ನಾಳೆ (ನ. 13) ಶ್ರೀರಾಮಸೇನೆಯಿಂದ ದತ್ತಮಾಲಾ ಅಭಿಯಾನ: ಬಿಗಿ ಪೊಲೀಸ್ ಬಂದೋಬಸ್ತ್, ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ನಾಳೆ (ನ. 13) ಶ್ರೀರಾಮಸೇನೆಯಿಂದ ದತ್ತಮಾಲಾ ಅಭಿಯಾನವಿದ್ದು, ಸಾವಿರಾರು ಭಕ್ತರು ದತ್ತಪೀಠದಲ್ಲಿ ದತ್ತ ಪಾದುಕೆ ದರ್ಶನ ಪಡೆಯಲಿದ್ದಾರೆ.

ನಾಳೆ (ನ. 13) ಶ್ರೀರಾಮಸೇನೆಯಿಂದ ದತ್ತಮಾಲಾ ಅಭಿಯಾನ: ಬಿಗಿ ಪೊಲೀಸ್ ಬಂದೋಬಸ್ತ್, ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ
ನಾಳೆ ಶ್ರೀರಾಮಸೇನೆಯಿಂದ ದತ್ತಮಾಲಾ ಅಭಿಯಾನ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Nov 12, 2022 | 11:04 PM

ಚಿಕ್ಕಮಗಳೂರು: ನಾಳೆ (ನ. 13) ಶ್ರೀರಾಮಸೇನೆಯಿಂದ ದತ್ತಮಾಲಾ ಅಭಿಯಾನವಿದ್ದು, (Dattamala Abhiyan)  ಸಾವಿರಾರು ಭಕ್ತರು ದತ್ತಪೀಠದಲ್ಲಿ ದತ್ತ ಪಾದುಕೆ ದರ್ಶನ ಪಡೆಯಲಿದ್ದಾರೆ. ಈ ಹಿನ್ನೆಲೆಯಲ್ಲಿ ಮುಳ್ಳಯ್ಯನಗಿರಿ, ದತ್ತಪೀಠ, ಮಾಣಿಕ್ಯಧಾರ ಸೇರಿ ಸುತ್ತಮುತ್ತಲಿನ ಪ್ರದೇಶಗಳಿಗೆ ನಾಳೆ ಬೆಳಗ್ಗೆ 6 ರಿಂದ ಸೋಮವಾರ ಬೆಳಗ್ಗೆ 10 ಗಂಟೆವರೆಗೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ನಗರದಲ್ಲಿ ಶ್ರೀರಾಮ ಸೇನೆಯಿಂದ ಬೃಹತ್ ಶೋಭಾಯಾತ್ರೆ ನಡೆಯಲಿದ್ದು ಬಳಿಕ ದತ್ತಪೀಠಕ್ಕೆ ಭಕ್ತರು ತೆರಳಲಿದ್ದಾರೆ. ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸೇರಿ ಹಲವರು ಭಾಗಿಯಾಗಲಿದ್ದಾರೆ. ದತ್ತ ಅಭಿಯಾನ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಎಸ್​ಪಿ, ಎಎಸ್ಪಿ ಸೇರಿ ಮೂವರು ಡಿವೈಎಸ್ಪಿ, 18 ಮಂದಿ ಸಿಪಿಐ, 67 ಮಂದಿ ಪಿಎಸ್ಐ, 147 ಮಂದಿ ಎಎಸ್​ಐ ಸೇರಿದಂತೆ ಸಾವಿರಕ್ಕೂ ಅಧಿಕ ಮಂದಿ ಪೊಲೀಸರ ನಿಯೋಜನೆ ಮಾಡಲಾಗಿದೆ.

ವಾಹನ ಸಂಚಾರಕ್ಕೆ ನಿರ್ಬಂಧ

ನಗರದಲ್ಲಿ ಶೋಭಾಯಾತ್ರೆ ನಡೆಯುವ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ವಾಹನಗಳ ಸುಗಮ ಸಂಚಾರಕ್ಕಾಗಿ ವಾಹನ ಸಂಚಾರ ಮತ್ತು ನಿಲುಗಡೆ ನಿಷೇಧಿಸಲಾಗಿದೆ. ನವೆಂಬರ್ 13ರಂದು ಬೆಳಗ್ಗೆ 9 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಬಸವನಹಳ್ಳಿ ಮುಖ್ಯರಸ್ತೆ ಮತ್ತು ಎಂ.ಜಿಯಲ್ಲಿ ವಾಹನಗಳ ಸಂಚಾರ ಮತ್ತು ನಿಲುಗಡೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:57 pm, Sat, 12 November 22

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು