ಚಿಕ್ಕಮಗಳೂರು: ಸರ್ಕಾರಿ ಬಸ್ ತಡವಾಗಿ ಬಂದಿದ್ದಕ್ಕೆ ರೊಚ್ಚಿಗೆದ್ದ ಮಹಿಳೆಯ (women) ರಿಂದ ಬಸ್ ತಡೆದು ಗಲಾಟೆ ಮಾಡಿರುವಂತಹ ಘಟನೆ ಜಿಲ್ಲೆಯ ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ಬಸ್ ನಿಲ್ದಾಣದಲ್ಲಿ ನಡೆದಿದೆ. ನಿತ್ಯ ಬೇಲೂರಿನಿಂದ ಮೂಡಿಗೆರೆಗೆ ಕೆಲಸಕ್ಕಾಗಿ ಮಹಿಳೆಯರು ಬರುತ್ತಿದ್ದರು. ವಾಪಸ್ ಬೇಲೂರಿಗೆ ತೆರಳಲು ಸಂಜೆ 5 ಗಂಟೆಯಿಂದ ಮಹಿಳೆಯರು ಕಾಯುತ್ತಿದ್ದರು. ಈ ವೇಳೆ ಬಸ್ ಬರುತ್ತಿದ್ದಂತೆ ಅಡ್ಡಲಾಗಿ ನಿಂತು ಮಹಿಳಾ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಕ್ತಿ ಯೋಜನೆ ಎಫೆಕ್ಟ್ಯಿಂದಾಗಿ ಪುಣ್ಯಕ್ಷೇತ್ರಗಳ ದರ್ಶನಕ್ಕೆ ಮಹಿಳೆಯರ ದಂಡು ಆಗಮಿಸಿದೆ. ಮಹಿಳಾ ಪ್ರಯಾಣಿಕರ ದಂಡು ನೋಡಿ ಚಾಲಕ ಬಸ್ ನಿಲ್ಲಿಸದೆ ಹೋಗಿದ್ದಾರೆ. KSRTC ಬಸ್ ಹಿಂದೆ ಮಹಿಳೆಯರು ಓಡಿದರೂ ಚಾಲಕ ಬಸ್ ನಿಲ್ಲಿಸಿಲ್ಲ. ಹಾಗಾಗಿ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ವಿರುದ್ಧ ಮಹಿಳಾ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗದಗ ಜಿಲ್ಲೆಯಿಂದ ಪುಣ್ಯಕ್ಷೇತ್ರಗಳ ದರ್ಶನಕ್ಕೆ ಮಹಿಳೆಯರು ಆಗಮಿಸಿದ್ದು, ಇತ್ತ ಬಸ್ ಇಲ್ಲದೇ ಚಿಕ್ಕಮಗಳೂರು ಜಿಲ್ಲೆಯ ಕಳಸ ಬಸ್ ನಿಲ್ದಾಣದಲ್ಲಿ ಮಹಿಳೆಯರು ಪರದಾಡಿದ್ದಾರೆ.
ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಬಿಎಂಟಿಸಿ ಸಾರಿಗೆ ಸಂಸ್ಥೆಯಿಂದ ಗುಡ್ ನ್ಯೂಸ್: ಜುಲೈ 15 ರವರೆಗೆ ಸಾಮಾನ್ಯ ಸೇವೆಯಲ್ಲಿ ಪ್ರಯಾಣಿಸಲು ಅವಕಾಶ
ಮೈಸೂರು: ಶಕ್ತಿ ಯೋಜನೆ ವಿರೋಧಿಸಿ ಸರ್ಕಾರದ ವಿರುದ್ಧ ಜಿಲ್ಲೆಯ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಎಬಿವಿಪಿ ಪ್ರತಿಭಟನೆ ಮಾಡಿದ್ದಾರೆ. ಮಹಿಳೆಯರ ಉಚಿತ ಬಸ್ ಪ್ರಯಾಣದಿಂದ ವಿದ್ಯಾರ್ಥಿಗಳಿಗೆ ಬಸ್ ಪ್ರಯಾಣ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರೇ ಹೆಚ್ಚಾಗಿ ಪ್ರಯಾಣ ಮಾಡುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಬಸ್ ಪ್ರಯಾಣ ಮಾಡಲು ಕಷ್ಟವಾಗುತ್ತಿದೆ.
ಇದನ್ನೂ ಓದಿ: ಚಿತ್ರದುರ್ಗದಲ್ಲಿ ನಿವೃತ್ತ ಶಿಕ್ಷಕಿಗೆ ಬೀಳ್ಕೊಡುಗೆ ಹಬ್ಬ, ಮನೆ ಮನೆಗಳಿಂದ ಸೀರೆ, ಉಡುಗೊರೆ ನೀಡಿದ ಜನರು
ಸರಿಯಾದ ಸಮಯಕ್ಕೆ ಬಸ್‌ಗಳ ವ್ಯವಸ್ಥೆ ಇಲ್ಲ. ಶಾಲಾ ಕಾಲೇಜುಗಳಿಗೆ ತೆರಳಲು ಸಮಸ್ಯೆಯಾಗುತ್ತಿದೆ. ಬಸ್‌ಗಳ ಸಂಖ್ಯೆ ಹೆಚ್ಚಾಗಬೇಕು. ಪುರುಷ ವಿದ್ಯಾರ್ಥಿಗಳಿಗೂ ಉಚಿತ ಬಸ್ ವ್ಯವಸ್ಥೆ ಮಾಡಬೇಕು. ಕೆಎಸ್ಆರ್ ಟಿಸಿ ಬಸ್‌ಗಳನ್ನೇ ಅವಲಂಬಿಸಿರುವ ವಿದ್ಯಾರ್ಥಿಗಳಿಗೆ ಓದಲು ಸಮಸ್ಯೆಯಾಗುತ್ತಿದೆ. ರಾಜ್ಯ ಸರ್ಕಾರ ಎಲ್ಲಾ ವಿದ್ಯಾರ್ಥಿಗಳಿಗೆ ಸಹಕಾರ ಆಗುವ ರೀತಿಯಲ್ಲಿ ಕೆಲಸ ಮಾಡಬೇಕು ಎಬಿವಿಪಿ ಒತ್ತಾಯ ಮಾಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.