ಕಾಫಿನಾಡಲ್ಲಿ ಸರಣಿ ಅಪಘಾತ; ಕಾರು, ಟಿಪ್ಪರ್​, ಬೈಕ್​ ನಡುವೆ ಡಿಕ್ಕಿಯಾಗಿ ದಂಪತಿ ಸಾವು, 1 ವರ್ಷದ ಮಗುವಿಗೆ ಗಾಯ

ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಸಮೀಪ ಕಾರು, ಟಿಪ್ಪರ್​, ಬೈಕ್​ ನಡುವೆ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್​ನಲ್ಲಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದು, 1 ವರ್ಷದ ಮಗುವಿಗೆ ಗಾಯಗಳಾಗಿವೆ. ಅಪಘಾತದ ಬಳಿಕ ಟಿಪ್ಪರ್ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ದಂಪತಿ ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಾಫಿನಾಡಲ್ಲಿ ಸರಣಿ ಅಪಘಾತ; ಕಾರು, ಟಿಪ್ಪರ್​, ಬೈಕ್​ ನಡುವೆ ಡಿಕ್ಕಿಯಾಗಿ ದಂಪತಿ ಸಾವು, 1 ವರ್ಷದ ಮಗುವಿಗೆ ಗಾಯ
ಚಿಕ್ಕಮಗಳೂರಿನಲ್ಲಿ ಸರಣಿ ಅಪಘಾತ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಆಯೇಷಾ ಬಾನು

Updated on:Sep 13, 2023 | 1:26 PM

ಚಿಕ್ಕಮಗಳೂರು, ಸೆ.13: ಕಾಫಿನಾಡಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದೆ(Serial Accident). ಕಾರು, ಟಿಪ್ಪರ್​, ಬೈಕ್​ ನಡುವೆ ಅಪಘಾತ ಸಂಭವಿಸಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಸಮೀಪ ನಿನ್ನೆ ಕಾರು, ಟಿಪ್ಪರ್​, ಬೈಕ್​ ನಡುವೆ ಸರಣಿ ಅಪಘಾತ ಸಂಭವಿಸಿದೆ(Accident Death). ಘಟನೆಯಲ್ಲಿ ಬೈಕ್​ನಲ್ಲಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದು, 1 ವರ್ಷದ ಮಗುವಿಗೆ ಗಾಯಗಳಾಗಿವೆ. ಶಿವಮೊಗ್ಗ ಮೂಲದ ಸಯ್ಯದ್ ಆಸೀಫ್(38), ಮಾಜಿನಾ(33) ಮೃತ ದುರ್ದೈವಿಗಳು. ಅಪಘಾತದ ಬಳಿಕ ಟಿಪ್ಪರ್ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ದಂಪತಿ ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಇನ್ನು ಮತ್ತೊಂದೆಡೆ ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಬೆಂಗಳೂರು ಹೊರವಲಯದ ಸರ್ಜಾಪುರ ಸಮೀಪದ ದೊಮ್ಮಸಂದ್ರ ವರ್ತೂರು ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ತಮಿಳುನಾಡು ಮೂಲದ ಸದನ್ ಕುಮಾರ್(38) ಮೃತ ದುರ್ದೈವಿ. ಗಾಯಾಳು ಶಕ್ತಿವೇಲು ಮತ್ತು ವಿಘ್ನೇಶ್ ನಗರದ ಬೋರಿಂಗ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಾಲಕನ ಅತಿ ವೇಗ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ನೆಲಮಂಗಲ ಟೌನ್ ಪೊಲೀಸರ ಭರ್ಜರಿ ಕಾರ್ಯಾಚರಣೆ; ಬೈಕ್ ಕಳ್ಳತನ ಮಾಡುತ್ತಿದ್ದ ಐವರು ಅರೆಸ್ಟ್

ದೇವರ ಸನ್ನಿಧಿಯಿಂದ ಮರಳುವಾಗ ಅಪಘಾತ

ದೇವರ ದರ್ಶನ ಮುಗಿಸಿ ವಾಪಸ್​​​ ಆಗ್ತಿದ್ದಾಗ ಕ್ಯಾಂಟರ್ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಸವನ ಬೆಟ್ಟದ ಬಳಿ ಸಂಭವಿಸಿದೆ. ಈ ಘಟನೆಯಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, 30ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಮಳವಳ್ಳಿ ತಾಲ್ಲೂಕಿನ ತಮ್ಮಡಹಳ್ಳಿ ಗ್ರಾಮದ ಭಕ್ತರು, ಬಸವೇಶ್ವರ ದೇವರ ದರ್ಶನಕ್ಕೆ ತೆರಳಿದ್ರು. ದರ್ಶನ ಮುಗಿಸಿ ವಾಪಸಾಗುವ ವೇಳೆ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನ ಹಲಗೂರು ಹಾಗೂ ಮಳವಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:25 pm, Wed, 13 September 23

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು