಮರ ರಸ್ತೆಗೆ ಬಿಳುತ್ತಿವೆ. ಹೀಗಾಗಿ ಮುಳ್ಳಯ್ಯನಗಿರಿಗೆ ಪ್ರವೇಶ ನಿರ್ಬಂಧಿಸಿದ್ದು, ಪ್ರವಾಸಿಗರಲ್ಲಿ ನಿರಾಶೆ ಮೂಡಿದೆ.

ಇದನ್ನೂ ಓದಿ: ಶೃಂಗೇರಿ ಶಾರದಾಂಬೆ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ, ಯಾರು ಯಾವ ಡ್ರೆಸ್ ಹಾಕ್ಬೇಕು ಗೊತ್ತಾ?

100 ಕೋಟಿ ನಷ್ಟ

ಒಂದು ವಾರ ಸುರಿದ ಮಳೆಯಿಂದ ಸರ್ಕಾರಕ್ಕೆ 100 ಕೋಟಿ ರೂ. ನಷ್ಟವಾಗಿದೆ. ಕಳೆದ ಒಂದು ವಾರದಿಂದ ಚಿಕ್ಕಮಗಳೂರು, ಕೊಪ್ಪ, ಶೃಂಗೇರಿ, ಕಳಸ‌, ಮೂಡಿಗೆರೆ, ಎನ್​ಆರ್​ ಪುರ ತಾಲೂಕು ಸೇರಿದಂತೆ ಜಿಲ್ಲೆಯಾದ್ಯಂತ ವರುಣ ಅಬ್ಬರಿಸಿದ್ದಾನೆ. ಒಂದು ಕಡೆ ವರುಣಾರ್ಭಟಕ್ಕೆ ಜನ ಆತಂಕಗೊಂಡರೆ ಮತ್ತೊಂದು ಕಡೆ ಆರ್ಭಟಿಸುತ್ತಿದ್ದ ಹೇಮಾವತಿ, ತುಂಗಾ, ಭದ್ರಾ ನದಿಗಳು ನೆರೆ ಆತಂಕ ಸೃಷ್ಟಿ ಮಾಡಿತ್ತು.

ಮಳೆ ಜೊತೆ ಬಿಸುತ್ತಿದ್ದ ಬಿರುಗಾಳಿ ಮಲೆನಾಡಿಗರ ಬದುಕನ್ನ ಅಕ್ಷರಶಃ ಕತ್ತಲೆಗೆ ದೂಡಿದೆ, ಲೋಕೋಪಯೋಗಿ ಇಲಾಖೆಗೆ 58 ಕೋಟಿ, PRED ಇಲಾಖೆಗೆ 41 ಕೋಟಿ ಜಸ್ಟ್ ಒಂದು ವಾರದಲ್ಲಿ ಮಳೆಯಿಂದ ನಷ್ಟವಾಗಿದೆ. ಜಿಲ್ಲೆಯಾದ್ಯಂತ 192 ಮನೆಗಳಿಗೆ ಹಾನಿಯಾಗಿದ್ರೆ, 41 ಸೇತುವೆ, 1849 ವಿದ್ಯುತ್ ಕಂಬಗಳು ನಾಶವಾಗಿದೆ. ಸುರಿದ ಮಳೆಗೆ 8.5 ಕಿಮೀ ಅಷ್ಟು ರಾಜ್ಯ ಹೆದ್ದಾರಿ ರಸ್ತೆಗೆ ಹಾನಿಯಾಗಿದ್ದರೆ ಚಾರ್ಮಾಡಿ, ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ಭೂ ಕುಸಿತ, ಗುಡ್ಡ ಕುಸಿತವಾಗಿದೆ. ಮನೆ ಕಳೆದುಕೊಂಡ 77 ಜನರಿಗೆ ಜಿಲ್ಲಾಡಳಿತ ಪರಿಹಾರ ನೀಡಿದ್ದು, ಕಾಳಜಿ ಕೇಂದ್ರಗಳನ್ನ ತೆರೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಹಿಮಾನಿ ಶವವನ್ನು ಸೂಟ್‌ಕೇಸ್‌ನಲ್ಲಿ ಎಳೆದೊಯ್ಯುತ್ತಿರುವ ವಿಡಿಯೋ ಪತ್ತೆ
ಹಿಮಾನಿ ಶವವನ್ನು ಸೂಟ್‌ಕೇಸ್‌ನಲ್ಲಿ ಎಳೆದೊಯ್ಯುತ್ತಿರುವ ವಿಡಿಯೋ ಪತ್ತೆ
ಮಹಿಳೆಯರ ಸ್ಫೂರ್ತಿದಾಯಕ ಪಯಣ ಹಂಚಿಕೊಳ್ಳಲು ಪ್ರಧಾನಿ ಮೋದಿ ಅವಕಾಶ
ಮಹಿಳೆಯರ ಸ್ಫೂರ್ತಿದಾಯಕ ಪಯಣ ಹಂಚಿಕೊಳ್ಳಲು ಪ್ರಧಾನಿ ಮೋದಿ ಅವಕಾಶ
ನಟ್ಟು ಬೋಲ್ಟು ಹೇಳಿಕೆ: ಡಿಕೆಶಿ ಬಳಸಿದ ಭಾಷೆ ಸರಿ ಇಲ್ಲ ಎಂದ ನಾಗಾಭರಣ
ನಟ್ಟು ಬೋಲ್ಟು ಹೇಳಿಕೆ: ಡಿಕೆಶಿ ಬಳಸಿದ ಭಾಷೆ ಸರಿ ಇಲ್ಲ ಎಂದ ನಾಗಾಭರಣ
ಡಾ ರಾಜ್​ಕುಮಾರ್ ಅವರ ಒಂದು ಸನ್ನೆಗೆ ಲಕ್ಷ ಜನ ಸೇರ್ತಿದ್ರು: ಸಾಧು ಕೋಕಿಲ
ಡಾ ರಾಜ್​ಕುಮಾರ್ ಅವರ ಒಂದು ಸನ್ನೆಗೆ ಲಕ್ಷ ಜನ ಸೇರ್ತಿದ್ರು: ಸಾಧು ಕೋಕಿಲ
ಹೆಚ್ಚುವರಿ ಉತ್ತರ ಪತ್ರಿಕೆ ನೀಡದ ಮೇಲ್ವಿಚಾರಕ: ವಿದ್ಯಾರ್ಥಿನಿ ಕಣ್ಣೀರು
ಹೆಚ್ಚುವರಿ ಉತ್ತರ ಪತ್ರಿಕೆ ನೀಡದ ಮೇಲ್ವಿಚಾರಕ: ವಿದ್ಯಾರ್ಥಿನಿ ಕಣ್ಣೀರು
ಪ್ರತಿಭಟನೆಗಳಿಗೆ ಬಂದ್ ಒಂದೇ ಅಸ್ತ್ರವಲ್ಲ, ಅದು ಬ್ರಹ್ಮಾಸ್ತ್ರ: ನಾರಾಯಣಗೌಡ
ಪ್ರತಿಭಟನೆಗಳಿಗೆ ಬಂದ್ ಒಂದೇ ಅಸ್ತ್ರವಲ್ಲ, ಅದು ಬ್ರಹ್ಮಾಸ್ತ್ರ: ನಾರಾಯಣಗೌಡ
ಉತ್ತರ ಕನ್ನಡ ಜಿಲ್ಲೆಲಿ ಅತಿ ಹೆಚ್ಚು ಉಷ್ಣಾಂಶ ದಾಖಲು: ಡಿಸಿ ಹೇಳಿದ್ದಿಷ್ಟು
ಉತ್ತರ ಕನ್ನಡ ಜಿಲ್ಲೆಲಿ ಅತಿ ಹೆಚ್ಚು ಉಷ್ಣಾಂಶ ದಾಖಲು: ಡಿಸಿ ಹೇಳಿದ್ದಿಷ್ಟು
ಗಿರ್‌ನಲ್ಲಿ ಪ್ರಧಾನಿ ಮೋದಿಯ ಸಿಂಹ ಸಫಾರಿಯ ಕ್ಷಣಗಳ ವಿಡಿಯೋ ಇಲ್ಲಿದೆ
ಗಿರ್‌ನಲ್ಲಿ ಪ್ರಧಾನಿ ಮೋದಿಯ ಸಿಂಹ ಸಫಾರಿಯ ಕ್ಷಣಗಳ ವಿಡಿಯೋ ಇಲ್ಲಿದೆ
ಹೈಕಮಾಂಡ್ ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ: ಸಿದ್ದರಾಮಯ್ಯ
ಹೈಕಮಾಂಡ್ ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ: ಸಿದ್ದರಾಮಯ್ಯ
ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ