AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಾಮಸೇನೆಯ ದತ್ತಮಾಲಾ ಅಭಿಯಾನಕ್ಕೆ ಚಾಲನೆ, ನ.5 ರಂದು ಇನಾಂ ದತ್ತಾತ್ರೇಯ ಪೀಠದಲ್ಲಿ ದತ್ತಪಾದುಕೆ ದರ್ಶನ

ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ ಶ್ರೀರಾಮಸೇನೆಯು ದತ್ತಮಾಲಾಧಾರಣೆ ಮಾಡುವ ಮೂಲಕ ದತ್ತಮಾಲಾ ಅಭಿಯಾನಕ್ಕೆ ಚಾಲನೆ ನೀಡಿದೆ. ಈ ಮಾಲಾಧಾರಿಗಳು ನ.5 ರಂದು ಚಿಕ್ಕಮಗಳೂರು ತಾಲೂಕಿನ ಇನಾಂ‌ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ದತ್ತಪಾದುಕೆ ದರ್ಶನ ಪಡೆಯಲಿದ್ದಾರೆ.

ಶ್ರೀರಾಮಸೇನೆಯ ದತ್ತಮಾಲಾ ಅಭಿಯಾನಕ್ಕೆ ಚಾಲನೆ, ನ.5 ರಂದು ಇನಾಂ ದತ್ತಾತ್ರೇಯ ಪೀಠದಲ್ಲಿ ದತ್ತಪಾದುಕೆ ದರ್ಶನ
ಶ್ರೀರಾಮಸೇನೆಯ ದತ್ತಮಾಲಾ ಅಭಿಯಾನಕ್ಕೆ ಚಾಲನೆ
TV9 Web
| Updated By: ಆಯೇಷಾ ಬಾನು|

Updated on: Oct 30, 2023 | 12:29 PM

Share

ಚಿಕ್ಕಮಗಳೂರು, ಅ.30: ಶ್ರೀರಾಮಸೇನೆಯ 20ನೇ ವರ್ಷದ ದತ್ತಮಾಲಾ ಅಭಿಯಾನಕ್ಕೆ ದತ್ತಮಾಲಾಧಾರಣೆ (Datta mala Dharane) ಮಾಡುವ ಮೂಲಕ ಚಾಲನೆ ನೀಡಲಾಗಿದೆ. ಚಿಕ್ಕಮಗಳೂರು ನಗರದ ಶಂಕರಮಠದಲ್ಲಿ ಶ್ರೀರಾಮಸೇನೆಯ (Sri Ram Sena) ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಸೇರಿ 100ಕ್ಕೂ ಹೆಚ್ಚು ಶ್ರೀರಾಮಸೇನೆ ಕಾರ್ಯಕರ್ತರು ಮಾಲಾಧಾರಣೆ ಮಾಡಿ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಇಂದಿನಿಂದ ಏಳು ದಿನ ದತ್ತಮಾಲಾ ಅಭಿಯಾನ ನಡೆಯಲಿದೆ. ಜಿಲ್ಲೆ ಸೇರಿ ರಾಜ್ಯಾದ್ಯಂತ ಶ್ರೀರಾಮ ಸೇನೆ ದತ್ತಮಾಲಾ ಅಭಿಯಾನಕ್ಕೆ ಚಾಲನೆ ನೀಡಿದೆ.

ಈ ಮಾಲಾಧಾರಿಗಳು ನ.5 ರಂದು ಚಿಕ್ಕಮಗಳೂರು ತಾಲೂಕಿನ ಇನಾಂ‌ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ದತ್ತಪಾದುಕೆ ದರ್ಶನ ಪಡೆಯಲಿದ್ದಾರೆ. ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ ದತ್ತಮಾಲಾ ಅಭಿಯಾನ ನಡೆಸಲಾಗುತ್ತಿದೆ. ಇನ್ನು ಶ್ರೀರಾಮ ಸೇನೆಯಿಂದ ದತ್ತಮಾಲಾ ಅಭಿಯಾನ ನಡೆಯುವುದರಿಂದ ನವೆಂಬರ್ 4ರ ಬೆಳಿಗ್ಗೆ 6ರಿಂದ ನ.6ರ ಬೆಳಿಗ್ಗೆ 10 ಗಂಟೆ ತನಕ ಅಂದರೆ ಮೂರು ದಿನದ ತನಕ ಇನಾಂ ದತ್ತಾತ್ರೇಯ ಬಾಬಾಬುಡನಗಿರಿ ಸ್ವಾಮಿ ದರ್ಗಾ, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಹೊನ್ನಮ್ಮನಹಳ್ಳ, ಮಾಣಿಕ್ಯಧಾರಾ ಜಲಪಾತ ಹಾಗೂ ಗಾಳಿಕೆರೆಗೆ ಬೇರೆ ಪ್ರವಾಸಿಗರು ಬರುವುದನ್ನು ನಿರ್ಬಂಧಿಸಲಾಗಿದೆ. ಭಾರಿ ವಾಹನಗಳ ಸಂಚಾರವನ್ನೂ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.

ಇದನ್ನೂ ಓದಿ: ನಾಳೆ (ನ. 13) ಶ್ರೀರಾಮಸೇನೆಯಿಂದ ದತ್ತಮಾಲಾ ಅಭಿಯಾನ: ಬಿಗಿ ಪೊಲೀಸ್ ಬಂದೋಬಸ್ತ್, ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ಇನಾಂ‌ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾವನ್ನು ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ ಶ್ರೀರಾಮಸೇನೆ 7 ದಿನಗಳ ದತ್ತಮಾಲಾ ಅಭಿಯಾನವನ್ನು ಆರಂಭಿಸಿದೆ. ಈ ಬಾರಿ 20ನೇ ವರ್ಷದ ದತ್ತಮಾಲಾ ಅಭಿಯಾನ ನಡೆಯುತ್ತಿದೆ. ರಾಜ್ಯಾದ್ಯಂತ ಕಾರ್ಯಕರ್ತರು ದತ್ತಮಾಲಾಧಾರಣೆ ಮಾಡಿ ಏಳು ದಿನ ಅಭಿಯಾನ ಕೈಗೊಳ್ಳುತ್ತಾರೆ. ಕೊನೆಗೆ ಇನಾಂ ದತ್ತಾತ್ರೇಯ ಪೀಠದಲ್ಲಿ ನ.5 ರಂದು ದತ್ತಪಾದುಕೆ ದರ್ಶನ ಪಡೆಯುತ್ತಾರೆ. ನ.2 ರಂದು ದತ್ತ ದೀಪೋತ್ಸವ, ನ. 4 ರಂದು ಪಡಿ ಸಂಗ್ರಹ ಕಾರ್ಯ ನಡೆಯುತ್ತದೆ. ನವೆಂಬರ್ 5 ರಂದು ಶೋಭಾಯಾತ್ರೆ ನಡೆಯುತ್ತದೆ. ಬಳಿಕವೇ ಇದೇ ಸ್ಥಳದಲ್ಲಿ ಧರ್ಮಸಭೆ ನಡೆಸಿ ದತ್ತಪೀಠಕ್ಕೆ ತೆರಳಿ, ದತ್ತ ಪಾದುಕೆಗಳ ದರ್ಶನ ಪಡೆದ ನಂತರ, ಹೋಮ-ಹವನ ಹಾಗೂ ಪ್ರಸಾದ ವಿನಿಯೋಗ ನಡೆಯುತ್ತದೆ.

ಚಿಕ್ಕಮಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ