ಶಕ್ತಿ ಯೋಜನೆ ಎಫೆಕ್ಟ್: 5 ಗಂಟೆ ತಡವಾಗಿ ಬಂದ ಸರ್ಕಾರಿ ಬಸ್​, ರೊಚ್ಚಿಗೆದ್ದ ಮಹಿಳೆಯರಿಂದ ಗಲಾಟೆ

ಸರ್ಕಾರಿ ಬಸ್ ತಡವಾಗಿ ಬಂದಿದ್ದಕ್ಕೆ ರೊಚ್ಚಿಗೆದ್ದ ಮಹಿಳೆಯರಿಂದ ಬಸ್ ತಡೆದು ಗಲಾಟೆ ಮಾಡಿರುವಂತಹ ಘಟನೆ ಜಿಲ್ಲೆಯ ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ಬಸ್ ನಿಲ್ದಾಣದಲ್ಲಿ ನಡೆದಿದೆ. ಅದೇ ರೀತಿಯಾಗಿ ಪುಣ್ಯಕ್ಷೇತ್ರಗಳ ದರ್ಶನಕ್ಕೆ ಮಹಿಳೆಯರ ದಂಡು ಆಗಮಿಸಿದನ್ನು ನೋಡಿ ಚಾಲಕ ಬಸ್​ ನಿಲ್ಲಿಸದೆ ಹೋಗಿದ್ದಾರೆ.

Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jun 30, 2023 | 11:15 PM

ಚಿಕ್ಕಮಗಳೂರು: ಸರ್ಕಾರಿ ಬಸ್ ತಡವಾಗಿ ಬಂದಿದ್ದಕ್ಕೆ ರೊಚ್ಚಿಗೆದ್ದ ಮಹಿಳೆಯ (women) ರಿಂದ ಬಸ್ ತಡೆದು ಗಲಾಟೆ ಮಾಡಿರುವಂತಹ ಘಟನೆ ಜಿಲ್ಲೆಯ ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ಬಸ್ ನಿಲ್ದಾಣದಲ್ಲಿ ನಡೆದಿದೆ. ನಿತ್ಯ ಬೇಲೂರಿನಿಂದ ಮೂಡಿಗೆರೆಗೆ ಕೆಲಸಕ್ಕಾಗಿ ಮಹಿಳೆಯರು ಬರುತ್ತಿದ್ದರು. ವಾಪಸ್​ ಬೇಲೂರಿಗೆ ತೆರಳಲು ಸಂಜೆ 5 ಗಂಟೆಯಿಂದ ಮಹಿಳೆಯರು ಕಾಯುತ್ತಿದ್ದರು. ಈ ವೇಳೆ ಬಸ್ ಬರುತ್ತಿದ್ದಂತೆ ಅಡ್ಡಲಾಗಿ ನಿಂತು ಮಹಿಳಾ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

KSRTC ಬಸ್ಸಿನ ಹಿಂದೆ ಮಹಿಳೆಯರು ಓಡಿದ್ರು ನಿಲ್ಲಿಸದ ಡ್ರೈವರ್

ಶಕ್ತಿ ಯೋಜನೆ ಎಫೆಕ್ಟ್​ಯಿಂದಾಗಿ ಪುಣ್ಯಕ್ಷೇತ್ರಗಳ ದರ್ಶನಕ್ಕೆ ಮಹಿಳೆಯರ ದಂಡು ಆಗಮಿಸಿದೆ. ಮಹಿಳಾ ಪ್ರಯಾಣಿಕರ ದಂಡು ನೋಡಿ ಚಾಲಕ ಬಸ್​ ನಿಲ್ಲಿಸದೆ ಹೋಗಿದ್ದಾರೆ. KSRTC ಬಸ್‌ ಹಿಂದೆ ಮಹಿಳೆಯರು ಓಡಿದರೂ ಚಾಲಕ ಬಸ್ ನಿಲ್ಲಿಸಿಲ್ಲ. ಹಾಗಾಗಿ ಕೆಎಸ್‌ಆರ್‌ಟಿಸಿ ಬಸ್‌ ಚಾಲಕನ ವಿರುದ್ಧ ಮಹಿಳಾ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗದಗ ಜಿಲ್ಲೆಯಿಂದ ಪುಣ್ಯಕ್ಷೇತ್ರಗಳ ದರ್ಶನಕ್ಕೆ ಮಹಿಳೆಯರು ಆಗಮಿಸಿದ್ದು, ಇತ್ತ ಬಸ್​ ಇಲ್ಲದೇ ಚಿಕ್ಕಮಗಳೂರು ಜಿಲ್ಲೆಯ ಕಳಸ ಬಸ್ ನಿಲ್ದಾಣದಲ್ಲಿ ಮಹಿಳೆಯರು ಪರದಾಡಿದ್ದಾರೆ.

ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಬಿಎಂಟಿಸಿ ಸಾರಿಗೆ ಸಂಸ್ಥೆಯಿಂದ ಗುಡ್​ ನ್ಯೂಸ್​: ಜುಲೈ 15 ರವರೆಗೆ ಸಾಮಾನ್ಯ ಸೇವೆಯಲ್ಲಿ ಪ್ರಯಾಣಿಸಲು ಅವಕಾಶ

ರಾಜ್ಯ ಸರ್ಕಾರದ ಶಕ್ತಿ ಯೋಜನೆ ವಿರೋಧಿಸಿ ಎಬಿವಿಪಿ ಪ್ರತಿಭಟನೆ

ಮೈಸೂರು: ಶಕ್ತಿ ಯೋಜನೆ ವಿರೋಧಿಸಿ ಸರ್ಕಾರದ ವಿರುದ್ಧ ಜಿಲ್ಲೆಯ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಎಬಿವಿಪಿ ಪ್ರತಿಭಟನೆ ಮಾಡಿದ್ದಾರೆ. ಮಹಿಳೆಯರ ಉಚಿತ ಬಸ್ ಪ್ರಯಾಣದಿಂದ ವಿದ್ಯಾರ್ಥಿಗಳಿಗೆ ಬಸ್ ಪ್ರಯಾಣ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಕೆಎಸ್​ಆರ್​ಟಿಸಿ ಬಸ್‌ಗಳಲ್ಲಿ ಮಹಿಳೆಯರೇ ಹೆಚ್ಚಾಗಿ ಪ್ರಯಾಣ ಮಾಡುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಬಸ್ ಪ್ರಯಾಣ ಮಾಡಲು ಕಷ್ಟವಾಗುತ್ತಿದೆ.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ನಿವೃತ್ತ ಶಿಕ್ಷಕಿಗೆ ಬೀಳ್ಕೊಡುಗೆ ಹಬ್ಬ, ಮನೆ ಮನೆಗಳಿಂದ ಸೀರೆ, ಉಡುಗೊರೆ ನೀಡಿದ ಜನರು

ಸರಿಯಾದ ಸಮಯಕ್ಕೆ ಬಸ್‌ಗಳ ವ್ಯವಸ್ಥೆ ಇಲ್ಲ. ಶಾಲಾ ಕಾಲೇಜುಗಳಿಗೆ ತೆರಳಲು ಸಮಸ್ಯೆಯಾಗುತ್ತಿದೆ. ಬಸ್‌ಗಳ ಸಂಖ್ಯೆ ಹೆಚ್ಚಾಗಬೇಕು. ಪುರುಷ ವಿದ್ಯಾರ್ಥಿಗಳಿಗೂ ಉಚಿತ ಬಸ್ ವ್ಯವಸ್ಥೆ ಮಾಡಬೇಕು. ಕೆಎಸ್​ಆರ್ ಟಿಸಿ ಬಸ್‌ಗಳನ್ನೇ ಅವಲಂಬಿಸಿರುವ ವಿದ್ಯಾರ್ಥಿಗಳಿಗೆ ಓದಲು ಸಮಸ್ಯೆಯಾಗುತ್ತಿದೆ. ರಾಜ್ಯ ಸರ್ಕಾರ ಎಲ್ಲಾ ವಿದ್ಯಾರ್ಥಿಗಳಿಗೆ ಸಹಕಾರ ಆಗುವ ರೀತಿಯಲ್ಲಿ ಕೆಲಸ ಮಾಡಬೇಕು ಎಬಿವಿಪಿ ಒತ್ತಾಯ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
‘ಸೂಪರ್​ ಆಗಿದೆ’: ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ನೋಡಿ ಕನ್ನಡಿಗರು ಖುಷ್
‘ಸೂಪರ್​ ಆಗಿದೆ’: ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ನೋಡಿ ಕನ್ನಡಿಗರು ಖುಷ್
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!
ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂದಾಗ ಕುಮಾರಸ್ವಾಮಿ ಉಡಾಫೆ ಉತ್ತರ
ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂದಾಗ ಕುಮಾರಸ್ವಾಮಿ ಉಡಾಫೆ ಉತ್ತರ
ಕೇಂಪೇಗೌಡ 515ನೇ ಜಯಂತಿ: ನಾಡಪ್ರಭುಗೆ ಪುಷ್ಪ ನಮನ ಸಲ್ಲಿಸಿದ ಸಿದ್ದರಾಮಯ್ಯ
ಕೇಂಪೇಗೌಡ 515ನೇ ಜಯಂತಿ: ನಾಡಪ್ರಭುಗೆ ಪುಷ್ಪ ನಮನ ಸಲ್ಲಿಸಿದ ಸಿದ್ದರಾಮಯ್ಯ
ದೆಹಲಿಗೆ ತೆರಳಿ ಪ್ರಧಾನಿ ಮೋದಿ, ಹಲವಾರು ಸಚಿವರನ್ನು ಭೇಟಿಯಾಗಲಿರುವ ಸಿಎಂ
ದೆಹಲಿಗೆ ತೆರಳಿ ಪ್ರಧಾನಿ ಮೋದಿ, ಹಲವಾರು ಸಚಿವರನ್ನು ಭೇಟಿಯಾಗಲಿರುವ ಸಿಎಂ
ಉಕ್ಕಿ ಹರಿಯುತ್ತಿದೆ ನೇತ್ರಾವತಿ, ನದಿಪಾತ್ರದ ಜನ ಎಚ್ಚರವಹಿಸುವಂತೆ ಸೂಚನೆ
ಉಕ್ಕಿ ಹರಿಯುತ್ತಿದೆ ನೇತ್ರಾವತಿ, ನದಿಪಾತ್ರದ ಜನ ಎಚ್ಚರವಹಿಸುವಂತೆ ಸೂಚನೆ